ಬೆಂಗಳೂರು: ಖಾಸಗಿ ವಿಡಿಯೋ ಸೆರೆ ಹಿಡಿದು ಬೆದರಿಕೆ; ಯುವತಿ ಮೇಲೆ ದೌರ್ಜನ್ಯವೆಸಗಿದ ಐವರ ಬಂಧನ

ಕಾರ್​ನಲ್ಲೇ ಕೂರುವಂತೆ ಯುವಕ-ಯುವತಿಗೆ ಹೆದರಿಸಿದ ಗುಂಪು, ಇಬ್ಬರ ಖಾಸಗಿ ಕ್ಷಣಗಳನ್ನು ಮೊಬೈಲ್​ನಲ್ಲಿ ಹಿಂದಿನಿಂದ ಚಿತ್ರೀಕರಿಸಿದೆ. ಅಲ್ಲದೆ ಯುವತಿಯ ಕೈ ಹಿಡಿದು ಎಳೆದಾಡಿದ್ದಾರೆ. ಐದು ಲಕ್ಷ ಹಣ ಕೊಡಬೇಕು, ಇಲ್ಲವಾದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಡೋದಾಗಿ ಬೆದರಿಕೆ ಹಾಕಿದ್ದಾರೆ.

ಬೆಂಗಳೂರು: ಖಾಸಗಿ ವಿಡಿಯೋ ಸೆರೆ ಹಿಡಿದು ಬೆದರಿಕೆ; ಯುವತಿ ಮೇಲೆ ದೌರ್ಜನ್ಯವೆಸಗಿದ ಐವರ ಬಂಧನ
ಬಂಧಿತ ಆರೋಪಿಗಳು
Follow us
TV9 Web
| Updated By: preethi shettigar

Updated on:Sep 29, 2021 | 9:48 AM

ಬೆಂಗಳೂರು: ಮೈಸೂರು ಜಿಲ್ಲೆಯಲ್ಲಿ ಸಾಮೂಹಿಕ ಅತ್ಯಾಚಾರದ ಕಹಿ ಮರೆಯುವ ಮುನ್ನವೇ ಮತ್ತೊಂದು ಕಹಿ ಘಟನೆ ನಡೆದಿದೆ. ಅದೃಷ್ಟವಶಾತ್ ಇಲ್ಲಿ ಹೀನ ಕೃತ್ಯ ನಡೆದಿಲ್ಲ ಅಷ್ಟೇ. ಮೈಸೂರಲ್ಲಿ ಏಕಾಂತ ಕಳೆಯಲು ಹೋದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಅದೇ ರೀತಿ ಈಗ ಮತ್ತೊಂದು ಘಟನೆ ನಡೆದಿದೆ. ಬೆಂಗಳೂರು ಹೊರವಲಯದಲ್ಲಿ ಏಕಾಂತಕ್ಕೆ ಹೋದವರ ಮೇಲೆ ದೌರ್ಜನ್ಯ ಮತ್ತು ಬೆದರಿಕೆ ಹಾಕಲಾಗಿದೆ.

ಇದೇ ತಿಂಗಳ 25 ರಂದು ಬೆಳಗ್ಗೆ 11 ಗಂಟೆಗೆ ಯುವತಿ ತನ್ನ ಸಂಬಂಧಿಯ ಜತೆಗೆ ಖಾಸಗಿ ಲೇಔಟ್​ಗೆ ತೆರಳಿದ್ದರು. ಅನುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹಂದೇನಹಳ್ಳಿ ಗ್ರಾಮದ ಖಾಸಗಿ ಲೇಔಟ್​ಗೆ ತೆರಳಿದ್ದ ಜೋಡಿ ಬಳಿಕ ಕಾರಿನಲ್ಲಿ ಕೂತು ಸ್ನ್ಯಾಕ್ಸ್ ಮತ್ತು ತಂಪು ಪಾನೀಯ ಸೇವಿಸಿದ್ದರು. ಆಗ ಬೆಳಿಗ್ಗೆ 11.30ರ ಹೊತ್ತಿಗೆ ಕೀಚಕರ ಗುಂಪೊಂದು ಅಲ್ಲಿಗೆ ಬಂದಿದ್ದು, ಯುವತಿ-ಯುವಕನ ವಿಡಿಯೋ ಮಾಡಿ ಬೆದರಿಸಿದ್ದಾರೆ.

ಕಾರ್​ನಲ್ಲೇ ಕೂರುವಂತೆ ಯುವಕ-ಯುವತಿಗೆ ಹೆದರಿಸಿದ ಗುಂಪು, ಇಬ್ಬರ ಖಾಸಗಿ ಕ್ಷಣಗಳನ್ನು ಮೊಬೈಲ್​ನಲ್ಲಿ ಹಿಂದಿನಿಂದ ಚಿತ್ರೀಕರಿಸಿದೆ. ಅಲ್ಲದೆ ಯುವತಿಯ ಕೈ ಹಿಡಿದು ಎಳೆದಾಡಿದ್ದಾರೆ. ಐದು ಲಕ್ಷ ಹಣ ಕೊಡಬೇಕು, ಇಲ್ಲವಾದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಡೋದಾಗಿ ಬೆದರಿಕೆ ಹಾಕಿದ್ದಾರೆ. ಬಳಿಕ ದೂರದಲ್ಲಿ ಜನ ಬರುತ್ತಿರುವುದನ್ನು ನೋಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಅನಿರೀಕ್ಷಿತ ಘಟನೆಯಿಂದ ಹೆದರಿದ್ದ ಯುವತಿ, ಆಘಾತದಿಂದ ಚೇತರಿಸಿಕೊಂಡು, ಅನುಗೊಂಡನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಆರೋಪಿಗಳ ಮುಖ ನೋಡಿದರೆ ಗುರುತು ಪತ್ತೆ ಹಚ್ಚೋದಾಗಿ ಯುವತಿ ಹೇಳಿದ್ದು, ಯುವತಿ ನೀಡಿದ ದೂರಿನ ಮೇಲೆ ಅನುಗೊಂಡನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್​ ದಾಖಲಾಗಿತ್ತು .

ಐಪಿಸಿ ಸೆಕ್ಷನ್ 354 (A) , 354 (D), 354(C) , 354(B), 504, 149, 384 ಅಡಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಯುವತಿಯ ದೂರು ಬೆನ್ನಲ್ಲೇ ಶೋಧ ಕಾರ್ಯ ಆರಂಭಿಸಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಂದೇನಹಳ್ಳಿ ಗ್ರಾಮದ ಐವರನ್ನು ಬಂಧಿಸಲಾಗಿದೆ. ಎ 1 ಸಯ್ಯದ್ ಆಸಿಫ್ ಫಾಷಾ , ಎ 2 ನವಾಜ್ ಪಾಷ, ಎ 3 ಲಿಯಾಖತ್ ಪಾಷಾ, ಎ 4 ಸಲ್ಮಾನ್ ಖಾನ್ , ಎ5 ರೂಹಿದ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳ ಮೊಬೈಲ್​ನಲ್ಲಿದ್ದ ಖಾಸಗಿ ವಿಡಿಯೋ ಡೆಸ್ಟ್ರಾಯ್ ಮಾಡಿದ ಪೊಲೀಸರು, ಯುವತಿಯ ಮುಂದೆ ಆರೋಪಿಗಳ ಪೆರೇಡ್ ಮಾಡಿಸಿದಾಗ ಆರೋಪಿಗಳನ್ನು ಯುವತಿ ಗುರುತಿಸಿದ್ದಾಳೆ. ಹಂದೇನ ಹಳ್ಳಿಯವರಾದ ಎಲ್ಲರೂ ಸಣ್ಣ ಪುಟ್ಟ ಕೆಲಸ ಮಾಡಿಕೊಂಡಿದ್ದರು. ಅಂದು ಯುವಕ ಯುವತಿ ಏಕಾಂತದಲ್ಲಿದ್ದಾಗ ವಿಡಿಯೋ ಸೆರೆ ಹಿಡಿದು ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಸದ್ಯ ಎಲ್ಲಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ರಾಜಧಾನಿ ಬೆಂಗಳೂರಲ್ಲಿ ಮತ್ತೊಂದು ಹಿನಾಯ ಕೃತ್ಯ; ಪುಟ್ಟ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ

ಚಾಮರಾಜನಗರ: ಬಾಲಕಿ ಅಪಹರಿಸಿ ಲೈಂಗಿಕ ದೌರ್ಜನ್ಯ ಕೇಸ್; ಅಪರಾಧಿಗೆ 20 ವರ್ಷ ಜೈಲು, 5 ಲಕ್ಷ ದಂಡ

Published On - 9:45 am, Wed, 29 September 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ