Narendra Modi: ಫೆಬ್ರವರಿ 6ಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತೆ ಕರ್ನಾಟಕಕ್ಕೆ, ಇಲ್ಲಿದೆ ವೇಳಾಪಟ್ಟಿ

ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 6ರಂದು ರಾಜ್ಯಕ್ಕೆ ಬರಲಿದ್ದು, ಧಾರವಾಡ ಮತ್ತು ತುಮಕೂರು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

Narendra Modi: ಫೆಬ್ರವರಿ 6ಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತೆ ಕರ್ನಾಟಕಕ್ಕೆ, ಇಲ್ಲಿದೆ ವೇಳಾಪಟ್ಟಿ
ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Jan 21, 2023 | 3:04 PM

ಬೆಂಗಳೂರು: ರಾಜ್ಯದಲ್ಲಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ (BJP) ಕೇಂದ್ರ ನಾಯಕರು ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಈಗಾಗಲೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ರಾಜ್ಯಕ್ಕೆ ಬಂದಿದ್ದು, ಬರುವ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಹೌದು ಈ ವರ್ಷ ಆರಂಭವಾಗುತ್ತಿದ್ದಂತೆ ಎರಡು ಬಾರಿ ರಾಜ್ಯ ಪ್ರವಾಸ ಮಾಡಿರುವ ಪ್ರಧಾನಿ ಮೋದಿ ಫೆಬ್ರವರಿ 6ರಂದು ರಾಜ್ಯಕ್ಕೆ ಬರಲಿದ್ದಾರೆ. ವಿಶೇಷವೆಂದರೆ ಈ ಬಾರಿಯೂ ಸರ್ಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮೊನ್ನೆ ಜನವರಿ 19 ರಂದು ಕಲಬುರಗಿ ಮತ್ತು ಯಾದಗಿರಿಗೆ ಭೇಟಿ ನೀಡಿ ಸರ್ಕಾರದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು. ಇದಕ್ಕೂ ಮುಂಚೆ ಜನವರಿ 12 ರಂದು ಸ್ವಾಮಿ ವಿವೇಕಾನಂದರ ಜನ್ಮದಿನದ ಅಂಗವಾಗಿ ಹುಬ್ಬಳ್ಳಿ-ಧಾರವಾಡದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮ ಯುಜನೋತ್ಸವಕ್ಕೆ ಚಾಲನೆ ನೀಡಿದರು.

ಈಗ ಮತ್ತೆ ಫೆಬ್ರವರಿ 6 ರಂದು ಮತ್ತೆ ಧಾರವಾಡಕ್ಕೆ (Dharwad) ಭೇಟಿ ನೀಡಲಿದ್ದು ಧಾರವಾಡದ ಐಐಟಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ತದನಂತರ ತುಮಕೂರು (Tumkur) ಜಿಲ್ಲೆಯ ಜಿಲ್ಲೆಯ ಗುಬ್ಬಿಗೆ ಭೇಟಿ ನೀಡಿ ಗುಬ್ಬಿ ಬಳಿಯ ಹೆಚ್​ಎಎಲ್​​ ಹೆಲಿಕಾಪ್ಟರ್​ ಘಟಕ ಉದ್ಘಾಟಿಸಲಿದ್ದಾರೆ. ನಂತರ ಫೆಬ್ರವರಿ 27 ರಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ಪ್ರಧಾನಿ ಮೋದಿ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿಯಗುವ ಹಿನ್ನೆಲೆ ಪಕ್ಷದ ವತಿಯಿಂದ ಜನರನ್ನು ಸೇರಿಸುವ ಬಗ್ಗೆ ಬಿಜೆಪಿ ರಾಜ್ಯ ನಾಯಕರಿಗೆ ಬಿ.ಎಲ್. ಸಂತೋಷ್ ಸೂಚನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:02 pm, Sat, 21 January 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ