AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಷಾರಾಮಿ ಜೀವನಕ್ಕಾಗಿ ಮನೆಗಳವು ಮಾಡುತ್ತಿದ್ದ ಆರೋಪಿಗಳ ಬಂಧನ; ಬಂಧಿತರಿಂದ 9 ಲಕ್ಷ ರೂ. ಮೌಲ್ಯದ 48 ಗ್ರಾಂ ಚಿನ್ನ ಜಪ್ತಿ

ರಾಜರಾಜೇಶ್ವರಿನಗರ ಠಾಣೆ ಪೊಲೀಸರು ಸದ್ಯ ಬಂಧಿತರಿಂದ 9 ಲಕ್ಷ ರೂಪಾಯಿ ಮೌಲ್ಯದ 48 ಗ್ರಾಂ ಚಿನ್ನಾಭರಣ, 6 ಬೈಕ್, 1 ಕಾರು ಜಪ್ತಿ ಮಾಡಿದ್ದಾರೆ. ಆರೋಪಿಗಳು ಬೀಗ ಹಾಕಿರುವ ಒಂಟಿ ಮನೆಗಳನ್ನು ಟಾರ್ಗೆಟ್ ಮಾಡುತ್ತಿದ್ದರು ಎನ್ನುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.

ಐಷಾರಾಮಿ ಜೀವನಕ್ಕಾಗಿ ಮನೆಗಳವು ಮಾಡುತ್ತಿದ್ದ ಆರೋಪಿಗಳ ಬಂಧನ; ಬಂಧಿತರಿಂದ 9 ಲಕ್ಷ ರೂ. ಮೌಲ್ಯದ 48 ಗ್ರಾಂ ಚಿನ್ನ ಜಪ್ತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jan 12, 2022 | 1:39 PM

Share

ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಮನೆಗಳವು ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನ ಆರ್​.ಆರ್​. ನಗರದಲ್ಲಿ ನಡೆದಿದೆ. ಮಂಜುನಾಥ್, ಹೇಮಂತ್‌ ಬಂಧಿತ ಆರೋಪಿಗಳು. ರಾಜರಾಜೇಶ್ವರಿನಗರ ಠಾಣೆ ಪೊಲೀಸರು (Karnataka police) ಸದ್ಯ ಬಂಧಿತರಿಂದ 9 ಲಕ್ಷ ರೂಪಾಯಿ ಮೌಲ್ಯದ 48 ಗ್ರಾಂ ಚಿನ್ನಾಭರಣ, 6 ಬೈಕ್, 1 ಕಾರು ಜಪ್ತಿ ಮಾಡಿದ್ದಾರೆ. ಆರೋಪಿಗಳು ಬೀಗ ಹಾಕಿರುವ ಒಂಟಿ ಮನೆಗಳನ್ನು ಟಾರ್ಗೆಟ್ ಮಾಡುತ್ತಿದ್ದರು ಎನ್ನುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲದೇ ಮನೆಗಳವು (Home theft) ಮಾಡಿ ಬಂದ ಹಣದಲ್ಲಿ ಆರೋಪಿಗಳು ಬೈಕ್, ಕಾರು ಖರೀದಿಸಿದ್ದರು ಎನ್ನುವ ಸತ್ಯ ಬಯಲಾಗಿದೆ.

ಮಾಡೆಲಿಂಗ್ ನೆಪದಲ್ಲಿ ಯುವತಿಯರಿಗೆ ಬ್ಲ್ಯಾಕ್ ಮೇಲ್ ಪ್ರಕರಣ ಮಾಡೆಲಿಂಗ್ ನೆಪದಲ್ಲಿ ಯುವತಿಯರಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೂರ್ವ ವಿಭಾಗ ಪ್ರಭಾರ ಡಿಸಿಪಿ ಶರಣಪ್ಪ ಹೇಳಿಕೆ ನೀಡಿದ್ದಾರೆ. ವಿಕೃತ ಸುಖಕ್ಕಾಗಿ ಯುವತಿಯರ ಖಾಸಗಿ ಫೋಟೊವನ್ನು ಆರೋಪಿ ತರಿಸಿಕೊಳ್ಳುತ್ತಿದ್ದ. ಹಲಸೂರು ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ವರದಿಯಾಗಿತ್ತು. ಸದ್ಯ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ ನಕಲಿ ಖಾತೆ ತೆರೆದು ಯುವತಿಯರನ್ನು ವಂಚಿಸಿದ್ದಾನೆ. ಹಲವರಿಗೆ ಬೇರೆ ಬೇರೆ ರೀತಿಯಾಗಿ ಪರಿಚಯಿಸಿಕೊಂಡಿದ್ದ. ಕೆಲವರಿಗೆ ಮಾಡೆಲ್ ಮಾಡುವಾಸೆ ತೋರಿಸಿದ್ದ. ಮತ್ತೆ ಕೆಲವರಿಗೆ ಲೆಸ್ಬಿಯನ್ ಎಂದು ಪರಿಚಯಿಸಿಕೊಂಡಿದ್ದ. ಮಾಡೆಲ್ ಮಾಡುವಾಸೆ ತೋರಿಸಿ ನಗ್ನ ಫೋಟೊ ತರಿಸಿಳ್ಳುತ್ತಿದ್ದ. ನಾನು ಲೆಸ್ಬಿಯನ್ ಅಂತಲೂ ಫೋಟೊ ತರಿಸಿಕೊಳ್ಳುತ್ತಿದ್ದ. ಕೆಲವರು ಫೋಟೊ ಕಳಿಸುವವರಿಗೆ ಹಣ ಕೂಡ ನೀಡುತ್ತಿದ್ದ. ಬ್ಲಾಕ್ ಮಾಡಿದರೆ ಮತ್ತೆ ಬೇರೆ ಖಾತೆ ತೆರೆದು ಬ್ಲಾಕ್ ಮೇಲ್ ಮಾಡುತ್ತಿದ್ದ ಎಂದು ಪೂರ್ವ ವಿಭಾಗ ಪ್ರಭಾರ ಡಿಸಿಪಿ ಶರಣಪ್ಪ ತಿಳಿಸಿದ್ದಾರೆ.

ಬ್ಲಾಕ್ ಮೇಲ್ ಮಾಡಿ ಹೆಚ್ಚಿನ ಫೋಟೊಗೆ ಬೇಡಿಕೆ ಇಡುತ್ತಿದ್ದ. ಆರೋಪಿಯಿಂದ ಮೂರು ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಕಳೆದ ಎರಡು ವರ್ಷಗಳಿಂದ ಇದೇ ಕೆಲಸ ಮಾಡುತ್ತಿದ್ದ ಎನ್ನುವುದು ಬೆಳಕಿಗೆ ಬಂದಿದೆ. ನಾಲ್ಕೈದು ನಕಲಿ ಇನ್​ಸ್ಟಾಗ್ರಾಮ್​ ಖಾತೆ ತೆರೆದಿದ್ದ ಎನ್ನುವುದು ಗೊತ್ತಾಗಿದೆ. 1000 ಕ್ಕೂ ಹೆಚ್ಚು ಖಾಸಗಿ ಫೋಟೋಗಳು ಮೊಬೈಲ್​ನಲ್ಲಿ ಇತ್ತು. 300 ರಿಂದ 400 ವಿಡಿಯೋ ಇರುವುದು ಗೊತ್ತಾಗಿದೆ ಎಂದು ಪೂರ್ವ ವಿಭಾಗ ಪ್ರಭಾರ ಡಿಸಿಪಿ ಶರಣಪ್ಪ ಹೇಳಿದ್ದಾರೆ.

ಇದನ್ನೂ ಓದಿ: Crime News: ಮಗುವನ್ನು ಕೊಂದು ದಂಪತಿ ಆತ್ಮಹತ್ಯೆ, ಕಳ್ಳತನ ಮಾಡುತ್ತಿದ್ದ ವೇಳೆ ಸಿಕ್ಕಿಬಿದ್ದ ಇಬ್ಬರು ಮಹಿಳೆಯರು

Shocking News: ಕಳ್ಳತನ ಮಾಡಿದ ಮಗಳನ್ನು ಹೊಡೆದು, ಸುಟ್ಟು ಹಾಕಿ ಕೊಂದ ತಾಯಿ!

Published On - 1:27 pm, Wed, 12 January 22

Follow Us
TV9 Web
TV9 Web

TV9 Kannada

Read More
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ