ಬೆಂಗಳೂರು: ದೈಹಿಕ ಶಿಕ್ಷಕನಿಂದ ಶಾಲೆಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಹೆಬ್ಬಾಳ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಸ್ಫೋಟಕ ಸಂಗತಿ ಬಯಲಾಗಿದೆ. ಸರ್ಕಾರಿ ಶಾಲೆ ದೈಹಿಕ ಶಿಕ್ಷಕ ಅಂಜಿನಪ್ಪ ಶಾಲೆಯ 13 ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈಗಾಗಲೇ ಅಂಜಿನಪ್ಪನನ್ನು ಹೆಬ್ಬಾಳ ಪೊಲೀಸರು ಬಂಧಿಸಿದ್ದಾರೆ.
8 ತಿಂಗಳ ಹಿಂದಷ್ಟೇ ಹೆಬ್ಬಾಳ ಠಾಣೆ ವ್ಯಾಪ್ತಿಯ ಸರ್ಕಾರಿ ಶಾಲೆಗೆ ವರ್ಗಾವಣೆಗೊಂಡಿದ್ದ55 ವರ್ಷದ ದೈಹಿಕ ಶಿಕ್ಷಕ ಅಂಜಿನಪ್ಪ, ಹಲವು ತಿಂಗಳಿನಿಂದ ಮಕ್ಕಳಿಗೆ ಪಾಠ ಹೇಳಿಕೊಡುವ ನೆಪದಲ್ಲಿ ಕೃತ್ಯ ಎಸಗಿದ್ದಾನೆ. ಬಾಲಕಿಯರು ನೀಡಿದ್ದ ಮಾಹಿತಿ ಆಧರಿಸಿ ಶಾಲೆಯ ಮುಖ್ಯ ಶಿಕ್ಷಕರೇ ಠಾಣೆಗೆ ದೂರು ನೀಡಿದ್ದು ದೂರನ್ನಾಧರಿಸಿ ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದೆ. ಸದ್ಯ ಆರೋಪಿ ಶಿಕ್ಷಕ ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆರೋಪಿ ಅಂಜಿನಪ್ಪ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅಂಜಿನಪ್ಪ ಆಟ, ಪಾಠದ ನೆಪದಲ್ಲಿ ಬಾಲಕಿಯರನ್ನು ತನ್ನ ಬಳಿ ಕರೆಸಿಕೊಂಡು ವಿದ್ಯಾರ್ಥಿನಿಯರಿಗೆ ಮುತ್ತು ಕೊಡುವುದು, ಮೈ-ಕೈ, ಮುಟ್ಟಬಾರದ ಜಾಗದಲ್ಲಿ ಮುಟ್ಟಿ ಲೈಂಗಿಕ ಕಿರುಕುಳ ನೀಡುತ್ತಿದ್ದ.
ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಆರೋಪ: ಬೆಂಗಳೂರಿನ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕ ಅರೆಸ್ಟ್
ಮೊಬೈಲ್ ಚಾರ್ಜ್ ವಿಚಾರದಲ್ಲಿ ಜಗಳ; ದೊಣ್ಣೆ ಏಟಿಗೆ ವ್ಯಕ್ತಿ ಸಾವು
ಶಿವಮೊಗ್ಗ: ಮನೆಗೆ ಬಂದ ವ್ಯಕ್ತಿಯೊಬ್ಬ ಮೊಬೈಲ್ ಚಾರ್ಜ್ ಮಾಡಿಕೊಳ್ಳುವ ವಿಚಾರವಾಗಿ ಮನೆಯ ಯಜಮಾನನೊಂದಿಗೆ ಕಿರಿಕ್ ಮಾಡಿಕೊಂಡಿದ್ದಲ್ಲದೆ ಆತನ ಜೀವವನ್ನೇ ತೆಗೆದುಬಿಟ್ಟ ಘಟನೆಯೊಂದು ಸಾಗರ ತಾಲೂಕಿನ ಮುರಳ್ಳಿ ಮರಾಠಿ ಗ್ರಾಮದಲ್ಲಿ ನಡೆದಿದೆ. ನವೆಂಬರ್ 7ರಂದು ನಡೆದ ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ತಿಮ್ಮಪ್ಪ (52) ಕೊಲೆಯಾದ ವ್ಯಕ್ತಿಯಾಗಿದ್ದು, ಕೃತ್ಯದ ನಂತರ ಪರಾರಿಯಾಗಿದ್ದ ಆರೋಪಿ ಸಿದ್ದಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.
ಸಿದ್ದಪ್ಪ ತನ್ನ ಮೋಬೈಲ್ ಚಾರ್ಜ್ ಮಾಡಿಕೊಳ್ಳಲು ತಿಮ್ಮಪ್ಪನ ಮನೆಗೆ ಬಂದಿದ್ದನು. ಮೊಬೈಲ್ ಜಾರ್ಜ್ ಮಾಡಿಕೊಳ್ಳುವ ವಿಚಾರದಲ್ಲಿ ಇಬ್ಬರ ನಡುವೆ ಹಳ್ಳಿಯ ಕಿರಿಕ್ ಶುರುವಾಗಿತ್ತು. ರಾತ್ರಿ ಸಮಯ ಆಗಿದ್ದರಿಂದ ಎಣ್ಣೆ ಹೊಡೆದಿದ್ದ ಸಿದ್ದಪ್ಪ ತಿಮ್ಮಪ್ಪಗೆ ಅವಾಜ್ ಹಾಕುತ್ತಾನೆ. ಈ ವಿಚಾರದಲ್ಲಿ ಸಿದ್ದಪ್ಪನು ತಿಮ್ಮಪ್ಪ ಮತ್ತು ಆತನ ಹೆಂಡತಿ ಲಕ್ಷ್ಮೀಯೊಂದಿಗೆ ಗಲಾಟೆ ಮಾಡುತ್ತಾನೆ. ಕುಡಿದ ಅಮಲಿನಲ್ಲಿದ್ದ ಸಿದ್ದಪ್ಪನು ಅಲ್ಲೆ ಇದ್ದ ದೊಣ್ಣೆಯನ್ನು ತೆಗೆದುಕೊಂಡು ಮನೆಗೆ ಅಳವಡಿಸಿದ ಡಿಶ್ ಬುಟ್ಟಿಗೆ ದೊಣ್ಣೆಯಿಂದ ಹೊಡೆಯುತ್ತಾನೆ. ಇದನ್ನು ನೋಡಿ ತಮ್ಮ ಮನೆ ವಸ್ತು ಯಾಕೆ ಹಾಳು ಮಾಡುತ್ತೀಯಾ ಎಂದು ಸಿದ್ದಪ್ಪನಿಗೆ ಪ್ರಶ್ನೆ ಮಾಡುತ್ತಾನೆ. ಇದಕ್ಕೆ ಕೋಪಗೊಂಡ ಸಿದ್ದಪ್ಪನು ಕೈಯಲ್ಲಿದ್ದ ದೊಣ್ಣೆಯಿಂದ ತಿಮ್ಮಪ್ಪನ ಎಡಗಣ್ಣಿನ ಹುಬ್ಬಿಗೆ ಹಲ್ಲೆ ಮಾಡುತ್ತಾನೆ.
ಹಲ್ಲೆಯಿಂದಾಗಿ ತಲೆಗೆ ಗಂಭೀರವಾಗಿ ಗಾಯಗೊಂಡ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಣ್ಣು ಮತ್ತು ತಲೆ ಭಾಗಕ್ಕೆ ಹೆಚ್ಚು ಪೆಟ್ಟು ಬಿದ್ದ ಹಿನ್ನಲೆ ತಿಮ್ಮಪ್ಪನು ಚಿಕಿತ್ಸೆಗೆ ಫಲಕಾರಿಯಾಗದೆ ನ.9 ರಂದು ಉಡುಪಿ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ಧಾನೆ. ಮೃತನ ಹೆಂಡತಿ ನೀಡಿದ ದೂರಿನ ಮೇರೆಗೆ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲು ಆಗಿತ್ತು.
Published On - 2:36 pm, Sat, 12 November 22