AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಕ್ಸೋ ಕೇಸ್​ನಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

ಹೈಕೋರ್ಟ್‌ನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರಣೆ ನಡೆಯಿತು. ಪ್ರಾಸಿಕ್ಯೂಷನ್ ಮತ್ತು ಪರ ವಕೀಲರು ತಮ್ಮ ವಾದಗಳನ್ನು ಮಂಡಿಸಿದರು. ಮನೆಯ ಎಂಟ್ರಿ ರಿಜಿಸ್ಟರ್ ತಿರುಚಲ್ಪಟ್ಟಿದೆ ಮತ್ತು ಫಿರ್ಯಾದಿದಾರರ ವಿಡಿಯೋ ಅಳಿಸಲಾಗಿದೆ ಎಂಬ ಆರೋಪಗಳು ಕೇಳಿಬಂದವು. ಹೈಕೋರ್ಟ್ ಎಲ್ಲಾ ವಾದಗಳನ್ನು ಆಲಿಸಿ ಆದೇಶವನ್ನು ಕಾಯ್ದಿರಿಸಿದೆ.

ಪೋಕ್ಸೋ ಕೇಸ್​ನಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್
ಪೋಕ್ಸೋ ಕೇಸ್​ನಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್
Ramesha M
| Edited By: |

Updated on: Jan 17, 2025 | 7:09 PM

Share

ಬೆಂಗಳೂರು, ಜನವರಿ 17: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ (bs yediyurappa) ವಿರುದ್ಧದ ಪೋಕ್ಸೋ ಪ್ರಕರಣ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ಕರ್ನಾಟಕ ಹೈಕೋರ್ಟ್ ಎಲ್ಲರ ವಾದ ಆಲಿಸಿ ಆದೇಶ ಕಾಯ್ದಿರಿಸಿದೆ. ಜೊತೆಗೆ ಬಿ.ಎಸ್.ಯಡಿಯೂರಪ್ಪ ಖುದ್ದು ಹಾಜರಿಗೆ ನೀಡಿದ್ದ ವಿನಾಯತಿಯನ್ನು ವಿಸ್ತರಿಸಿದೆ. ಆ ಮೂಲಕ ಮಾಜಿ ಸಿಎಂಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ರದ್ದು ಕೋರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಆದೇಶ ಕಾಯ್ದಿರಿಸಿದ್ದಾರೆ. ಪ್ರಾಸಿಕ್ಯೂಷನ್ ಪರ ಪ್ರೊ.ರವಿವರ್ಮಕುಮಾರ್ ವಾದಮಂಡನೆ ಮಾಡಿದ್ದು, ಬಿ.ಎಸ್.ಯಡಿಯೂರಪ್ಪ ಮನೆಯ ಎಂಟ್ರಿ ರಿಜಿಸ್ಟರ್ ತಿರುಚಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪ ಪೋಕ್ಸೋ ಕೇಸ್: ಪ್ರಾಸಿಕ್ಯೂಶನ್ ವಾದ ಮುಕ್ತಾಯ; ಜ. 17ಕ್ಕೆ ಬಿಎಸ್​ವೈ ಪರ ವಕೀಲರ ವಾದ

ಫಿರ್ಯಾದಿ, ಬಾಲಕಿ, ಶಿವಾನಂದ ತಗಡೂರು ಬಂದ ಸಮಯ ಬದಲಿಸಲಾಗಿದೆ. ಆರೋಪಿಗಳು ಫಿರ್ಯಾದಿ ಫೇಸ್ ಬುಕ್​ನಿಂದ ವಿಡಿಯೋ ಡಿಲೀಟ್ ಮಾಡಿದ್ದಾರೆ. ಬಿಎಸ್‌ ಯಡಿಯೂರಪ್ಪ ಮನೆಗೆ ಕರೆತಂದು ವಿಡಿಯೋ ಡಿಲೀಟ್ ಮಾಡಿದ್ದಾರೆಂದು ವಾದಿಸಿದರು.

ಮೊಬೈಲ್ ರೆಕಾರ್ಡಿಂಗ್​ನಲ್ಲಿ ಯಡಿಯೂರಪ್ಪ ಧ್ವನಿಯಿದೆ ಎಂದ ಜಡ್ಜ್, ಆ ವಿಡಿಯೋ ರೆಕಾರ್ಡಿಂಗ್​ನಲ್ಲಿರುವ ಹೇಳಿಕೆ ಡಿಸ್ಟರ್ಬಿಂಗ್ ಆಗಿವೆ. ಯಡಿಯೂರಪ್ಪ ಮನೆಗೆ ಫಿರ್ಯಾದಿ ಮಹಿಳೆ ಪದೇಪದೆ ಬಂದಿದ್ದಾರೆ. ಈ ಘಟನೆ ನಡೆದ ನಂತರ ಪದೇಪದೆ ಬರಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

ಫಿರ್ಯಾದಿ ಈ ಹಿಂದೆ 56 ದೂರು ನೀಡಿರುವ ಹಿನ್ನೆಲೆಯಲ್ಲಿ ಇದನ್ನು ಪರಿಗಣಿಸಬೇಕು. ಆರೋಪಪಟ್ಟಿಯಲ್ಲಿನ ಅಂಶಗಳೇ ಸಂಪೂರ್ಣ ಸತ್ಯವೆಂದು ಒಪ್ಪಬಾರದು ಎಂದು ಬಿ.ಎಸ್.ಯಡಿಯೂರಪ್ಪ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದಿಸಿದರು. ಆ ದಿನ ಏನೂ ನಡೆದಿಲ್ಲವೆಂದು ಅಲ್ಲಿದ್ದ ಶಿವಾನಂದ ತಗಡೂರು, ಆರಾಧ್ಯ ಹೇಳಿಕೆ ನೀಡಿದ್ದಾರೆ. ಆದರೆ ಪೊಲೀಸರು ಅದನ್ನು ತನಿಖೆಯ ಭಾಗವಾಗಿ ಪರಿಗಣಿಸಿಲ್ಲ. ಕೇವಲ ಸಂತ್ರಸ್ತೆ ಹೇಳಿಕೆಯಷ್ಟೇ ಅಲ್ಲ ಸಾಕ್ಷ್ಯಗಳೂ ಅಗತ್ಯವಿದೆ. ಎಲ್ಲ ಸಾಕ್ಷಿಗಳೂ ಈ ಘಟನೆ ನಡೆದಿಲ್ಲ ಎಂದು ಹೇಳಿದ್ದಾರೆಂದು ವಾದ ಮಂಡನೆ ಮಾಡಿದ್ದಾರೆ.

ಇದನ್ನೂ ಓದಿ: ಬಿಎಸ್ ​ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್: ಕೋರ್ಟ್​ಗೆ ಆರೋಪ ಪಟ್ಟಿ ಸಲ್ಲಿಕೆ

ಅವಳು ನನ್ನ ಮೊಮ್ಮಗಳಿದ್ದಂತೆ ನಾನು ನೋಡಿದೆ ಚೆಕ್ ಮಾಡಿದೆ. ಬಹಳ ಒಳ್ಳೇ ಹುಡುಗಿ ಅವಳು, ಏನು ಬೇಕೋ ಸಹಾಯ ಮಾಡುತ್ತೇನೆ ಎಂದು ಯಡಿಯೂರಪ್ಪ ವಿಡಿಯೋದಲ್ಲಿ ಹೇಳಿದ್ದಾರೆಂದು ಆರೋಪಿಸಲಾಗಿದೆ. ಆದರೆ ಕೇಸ್ ಬಗ್ಗೆ ಆಕೆ ಬಳಿ ಚೆಕ್ ಮಾಡಿದೆ. ಯಾರನ್ನೂ ರೂಮಿನ ಒಳಗೆ ಕರೆದುಕೊಂಡು ಹೋಗಿಲ್ಲವೆಂದು ಯಡಿಯೂರಪ್ಪ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್