ಆಸ್ಟ್ರೇಲಿಯಾ ಪ್ರಜೆಯ ವಿಲ್ಲಾದಲ್ಲಿ 3 ಡೈಮಂಡ್ ರಿಂಗ್ ಕದ್ದು ಪರಾರಿಯಾಗಿದ್ದ ಕಳ್ಳ ಮೊಬೈಲ್ ಕೇಸ್​ನಲ್ಲಿ ಅರೆಸ್ಟ್

ಆರೋಪಿ ಮಂಜುನಾಥ್ ಸೆಕ್ಯೂರಿಟಿ ಗಾರ್ಡ್ ಆಗಿದ್ದ ವಿಲ್ಲಾದಲ್ಲೇ 3 ಡೈಮಂಡ್ ರಿಂಗ್ ಕದ್ದು ಪರಾರಿಯಾಗಿದ್ದ ಸದ್ಯ ಪೊಲೀಸರು ಈಗ ಕಳ್ಳನನ್ನು ಬಂಧಿಸಿದ್ದಾರೆ.

ಆಸ್ಟ್ರೇಲಿಯಾ ಪ್ರಜೆಯ ವಿಲ್ಲಾದಲ್ಲಿ 3 ಡೈಮಂಡ್ ರಿಂಗ್ ಕದ್ದು ಪರಾರಿಯಾಗಿದ್ದ ಕಳ್ಳ ಮೊಬೈಲ್ ಕೇಸ್​ನಲ್ಲಿ ಅರೆಸ್ಟ್
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Nov 14, 2021 | 11:50 AM

ಬೆಂಗಳೂರು: ಆಸ್ಟ್ರೇಲಿಯಾ ಪ್ರಜೆಯ ವಿಲ್ಲಾದಲ್ಲಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮಂಜುನಾಥ್‌ನನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮಂಜುನಾಥ್ ಸೆಕ್ಯೂರಿಟಿ ಗಾರ್ಡ್ ಆಗಿದ್ದ ವಿಲ್ಲಾದಲ್ಲೇ 3 ಡೈಮಂಡ್ ರಿಂಗ್ ಕದ್ದು ಪರಾರಿಯಾಗಿದ್ದ ಸದ್ಯ ಪೊಲೀಸರು ಈಗ ಕಳ್ಳನನ್ನು ಬಂಧಿಸಿದ್ದಾರೆ.

ಆರೋಪಿ ಮಂಜುನಾಥ್ ಬೆಂಗಳೂರಿನ ನಂದಿ ರಸ್ತೆಯ ವಿಲ್ಲಾದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಅದೇ ವಿಲ್ಲಾದಲ್ಲಿ ಆಸ್ಟ್ರೇಲಿಯಾ ದೇಶದ ವೋಹ್ನ್ ಟ್ರೋಲ್ಫೆ ದಂಪತಿ ವಾಸವಾಗಿದ್ದರು. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವಿದೇಶಿ ಪ್ರಜೆ ಫುಟ್ ಬಾಲ್ ಆಡಲು ಹೋಗಿದ್ದಾಗ ಅಂದ್ರೆ ಆಗಸ್ಟ್ 28ರಂದು ಮಂಜುನಾಥ್ ವಿದೇಶಿ ಪ್ರಜೆಗಳ ಮನೆಗೆ ನುಗ್ಗಿ 25 ಲಕ್ಷ ರೂ ಬೆಲೆ ಬಾಳುವ‌ 3 ಡೈಮಂಡ್ ರಿಂಗ್ ಕದ್ದು ಪರಾರಿಯಾಗಿದ್ದ.

ಬಳಿಕ ಪ್ಯಾರಿಸ್ನ ಎಫಿಲ್ ಟವರ್ ಮುಂದೆ ಪ್ರಪೋಸ್ ಮಾಡಿ ನೀಡಿದ್ದ ಡೈಮಂಡ್ ರಿಂಗ್ ಕಳ್ಳತನವಾಗಿದೆ ಎಂದು ವಿದೇಶಿ ದಂಪತಿ ಕಣ್ಣೀರಿಟ್ಟಿದ್ದರು. ಈ ಬಗ್ಗೆ ವಿಶ್ವನಾಥಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಸದ್ಯ ಮೊಬೈಲ್ ಕದ್ದ ಕೇಸ್ನಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದು ವಿಚಾರಣೆ ವೇಳೆ ಉಂಗುರ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.

ವಾಹನ ಕಳ್ಳರನ್ನು ಬಂಧಿಸಿದ ಬಿಡದಿ ಠಾಣೆಯ ಪೊಲೀಸರು ಇನ್ನು ಮತ್ತೊಂದೆಡೆ ವಾಹನ ಕಳ್ಳರನ್ನು ರಾಮನಗರ ತಾಲೂಕಿನ ಬಿಡದಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಂಡ್ಯದ ರವಿಕುಮಾರ್, ಅನಿಲ್ ಕುಮಾರ್ ಬಂಧಿತ ಆರೋಪಿಗಳು. ಬಂಧಿತರಿಂದ 6 ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಅಫ್ಘಾನ್​​ನಲ್ಲಿ ಮತ್ತೆ ಸ್ಫೋಟ; ಮಿನಿ ಬಸ್​​ನಲ್ಲಿ ನಡೆದ ಅವಘಡದಲ್ಲಿ ಒಬ್ಬ ಬಲಿ, ಐವರಿಗೆ ಗಾಯ

Published On - 11:45 am, Sun, 14 November 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್