ಮನೆ ಮನೆ ಸುತ್ತಿ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ; ಬಂಧಿತನಿಂದ 20 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಜಪ್ತಿ

ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗುತ್ತಿದ್ದ ಆರೋಪಿ ಸೈಯದ್​ನಿಂದ 20 ಲಕ್ಷ ಮೌಲ್ಯದ 407 ಗ್ರಾಂ ಚಿನ್ನಾಭರಣ, 2500 ಗ್ರಾಂ ಬೆಳ್ಳಿಯ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸದ್ಯ ಬೆಂಗಳೂರಿನ ಜ್ಞಾನಭಾರತಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಮನೆ ಮನೆ ಸುತ್ತಿ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ; ಬಂಧಿತನಿಂದ 20 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಜಪ್ತಿ
ಸೈಯದ್ ಅಹಮದ್(38) ಬಂಧಿತ ಆರೋಪಿ

ಬೆಂಗಳೂರು: ಹಗಲು ವೇಳೆ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸೈಯದ್ ಅಹಮದ್(38) ಬಂಧಿತ ಆರೋಪಿ. ಬೆಂಗಳೂರಿನ ಜ್ಞಾನಭಾರತಿ ಠಾಣೆಯ ಪೊಲೀಸರು ಸೈಯದ್​ನನ್ನು ಬಂಧಿಸಿದ್ದು (Arrest), ಬಂಧಿತನಿಂದ 20 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡಿದ್ದಾರೆ. ಆರೋಪಿ ಬಂಧನದಿಂದ ಒಟ್ಟು ಏಳು ಪ್ರಕರಣಗಳು ಬೆಳಕಿಗೆ ಬಂದಿದೆ. ಬೀಗ ಹಾಕಿದ ಮನೆಗಳನ್ನು ಗುರುತಿಸಿ, ಆ ನಂತರ ಮನೆ ಬಳಿ ಬಂದು ಹತ್ತಾರು ಬಾರಿ ಕಾಲಿಂಗ್ ಬೆಲ್ ಮಾಡುತ್ತಿದ್ದ. ಬಾಗಿಲು ತೆರೆದರೆ ವಿಳಾಸ ಕೇಳಿ ವಾಪಸ್ ಬರುತ್ತಿದ್ದ. ಇನ್ನು ಯಾರೂ ಇಲ್ಲದಿದ್ದರೆ ಮನೆ ಬಾಗಿಲು ಒಡೆದು ಒಳಹೋಗುತ್ತಿದ್ದ ಎಂದು ತನಿಖೆ ವೇಳೆ ಆರೋಪಿ ಸೈಯದ್ ಮಾಹಿತಿ ನೀಡಿದ್ದಾನೆ.

ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗುತ್ತಿದ್ದ ಆರೋಪಿ ಸೈಯದ್​ನಿಂದ 20 ಲಕ್ಷ ಮೌಲ್ಯದ 407 ಗ್ರಾಂ ಚಿನ್ನಾಭರಣ, 2500 ಗ್ರಾಂ ಬೆಳ್ಳಿಯ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸದ್ಯ ಬೆಂಗಳೂರಿನ ಜ್ಞಾನಭಾರತಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ನೆಲಮಂಗಲ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಬೈಕ್ ಕಳವು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರ ಕನಸವಾಡಿ ನಿವಾಸಿ ಲೋಕೇಶ್ ಚಾರ್‌ಗೆ ಸೇರಿದ ಬೈಕ್ ಕಳ್ಳತನವಾಗಿದೆ. ನೆಲಮಂಗಲ ಬಸ್ ನಿಲ್ದಾಣದ ಬಳಿ ನಿಲ್ಲಿಸಿ ಬೆಂಗಳೂರಿಗೆ ತೆರಳಿ ವಾಪಸ್ ಬರುವಷ್ಟರಲ್ಲಿ ಬೈಕ್​ ಕಳ್ಳತನವಾಗಿದೆ. ಈ ಸಂಬಂಧ ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:
Crime News: ವಿದ್ಯಾರ್ಥಿಯನ್ನು ಅಪಹರಿಸಿ ಹಣಕ್ಕೆ ಬೇಡಿಕೆ; 6 ಆರೋಪಿಗಳ ಬಂಧನ

ಪಿಸ್ತೂಲ್ ತೋರಿಸಿ ದರೋಡೆ ಮಾಡುತ್ತಿದ್ದ ಇಬ್ಬರ ಬಂಧನ: 2 ಕೆಜಿ ಚಿನ್ನ, 5 ಕೆಜಿ ಬೆಳ್ಳಿ ವಶಕ್ಕೆ

Click on your DTH Provider to Add TV9 Kannada