AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಕ್ಸೊ ಕೇಸ್​ನಲ್ಲಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಬಂಧಿಸಲು ಪೊಲೀಸರ ಸಿದ್ಧತೆ

ಪೋಕ್ಸೊ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಅವರನ್ನು ಬಂಧಿಸಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ. ಇಂದು ವಾರಂಟ್ ಹೊರಡಿಸುವ ಬಗ್ಗೆ ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಲಿದೆ. ವಾರಂಟ್ ಜಾರಿಯಾದ್ರೆ ಪೊಲೀಸರು ಬಿಎಸ್​ ಯಡಿಯೂರಪ್ಪನವರನ್ನು ಬಂಧಿಸಲಿದ್ದಾರೆ.

ಪೋಕ್ಸೊ ಕೇಸ್​ನಲ್ಲಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಬಂಧಿಸಲು ಪೊಲೀಸರ ಸಿದ್ಧತೆ
ಬಿಎಸ್ ಯಡಿಯೂರಪ್ಪ
Ramesha M
| Edited By: |

Updated on: Jun 13, 2024 | 9:36 AM

Share

ಬೆಂಗಳೂರು, ಜೂನ್.13; ಪೋಕ್ಸೊ ಕೇಸ್​ನಲ್ಲಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ (BS Yediyurappa) ಬಂಧಿಸಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ. ವಿಚಾರಣೆಗೆ ಬಿಎಸ್​ ಯಡಿಯೂರಪ್ಪ ಹಾಜರಾಗದ ಹಿನ್ನೆಲೆ ಜಾಮೀನು ರಹಿತ ​ವಾರಂಟ್ ಹೊರಡಿಸಲು ಪೊಲೀಸರು ನಿನ್ನೆ ತ್ವರಿತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಇಂದು ವಾರಂಟ್ ಹೊರಡಿಸುವ ಬಗ್ಗೆ ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಲಿದೆ. ಒಂದು ಪಕ್ಷ ಕೋರ್ಟ್ ವಾರಂಟ್ ಜಾರಿ ಮಾಡಿದರೆ ಪೊಲೀಸರು (Police) ಬಿಎಸ್​ ಯಡಿಯೂರಪ್ಪನವರನ್ನು ಬಂಧಿಸಲಿದ್ದಾರೆ.

ಪೊಲೀಸ್ ನೋಟಿಸ್​ಗೆ ಬಿಎಸ್‌ವೈ ಉತ್ತರ

ಇನ್ನು ಮತ್ತೊಂದೆಡೆ ತನಿಖೆಗೆ ಹಾಜರಾಗುವಂತೆ ಪೊಲೀಸರು ನೀಡಿದ್ದ ನೋಟಿಸ್​ಗೆ ಬಿಎಂ ಯಡಿಯೂರಪ್ಪ ಉತ್ತರಿಸಿದ್ದಾರೆ. ನಾನು ಕಳೆದ ಮಾರ್ಚ್ 28 ರಂದು ನೀಡಿದ್ದ ನೋಟಿಸ್ ನಂತೆ ವಿಚಾರಣೆಗೆ ಹಾಜರಾಗಿ ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದೆ. ಆದರೆ ಮತ್ತೆ ಜೂನ್ 12 ರಂದು ತಾವು ನೀಡಿರುವ ನೋಟಿಸ್ ನನಗೆ ನಿನ್ನೆಯಷ್ಟೇ ತಲುಪಿದೆ. ನಾನು ಪಕ್ಷದ ಪೂರ್ವ ನಿರ್ಧರಿತ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿರುವುದರಿಂದ ದೆಹಲಿಗೆ ತೆರಳುತ್ತಿದ್ದೇನೆ. ಹೀಗಾಗಿ ಈ ಬಾರಿ ನಾನು ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ನಾನು ಜೂನ್ 17 ರಂದು ಖುದ್ದಾಗಿ ವಿಚಾರಣೆಗೆ ಹಾಜರಾಗುತ್ತೇನೆ. ಈ ಹಿಂದೆಯೂ ನಾನು ತನಿಖೆಗೆ ಸಹಕರಿಸಿದ್ದೇನೆ. ಸಕಾರಣಗಳಿಂದಲೇ ಈ ಬಾರಿ ತನಿಖೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ವಿನಾಯಿತಿ ನೀಡಬೇಕು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬಾಲಕಿಗೆ ಲೈಂಗಿಕ ಕಿರುಕುಳ: ಪೋಕ್ಸೊ ಕೇಸ್​ನಡಿ ಕುಣಿಗಲ್ ವಿದ್ಯಾಚೌಡೇಶ್ವರಿ ಮಠದ ಪೀಠಾಧ್ಯಕ್ಷ, ಆಪ್ತ ಸಹಾಯಕ ಅರೆಸ್ಟ್​

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರಿಗೆ ದೊಡ್ಡ ಸಂಕಷ್ಟ ಎದುರಾಗಿದೆ. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವಿಚಾರಣೆಗೆ ಹಾಜರಾಗುವಂತೆ ಬಿ ಎಸ್ ಯಡಿಯೂರಪ್ಪಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಮಹಿಳೆಯೊಬ್ಬರು ತಮ್ಮ ಅಪ್ರಾಪ್ತ ಪುತ್ರಿಯೊಂದಿಗೆ ಬಿಎಸ್‌ವೈ ಅಸಭ್ಯವಾಗಿ ವರ್ತಿಸಿದ್ದಾರೆಂದು ಆರೋಪಿಸಿ ಕಳೆದ ಮಾರ್ಚ್ ತಿಂಗಳಲ್ಲೇ ದೂರು ನೀಡಿದ್ದರು. ಆದರೆ ಕಳೆದ ತಿಂಗಳು ಆ ಮಹಿಳೆ ಅನಾರೋಗ್ಯದಿಂದ ಮೃತಪಟ್ಟಿದ್ದರು.

ಮಹಿಳೆಯ ದೂರಿಗೆ ಸಂಬಂಧಿಸಿದಂತೆ ಬಿಎಸ್ ಯಡಿಯೂರಪ್ಪಗೆ ನೋಟಿಸ್ ಜಾರಿಗೊಳಿಸಿದ್ದ ಪೊಲೀಸರು ನಿನ್ನೆ ತನಿಖೆಗೆ ಹಾಜರಾಗುವಂತೆ ಸೂಚಿಸಿದ್ದರು. ಆದರೆ ಅಪಾಯ ಮನಗಂಡ ಬಿಎಸ್ ವೈ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರಕರಣಕ್ಕೆ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದ್ದಾರೆ. ಇನ್ನು ವಿಚಾರಣೆಗೆ ಹಾಜರಾಗುವಂತೆ ನೀಡಿರುವ ನೋಟಿಸ್ ಗೂ ಉತ್ತರ ನೀಡಿರುವ ಬಿಎಸ್‌ವೈ ಸೋಮವಾರ ಜೂನ್ 17 ರಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ