PayCM: ಬೊಮ್ಮಾಯಿಗೆ ಅವಹೇಳನ ಮಾಡಿದ್ದ ಪೇಸಿಎಂ ಪೋಸ್ಟರ್: ಪೊಲೀಸ್ ವಶಕ್ಕೆ ಇಬ್ಬರು, ಠಾಣೆಗೆ ಬಂದ ಡಿಕೆ ಶಿವಕುಮಾರ್

ಹೈಗ್ರೌಂಡ್ಸ್​ ಪೊಲೀಸ್​ ಠಾಣೆಗೆ ಬಂದಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪೊಲೀಸರಿಂದ ಮಾಹಿತಿ ಪಡೆಯುತ್ತಿದ್ದಾರೆ.

PayCM: ಬೊಮ್ಮಾಯಿಗೆ ಅವಹೇಳನ ಮಾಡಿದ್ದ ಪೇಸಿಎಂ ಪೋಸ್ಟರ್: ಪೊಲೀಸ್ ವಶಕ್ಕೆ ಇಬ್ಬರು, ಠಾಣೆಗೆ ಬಂದ ಡಿಕೆ ಶಿವಕುಮಾರ್
ಬೆಂಗಳೂರಿನ ವಿವಿಧೆಡೆ ರಾರಾಜಿಸಿದ್ದ ಪೇಸಿಎಂ ಪೋಸ್ಟರ್​
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Sep 22, 2022 | 11:49 AM

ಬೆಂಗಳೂರು: ಬೆಂಗಳೂರಿನ ವಿವಿಧೆಡೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಚಿತ್ರದೊಂದಿಗೆ ರೂಪಿಸಿದ್ದ ಕ್ಯುಆರ್​ ಕೋಡ್ ಒಳಗೊಂಡಿದ್ದ ‘ಪೇಸಿಎಂ’ ಪೋಸ್ಟರ್ ಅಂಟಿಸಿದ್ದ ಐವರನ್ನು ಬುಧವಾರ ರಾತ್ರಿರಾತ್ರಿ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ಪಕ್ಷದ​ ಸೋಷಿಯಲ್ ಮೀಡಿಯಾ ವಿಭಾಗದ ಮುಖ್ಯಸ್ಥ ಬಿ.ಆರ್.ನಾಯ್ಡು, ಸೋಷಿಯಲ್ ಮೀಡಿಯಾ ಸಂಯೋಜಕ ಗಗನ್, ಪವನ್, ಸೋಷಿಯಲ್ ಮೀಡಿಯಾ ಭಾಗದ ಸಂಜಯ್ ಮತ್ತು ವಿಶ್ವನಾಥ್ ಪ್ರಸ್ತುತ ಪೊಲೀಸರ ವಶದಲ್ಲಿದ್ದಾರೆ. ಪೇಸಿಎಂ ಪೋಸ್ಟರ್​ಗೆ ಸಂಬಂಧಿಸಿದಂತೆ ನಗರದ ವಿವಿಧ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರಿಗೆ ಅವಹೇಳನ ಮಾಡಲೆಂದು ‘ಪೇ ಸಿಎಂ’ (PayCM) ಪೋಸ್ಟರ್​​ ಅಭಿಯಾನ ಮಾಡಿದ್ದ ಆರೋಪದ ಮೇಲೆ ಹೈಗ್ರೌಂಡ್ಸ್​ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದರು. ಇದೀಗ ಹೈಗ್ರೌಂಡ್ಸ್​ ಪೊಲೀಸ್​ ಠಾಣೆಗೆ ಬಂದಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಹಿತಿ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ನಡೆಯುತ್ತಿದ್ದ ಪೇಸಿಎಂ ಅಭಿಯಾನವು ರಾಷ್ಟ್ರಮಟ್ಟದಲ್ಲಿ ದೊಡ್ಡ ಸುದ್ದಿಯಾಗಿತ್ತು. ‘ಪೇಸಿಎಂ- ಇಲ್ಲಿ ಶೇ 40 ಸ್ವೀಕರಿಸಲಾಗುವುದು’ ಎಂಬ ಶೀರ್ಷಿಕೆಯಡಿ ಕಾಂಗ್ರೆಸ್​ ಬುಧವಾರ ದೊಡ್ಡ ಅಭಿಯಾನ ನಡೆಸಿತ್ತು. ಇದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರವಾಗಿ ಖಂಡಿಸಿದ್ದರು. ‘ಇದು ಕರ್ನಾಟಕದ ಹೆಸರು ಕೆಡಿಸುವ ಹುನ್ನಾರ ಇದು’ ಎಂದು ಬೇಸರ ವ್ಯಕ್ತಪಡಿಸಿದ್ದರು. ಕಾಂಗ್ರೆಸ್​ನ ಅಭಿಯಾನಕ್ಕೆ ಪ್ರತಿಯಾಗಿ ಬಿಜೆಪಿಯು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಚಿತ್ರಗಳಿದ್ದ ಕ್ಯುಆರ್​ ಕೋಡ್​ ಮಾದರಿಯನ್ನು ಸಿದ್ಧಪಡಿಸಿ, ‘ರಾಜ್ಯವನ್ನು ಲೂಟಿ ಮಾಡಿ ಹಾಳು ಮಾಡಿರುವ ಈ ಭ್ರಷ್ಟ ಜೋಡಿಯನ್ನು ರಾಜ್ಯದಿಂದ ಕಿತ್ತೆಸೆಯಲು ಇದನ್ನು ಸ್ಕ್ಯಾನ್ ಮಾಡಿ’ ಎಂದು ಮತ್ತೊಂದು ಪೋಸ್ಟರ್​ ಬಿಡುಗಡೆ ಮಾಡಿತ್ತು.

ಅಭಿಯಾನವನ್ನು ಸಮರ್ಥಿಸಿಕೊಂಡಿದ್ದ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ, ‘ಪೇಸಿಎಂ ಅಭಿಯಾನ ವೈಯಕ್ತಿಕವಾಗಿ ಮಾಡಿರುವುದಲ್ಲ. ಸಾರ್ವಜನಿಕವಾಗಿ ಚರ್ಚೆ ಆಗಿರುವುದನ್ನು ಪೋಸ್ಟರ್ ಮೂಲಕ ಎಲ್ಲರ ಗಮನಕ್ಕೆ ತಂದಿದ್ದೇವೆ. ಈ ಆರೋಪಗಳಿಗೆ ಉತ್ತರ ಕೊಡಬೇಕಾದವರು ಬಿಜೆಪಿಯವರು. ಆದರೆ ಚರ್ಚೆ ಮಾಡಲು ಬಿಜೆಪಿಯವರು ಹೆದರುತ್ತಿದ್ದಾರೆ’ ಎಂದಿದ್ದರು.

ಪೋಸ್ಟರ್​ ವಿಚಾರವಾಗಿ ಕಾಂಗ್ರೆಸ್​ ವಿರುದ್ಧ ಹರಿಹಾಯ್ದಿದ್ದ ಬಿಜೆಪಿ ನಾಯಕ ಸಿ.ಟಿ.ರವಿ, ‘ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್‌ ಟೂಲ್‌ ಕಿಟ್ ತಯಾರು ಮಾಡಿದೆ. 40 ಪರ್ಸೆಂಟ್ ಸರ್ಕಾರ ಎಂದು ಮೂರ್ನಾಲ್ಕು ತಿಂಗಳಿನಿಂದ ಹೇಳುತ್ತಿರುವ ಕಾಂಗ್ರೆಸ್​ ಸಾಕ್ಷಿ ಸಮೇತ ಒಂದಾದರೂ ದೂರು ಕೊಟ್ಟಿಲ್ಲ. ಈಗ ಲೋಕಾಯುಕ್ತ ಸನ್ನದ್ಧವಾಗಿದೆ. ಸುಳ್ಳನ್ನು ಸಾವಿರ ಸಲ ಹೇಳಿ ಸತ್ಯ ಮಾಡಲು ಅವರು ಪ್ರಯತ್ನಿಸುತ್ತಿದ್ದಾರೆ’ ಎಂದು ರವಿ ವಾಗ್ದಾಳಿ ನಡೆಸಿದ್ದರು.

ಬೆಂಗಳೂರಿನ ಕ್ವೀನ್ಸ್​ ರೋಡ್, ಜಯಮಹಲ್, ಕಂಟೋನ್​ಮೆಂಟ್ ಸುತ್ತಮುತ್ತ ಗೋಡೆಗಳಿಗೆ ಅಂಟಿಸಿದ್ದ ‘ಪೇಸಿಎಂ’ ಪೋಸ್ಟರ್​ಗಳನ್ನು ಬಿಜೆಪಿ ಕಾರ್ಯಕರ್ತರು ತೆರವುಗೊಳಿಸಿದ್ದರು. ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅಭಿಯಾನದ ಕುರಿತು ಪ್ರತಿಕ್ರಿಯಿಸಿ, ‘ಹೈಗ್ರೌಂಡ್ಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೋಸ್ಟರ್ ಅಂಟಿಸಿದವರ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದಿದ್ದರು.

Published On - 10:17 am, Thu, 22 September 22

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ