ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ; ಉಪನ್ಯಾಸಕ ಅರೆಸ್ಟ್
ನಕಲಿ ಲೆಟರ್‌ಹೆಡ್‌ನಲ್ಲಿ ಆಫರ್ ಲೆಟರ್ ಕೂಡ ಕೊಟ್ಟಿದ್ದು, ದಾಖಲೆ ಪರಿಶೀಲನೆಗೆ ಹೋದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಹೀಗಾಗಿ ಶಿಕ್ಷಣ ಇಲಾಖೆಯಿಂದಲೇ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿ ನಾಗರಾಜ್ನನ್ನು ಬಂಧಿಸಿದ್ದಾರೆ.
ಬೆಂಗಳೂರು: ಕೆಲಸ ಕೊಡಿಸುವುದಾಗಿ ಹೇಳಿ ವಂಚಿಸಿದ್ದ ಉಪನ್ಯಾಸಕನನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸುರೇಶ್ ಅಲಿಯಾಸ್ ನಾಗರಾಜ್ ಬಂಧಿತ ಆರೋಪಿ. ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಆಮಿಷ ಒಡ್ಡಿದ್ದ ನಾಗರಾಜ್ 6 ಲಕ್ಷ ರೂಪಾಯಿ ಪಡೆದು ವಂಚಿಸಿದ್ದಾರೆ.
ನಕಲಿ ಲೆಟರ್‌ಹೆಡ್‌ನಲ್ಲಿ ಆಫರ್ ಲೆಟರ್ ಕೂಡ ಕೊಟ್ಟಿದ್ದು, ದಾಖಲೆ ಪರಿಶೀಲನೆಗೆ ಹೋದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಹೀಗಾಗಿ ಶಿಕ್ಷಣ ಇಲಾಖೆಯಿಂದಲೇ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿ ನಾಗರಾಜ್ನನ್ನು ಬಂಧಿಸಿದ್ದಾರೆ.
ಮೈಸೂರಿನಲ್ಲಿ ಡಿಟಿಪಿ ಸೆಂಟರ್ ಒಂದರಲ್ಲಿ ಟೈಪಿಸ್ಟ್ ಕೆಲಸ ಮಾಡುತ್ತಿದ್ದ ಯುವತಿಗೆ ಮೈಸೂರಿನ ಖಾಸಗಿ ಕಾಲೇಜೊಂದರ ಉಪನ್ಯಾಸಕನಾಗಿರುವ ಸುರೇಶ್ ವಂಚಿಸಿದ್ದಾನೆ. ಶಿಕ್ಷಣ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕಿ ಕೆಲಸ ಕೊಡಿಸುತ್ತೆನೆ ಎಂದು ವಂಚಿಸಲಾಗಿದೆ.
ಕಲಬುರಗಿ: ಚಿತ್ತಾಪುರ ಪಟ್ಟಣದ ಮೂರು ಅಂಗಡಿಗಳಲ್ಲಿ ಸರಣಿ ಕಳ್ಳತನ ಕಲಬುರಗಿ ಜಿಲ್ಲೆ ಚಿತ್ತಾಪುರ ಪಟ್ಟಣದ ಮೂರು ಅಂಗಡಿಗಳಲ್ಲಿ ಸರಣಿ ಕಳ್ಳತನ ನಡೆದಿದೆ. ಕಳೆದ ರಾತ್ರಿ ಮೆಡಿಕಲ್, ದಿನಸಿ ಅಂಗಡಿಗಳ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಅಂಗಡಿಗಳಲ್ಲಿ ಇದ್ದ ಹಣವನ್ನು ಕಳ್ಳರು ಹೊತ್ತೋಯ್ದಿದ್ದಾರೆ, ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಕೊಡಗು: ವೃದ್ಧೆಯ ಚಿನ್ನದ ಸರ ಎಗರಿಸಿದ ಇಬ್ಬರು ಮಹಿಳೆಯರು ವೃದ್ಧೆಯ ಚಿನ್ನದ ಸರವನ್ನು ಇಬ್ಬರು ಮಹಿಳೆಯರು ಎಗರಿಸಿದ ಘಟನೆ ಕೊಡಗು ಜಿಲ್ಲೆ ಮಡಿಕೇರಿ ನಗರದ ಕುಂದುರುಮೊಟ್ಟೆ ದೇವಸ್ಥಾನದಲ್ಲಿ ನಡೆದಿದೆ. ದೇವಸ್ಥಾನದಲ್ಲೇ ವೃದ್ಧೆ ಮೀನಾಕ್ಷಿಯ(65) ಚಿನ್ನದ ಸರವನ್ನು ಕಳ್ಳತನ ಮಾಡಲಾಗಿದೆ. ಕೊಡಗು ಜಿಲ್ಲೆ ಮಡಿಕೇರಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಸರ್ಕಾರಿ ನೌಕರಿ ಕೊಡಿಸುವುದಾಗಿ ಹೇಳಿ ಜಾವೇದ್ ಅಖ್ತರ್ ಸಹಿ ನಕಲು ಮಾಡಿ ವಂಚನೆ, ವಿಧಾನಸೌಧ ಪೊಲೀಸರಿಂದ ಆರೋಪಿ ಅರೆಸ್ಟ್
Bengaluru: ಪಿಎಸ್ಐ ಕೆಲಸ ಕೊಡಿಸುವುದಾಗಿ ನಂಬಿಸಿ 18 ಲಕ್ಷ ರೂಪಾಯಿ ವಂಚನೆ
Published On - 12:03 pm, Fri, 15 October 21