ಜೂನ್ 20, 21 ಎರಡು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ
ಜೂನ್ 20, 21ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಜೂನ್ 20ರಂದು ಬೆಳಗ್ಗೆ 11.55ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಯಲಹಂಕ ವಾಯುನೆಲೆಗೆ ಆಗಮಿಸಲಿದ್ದಾರೆ.
ಬೆಂಗಳೂರು: ಜೂನ್ 20, 21ರಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಜೂನ್ 20ರಂದು ಬೆಳಗ್ಗೆ 11.55ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನ (Bengaluru) ಯಲಹಂಕ ವಾಯುನೆಲೆಗೆ ಆಗಮಿಸಲಿದ್ದಾರೆ. ಅಲ್ಲಿಂದ ಮಧ್ಯಾಹ್ನ 12.20ಕ್ಕೆ ಹೆಲಿಕಾಪ್ಟರ್ನಲ್ಲಿ ಕೊಮ್ಮಘಟ್ಟ ಹೆಲಿಪ್ಯಾಡ್ಗೆ ತೆರಳಲಿದ್ದಾರೆ. ಅಲ್ಲಿ ಮಧ್ಯಾಹ್ನ 12.30ರಿಂದ 1.45ರವರೆಗೆ ಬೆಂಗಳೂರು ಸಬ್ಅರ್ಬನ್ ರೈಲು ಯೋಜನೆಗೆ ಮತ್ತು ಲಾಜಿಸ್ಟಿಕ್ ಪಾರ್ಕ್ಗೆ ಶಂಕುಸ್ಥಾಪನೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಅಲ್ಲಿಂದ ಮಧ್ಯಾಹ್ನ 2.30 ರಿಂದ 3.30 ರವರೆಗೆ ಜ್ಞಾನಭಾರತಿ ಆವರಣದಲ್ಲಿ ನಡೆಯುವ ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ನ್ನು ಉದ್ಘಾಟನೆ ಮಾಡಿ, ಅಂಬೇಡ್ಕರ್ ಪ್ರತಿಮೆ ಅನಾವರಣ, 150 ಮೇಲ್ದರ್ಜೆಗೇರಿಸಲ್ಪಟ್ಟ ಐಟಿಐ ಗಳ ಲೋಕಾರ್ಪಣೆಗೊಳಿಸಲಿದ್ದಾರೆ.
ನಂತರ ಸಂಜೆ 4 ಗಂಟೆಗೆ ಬೆಂಗಳೂರಿನಿಂದ ಮೈಸೂರಿಗೆ ಹೆಲಿಕಾಫ್ಟರ್ ಮೂಲಕ ಪ್ರಯಾಣ ಬೆಳಸಲಿದ್ದು, ಸಂಜೆ 4.50ಕ್ಕೆ ಮೈಸೂರಿನಲ್ಲಿ ಲ್ಯಾಂಡ್ ಆಗಲಿದ್ದಾರೆ. ಸಂಜೆ 5 ಗಂಟೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಐಐಎಸ್ ಹೆಚ್ ಎಕ್ಸಲೆನ್ಸ್ ಸೆಂಟರ್ ಲೋಕಾರ್ಪಣೆ ಮತ್ತು ವಿವಿಧ ಯೋಜನೆಗಳ ಫಲಾನುಭವಿಗಳ ಜೊತೆ ಸಂವಾದ ನಡೆಸಲಿದ್ದಾರೆ. ಸಂಜೆ 6.3ಕ್ಕೆ ಸುತ್ತೂರು ಮಠಕ್ಕೆ ಭೇಟಿ ನೀಡಿ ವೇದ ಪಾಠಶಾಲಾ ಕಟ್ಟಡ ಲೋಕಾರ್ಪಣೆಗೊಳಿಸಲಿದ್ದಾರೆ. ರಾತ್ರಿ 7.30 ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಂತರ ರಾತ್ರಿ 8.10ಕ್ಕೆ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಇದನ್ನು ಓದಿ: ಈಡಿ ಕಚೇರಿಗೆ ಮುತ್ತಿಗೆ ಹಾಕುವ ಪ್ರಯತ್ನದಲ್ಲಿ ಬ್ಯಾರಿಕೇಡ್ ಮೇಲಿಂದ ಜಾರಿ ಬಿದ್ದರು ಕಾಂಗ್ರೆಸ್ ನಾಯಕರು
ಜೂನ್ 21 ರಂದು ಬೆಳಗ್ಗೆ 6.30 ಕ್ಕೆ ಮೈಸೂರು ಅರಮನೆ ಮುಂಭಾಗ ನಡೆಯುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ (World Yoga Day) ಭಾಗಿಯಾಗಲಿದ್ದಾರೆ. ಬೆಳಗ್ಗೆ 8 ಗಂಟೆಗೆ ಅರಮನೆ ಮುಂಭಾಗದಲ್ಲಿ ವಸ್ತು ಪ್ರದರ್ಶನ ವೀಕ್ಷಣೆ ಮಾಡಿ, ಬೆಳಗ್ಗೆ 8.30ಕ್ಕೆ ಮೈಸೂರು ಅರಮನೆಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 9.25 ಕ್ಕೆ ಮೈಸೂರಿನಿಂದ ವಿಶೇಷ ವಿಮಾನದ ಮೂಲಕ ತಿರುವನಂತಪುರಕ್ಕೆ ಪ್ರಯಾಣ ಬೆಳಸಲಿದ್ದಾರೆ.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:36 pm, Mon, 13 June 22