ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಪ್ರಕರಣ: ನಿವೃತ್ತ ಅಬಕಾರಿ ಅಧಿಕಾರಿಗೆ 5 ವರ್ಷ, ಮಳಿಗೆ 3 ವರ್ಷ ಜೈಲು ಶಿಕ್ಷೆ

ಬೆಂಗಳೂರಿನಲ್ಲಿ PMLA ಕಾಯ್ದೆ ಅಡಿಯಲ್ಲಿ ನಿವೃತ್ತ ಅಬಕಾರಿ ಅಧಿಕಾರಿ ಎಂ. ರಾಮಚಂದ್ರ ಮತ್ತು ಅವರ ಮಗಳು ಆರ್. ಯುವರೇಖಾ ಅವರಿಗೆ ಅಕ್ರಮ ಹಣ ವರ್ಗಾವಣೆ ಹಾಗೂ ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಲ್ಲಿ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗಿದೆ. ಸಿಬಿಐ ವಿಶೇಷ ನ್ಯಾಯಾಲಯವು ರಾಮಚಂದ್ರಗೆ 5 ವರ್ಷ, ಯುವರೇಖಾಗೆ 3 ವರ್ಷ ಜೈಲು ಶಿಕ್ಷೆ ನೀಡಿದ್ದು, ಅಕ್ರಮವಾಗಿ ಗಳಿಸಿದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಆದೇಶಿಸಿದೆ. ಆರ್ಥಿಕ ಅಪರಾಧಗಳು ದೇಶದ ಆರ್ಥಿಕತೆಗೆ ಹಾನಿಕರ ಎಂದು ನ್ಯಾಯಾಲಯ ಹೇಳಿದೆ.

ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಪ್ರಕರಣ: ನಿವೃತ್ತ ಅಬಕಾರಿ ಅಧಿಕಾರಿಗೆ 5 ವರ್ಷ, ಮಳಿಗೆ 3 ವರ್ಷ ಜೈಲು ಶಿಕ್ಷೆ
ಸಾಂದರ್ಭಿಕ ಚಿತ್ರ

Updated on: Oct 16, 2026 | 12:57 PM

ಬೆಂಗಳೂರು, ಅ.16: ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಂದಿದೆ. ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಹಾಗೂ ಮನಿ ಲಾಂಡರಿಂಗ್ ಮಾಡಿದ್ದ ಆರೋಪ ಸಾಬೀತಾಗಿದ್ದರಿಂದ, ನಿವೃತ್ತ ಅಬಕಾರಿ ಗಾರ್ಡ್ (ಇನ್-ಚಾರ್ಜ್ ಸಬ್-ಇನ್ಸ್‌ಪೆಕ್ಟರ್) ಎಂ. ರಾಮಚಂದ್ರ ಹಾಗೂ ಅವರ ಮಗಳು ಆರ್. ಯುವರೇಖಾ ಅವರಿಗೆ ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯವು ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶಿಸಿದೆ.

ಆರೋಪಿ 1 – ಎಂ. ರಾಮಚಂದ್ರಗೆ ನ್ಯಾಯಾಲಯವು 5 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 5 ಲಕ್ಷ ರೂಪಾಯಿ ದಂಡ ವಿಧಿಸಿದೆ. ಆರೋಪಿ 2 – ಆರ್. ಯುವರೇಖಾಗೆ 3 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 3 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಆರ್ಥಿಕ ಅಪರಾಧಗಳು ದೇಶದ ಆರ್ಥಿಕತೆಯನ್ನು ರಕ್ತಹೀನಗೊಳಿಸುತ್ತವೆ  ಹಾಗೂ ಇವು ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುವ ವೈಟ್ ಕಾಲರ್ ಅಪರಾಧಗಳೆಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಖಡಕ್​​ ಆಗಿ ತಿಳಿಸಿದೆ.

ಇಲ್ಲಿದೆ ನೋಡಿ ಎಕ್ಸ್​ ಪೋಸ್ಟ್​:

ಪಿಎಂಎಲ್‌ಎ ಕಾಯ್ದೆಯ ಸೆಕ್ಷನ್ 8(5) ರ ಅಡಿಯಲ್ಲಿ, ಅಕ್ರಮವಾಗಿ ಗಳಿಸಿದ ಅಪರಾಧದ ಹಣದಿಂದ ಖರೀದಿಸಲಾಗಿದ್ದ ಪ್ರಮುಖ ಸ್ಥಿರಾಸ್ತಿಗಳನ್ನು ಕೇಂದ್ರ ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳುವಂತೆ ಕೋರ್ಟ್ ಆದೇಶಿಸಿದೆ. ಜಪ್ತಿಗೊಂಡ ಆಸ್ತಿಗಳು ಯಾವುದು ಎಂಬ ಮಾಹಿತಿಯನ್ನು ಕೂಡ ಕೋರ್ಟ್ ನೀಡಿದೆ. ಬೆಂಗಳೂರಿನ ವಿಜಯನಗರದಲ್ಲಿರುವ 30×51 ಅಳತೆಯ ಮನೆ ಹಾಗೂ ಅದರ ಹಿಂಭಾಗದಲ್ಲಿ ನಿರ್ಮಿಸಲಾದ ಮೂರು ಮಹಡಿಯ 1 ಬಿಎಚ್​​​ಕೆ ಮನೆಗಳು. ಕೆಂಗೇರಿಯ ಹಳೇಗೆರೆಹಳ್ಳಿಯಲ್ಲಿರುವ ಎರಡು ವಸತಿ ನಿವೇಶನಗಳು. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಕುಟ್ಟವಾಡಿ ಗ್ರಾಮದಲ್ಲಿರುವ 12 ಗುಂಟೆ ಕೃಷಿ ಜಮೀನು ಜಪ್ತಿ ಮಾಡಲು ಆದೇಶವನ್ನು ನೀಡಿದೆ.

ಇದನ್ನೂ ಓದಿ: ನೆಲಮಂಗಲದಲ್ಲಿ ವಿದೇಶಿ ಪ್ರಜೆಯ ಪುಂಡಾಟ: ಪೊಲೀಸರ ಮೇಲೆ ನೈಜೀರಿಯನ್ ವ್ಯಕ್ತಿಯಿಂದ ಹಲ್ಲೆ!

ಪ್ರಕರಣದ ಹಿನ್ನೆಲೆ:

1977 ರಿಂದ 2009 ರವರೆಗಿನ ಪರಿಶೀಲನಾ ಅವಧಿಯಲ್ಲಿ ಆದಾಯಕ್ಕೂ ಮೀರಿದ ಆಸ್ತಿ ಗಳಿಸಿದ್ದಾರೆಂದು 2009 ರಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಬಳಿಕ 2012 ರಲ್ಲಿ ರೂ. 1.79 ಕೋಟಿ ಮೊತ್ತದ ಬಗ್ಗೆ ಲೋಕಾಯುಕ್ತ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದರು. ಸಿಟಿ ಮಾರ್ಕೆಟ್ ವಲಯದಲ್ಲಿ ಇನ್-ಚಾರ್ಜ್ ಸಬ್-ಇನ್ಸ್‌ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದ ರಾಮಚಂದ್ರ, ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಆದಾಯಕ್ಕೂ ಮೀರಿ ಆಸ್ತಿ ಸಂಪಾದಿಸಿರುವುದು ಮತ್ತು ತನ್ನ ಮಗಳ ಹೆಸರಿನಲ್ಲೂ ಆಸ್ತಿಗಳನ್ನು ಖರೀದಿಸಿರುವುದು ತನಿಖೆಯಲ್ಲಿ ಸಾಬೀತಾಗಿದೆ. ಬೆಂಗಳೂರಿನ ಸಿಬಿಐ ಪ್ರಕರಣಗಳ ವಿಶೇಷ ನ್ಯಾಯಾಲಯ ಹಾಗೂ XLVII ಹೆಚ್ಚುವರಿ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಸತೀಶ್ ಜೆ. ಬಾಲಿ ಅವರು ಈ ಮಹತ್ವದ ತೀರ್ಪನ್ನು ಪ್ರಕಟಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Loading...
Unable to load recommendations.
Follow Us