ಬೆಂಗಳೂರು: ತಡರಾತ್ರಿವರೆಗೆ ನಡೆಯುತ್ತಿದ್ದ ರೇವ್​​ಪಾರ್ಟಿ ಮೇಲೆ ಸಿಸಿಬಿ ದಾಳಿ, ಐವರ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಸಿಸಿಬಿ ಅಧಿಕಾರಿಗಳು ಭರ್ಜರಿ ರೇಡ್ ಮಾಡಿ ಐವರನ್ನು ಬಂಧಿಸಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿ ಆರ್ ಫಾರ್ಮ್ ಹೌಸ್‌ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ರೇಡ್ ಮಾಡಲಾಗಿದ್ದು ಪಾರ್ಟಿಯಲ್ಲಿ ಡ್ರಗ್ಸ್ ಹಾಗೂ ಎಂಡಿಎಂ ಮಾತ್ರೆಗಳನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ ಘಟನೆ ಸಂಬಂಧ ಐವರನ್ನು ಬಂಧಿಸಲಾಗಿದೆ.

ಬೆಂಗಳೂರು: ತಡರಾತ್ರಿವರೆಗೆ ನಡೆಯುತ್ತಿದ್ದ ರೇವ್​​ಪಾರ್ಟಿ ಮೇಲೆ ಸಿಸಿಬಿ ದಾಳಿ, ಐವರ ಬಂಧನ
ಜಿಆರ್‌ ಫಾರ್ಮ್‌ ಹೌಸ್‌
Follow us
ರಾಚಪ್ಪಾಜಿ ನಾಯ್ಕ್
| Updated By: ಆಯೇಷಾ ಬಾನು

Updated on:May 20, 2024 | 12:21 PM

ಬೆಂಗಳೂರು, ಮೇ.20: ಎಲೆಕ್ಟ್ರಾನಿಕ್‌ ಸಿಟಿಯ ಜಿಆರ್‌ ಫಾರ್ಮ್‌ ಹೌಸ್‌ನಲ್ಲಿ ನಡೆಯುತ್ತಿದ್ದ ರೇವ್‌ ಪಾರ್ಟಿ (Rave Party) ಮೇಲೆ ಬೆಂಗಳೂರು ಸಿಸಿಬಿ ಪೊಲೀಸರು (CCB Police) ದಾಳಿ ಮಾಡಿ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಘಟನೆ ಸಂಬಂಧ ಪಾರ್ಟಿ ಆಯೋಜಕ ವಾಸು ಹಾಗೂ ಮೂವರು ಡ್ರಗ್ ಪೆಡ್ಲರ್ಸ್ (Drug Peddlers) ಸೇರಿದಂತೆ ಐವರನ್ನು ಬಂಧಿಸಲಾಗಿದೆ.

ಪೊಲೀಸರ ದಾಳಿ ವೇಳೆ 45 ಗ್ರಾಂ ಡ್ರಗ್ಸ್, MDMA, ಕೊಕೆನ್ ಸೇರಿ ಹಲವು ಬಗೆಯ ಮಾದಕ ವಸ್ತುಗಳು ಪತ್ತೆಯಾಗಿವೆ. ಈ ಪಾರ್ಟಿಯಲ್ಲಿ ಕೆಲವು ತೆಲುಗು ನಟಿಯರು, ಮಾಡೆಲ್‌ಗಳು ಕೂಡ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.

ಇನ್ನು ಸಿಸಿಬಿ ಡಿಸಿಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ 6 ಗಂಟೆಗಳಿಗೂ ಹೆಚ್ಚುಕಾಲದಿಂದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಸೋಕೋ ಟೀಮ್ ಡ್ರಗ್ಸ್​​​​ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಇವೆಂಟ್ ಮ್ಯಾನೇಜ್​ಮೆಂಟ್​​​​​ ಕಂಪನಿ ಹೊಂದಿರುವ ಹೈದರಾಬಾದ್​​ ಮೂಲದ ವಾಸು ಎಂಬುವವರು G.R.ಫಾರ್ಮ್​​​ಹೌಸ್​​ನಲ್ಲಿ ಪಾರ್ಟಿ ಆಯೋಜನೆ ಮಾಡಿದ್ದರು. ಈ ಪಾರ್ಟಿಯಲ್ಲಿ 30 ಮಹಿಳೆಯರು, 71 ಪುರುಷರು ಸೇರಿ ಒಟ್ಟು 101 ಜನ ಭಾಗಿಯಾಗಿದ್ದರು. ಸದ್ಯ ಸಿಸಿಬಿ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ್ದಾರೆ. ಉಳಿದವರಿಗೆ ಫಾರ್ಮ್​ಹೌಸ್​ನಲ್ಲೇ ಮೆಡಿಕಲ್ ಚೆಕಪ್ ಮಾಡಲಾಗಿದೆ. ರಕ್ತದ ಸ್ಯಾಂಪಲ್ ಪಡೆದು ಲ್ಯಾಬ್​ಗೆ ಕಳಿಸಲಾಗಿದೆ. ಕೆಲ ಮಾದಕವಸ್ತುವನ್ನು ಟಾಯ್ಲೆಟ್​ನಲ್ಲಿ‌ ಬಿಸಾಕಿ ನೀರುಹಾಕಿ ನಾಶ ಮಾಡಲು ಯತ್ನಿಸಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಬೆಂಗಳೂರು: ತೆಲುಗು ನಟಿಯರು ಭಾಗಿಯಾಗಿದ್ದ ರೇವ್​​ಪಾರ್ಟಿ ಮೇಲೆ ಸಿಸಿಬಿ ದಾಳಿ; ಡ್ರಗ್ಸ್, ಕೊಕೇನ್ ಪತ್ತೆ

ಫಾರ್ಮ್​​​ಹೌಸ್​ಗೆ SP ಮಲ್ಲಿಕಾರ್ಜುನ ಬಾಲದಂಡಿ ಭೇಟಿ

ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ SP ಮಲ್ಲಿಕಾರ್ಜುನ ಬಾಲದಂಡಿ ಅವರು ಭೇಟಿ ನೀಡಿ ಹೆಬ್ಬಗೋಡಿ ಪೊಲೀಸರಿಂದ ಮಾಹಿತಿ ಪಡೆಯುತ್ತಿದ್ದಾರೆ. FSL ಟೀಂ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ. ಅಗತ್ಯ ಸಾಕ್ಷ್ಯ ಸಂಗ್ರಹಿಸಿ ತೆರಳಿದೆ.

ಅವಧಿ ಮೀರಿ ರೇವ್‌ ಪಾರ್ಟಿ ನಡೆಯುತ್ತಿರುವ ಬಗ್ಗೆ ಸೂಚನೆ ಸಿಕ್ಕಿದ್ದು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಅಲ್ಲಿ ಮಾದಕ ವಸ್ತುಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಈ ರೇವ್‌ ಪಾರ್ಟಿಯಲ್ಲಿ ಜನಪ್ರಿಯ ಡಿಜಿಎಗಳಾದ ರಾಬ್ಸ್‌, ಕಾಯ್ವಿ, ಬ್ಲಡಿ ಮಸ್ಕರಾ ಮುಂತಾದವರೂ ಭಾಗಿಯಾಗಿದ್ದರು ಎನ್ನಲಾಗಿದೆ. ಎಲೆಕ್ಟ್ರಾನಿಕ್‌ ಸಿಟಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ನಾರ್ಕೊಟಿಕ್ಸ್ ಸ್ನಿಫರ್ ಡಾಗ್ ಗಳಾದ ಭೂಮಿ, ರಾಣಾ , ರಾಮು ಮತ್ತು ಮೈಲು ಎಂಬ ಶ್ವಾನದಳದಿಂದ ಸ್ಥಳ ಪರಿಶೀಲನೆ ನಡೆಸಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:43 am, Mon, 20 May 24

‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್