AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳರ ಜತೆ ಸೇರಿ ಕಳ್ಳತನ ಮಾಡುವ ಪೊಲೀಸಪ್ಪ, ಕಾನ್ಸ್​ಟೇಬಲ್ ಯಲ್ಲಪ್ಪ ಸಿಕ್ಕಿಬಿದ್ದನಪ್ಪ

ಪ್ರಕರಣಗಳನ್ನು ಭೇದಿಸಿ ಅಪರಾಧಿಗಳನ್ನು ಹಿಡಿದು ಅವರನ್ನು ನ್ಯಾಯಾಲಯಕ್ಕೆ ಒಪ್ಪಿಸಿ ಅಪರಾಧ ಕೃತ್ಯಗಳನ್ನು ತಡೆಗಟ್ಟುವಲ್ಲಿ ಪೋಲಿಸರ ಪಾತ್ರ ಬಹಳ ದೊಡ್ಡದಾಗಿದೆ. ಆದ್ರೆ, ಇಲ್ಲೋರ್ವ ಪೊಲೀಸಪ್ಪ ದರೋಡೆಕೋರರನ್ನು ಹಿಡಿಯುವ ಬದಲಿಗೆ ಅವರ ಜೊತೆಯಲ್ಲೇ ಸೇರಿಕೊಂಡು ಕಳ್ಳತನಕ್ಕೆ ಇಳಿದಿದ್ದಾನೆ. ಈಗಾಗಲೇ ಎರಡು ಪ್ರಕರಣದಲ್ಲಿ ಸಿಲುಕಿ ಅಮಾನುಗೊಂಡಿರುವ ಕಾನ್ಸ್​ಟೇಬಲ್ ಈಗ ಮೂರನೇ ಕಳ್ಳತನ ಕೇಸ್​ನಲ್ಲಿ ಪೊಲೀಸರ ಅತಿಥಿಯಾಗಿದ್ದಾನೆ. ಈ ಪ್ರಕರಣದ ವಿವರ ಈ ಕೆಳಗಿನಂತಿದೆ.

ಕಳ್ಳರ ಜತೆ ಸೇರಿ ಕಳ್ಳತನ ಮಾಡುವ ಪೊಲೀಸಪ್ಪ, ಕಾನ್ಸ್​ಟೇಬಲ್ ಯಲ್ಲಪ್ಪ ಸಿಕ್ಕಿಬಿದ್ದನಪ್ಪ
ಬಂಧಿತ ಕಾನ್ಸ್​ಟೇಬಲ್ ಯಲ್ಲಪ್ಪ
Jagadisha B
| Updated By: ರಮೇಶ್ ಬಿ. ಜವಳಗೇರಾ|

Updated on: Oct 17, 2023 | 12:02 PM

Share

ಬೆಂಗಳೂರು, (ಅಕ್ಟೋಬರ್ 17): ದರೋಡೆಕೋರರನ್ನು ಹಿಡಿಯಬೇಕಾದವರೇ ಕಳ್ಳರ ಜೊತೆ ಸೇರಿ ಮನೆಕಳ್ಳತನ(theft Cases) ಮಾಡುತ್ತಿದ್ದ ಪೊಲೀಸ್ ಕಾನ್ಸ್​ಟೇಬಲ್ (Police Constable) ಅರೆಸ್ಟ್ ಆಗಿದ್ದಾನೆ. ಹೌದು….ಬೇಲಿಯೇ ಎದ್ದು ಹೊಲ ಮೇಯ್ದಂತೆ, ಕಳ್ಳರನ್ನು ಹಿಡಿದು ಶಿಕ್ಷೆಗೊಳಪಡಿಸುವ ಪೊಲೀಸಪ್ಪ ಕಳ್ಳರ ಜೊತೆ ಸೇರಿಕೊಂಡು ಮನೆಗಳ್ಳತನ ಮಾಡುತ್ತಿದ್ದ ಪೊಲೀಸ್​ ಕಾನ್ಸ್​​ಟೇಬಲ್​​ ಯಲ್ಲಪ್ಪ ಎನ್ನುವಾತನ್ನನ್ನು ಬೆಂಗಳೂರಿನ(Bengaluru)  ಜ್ಞಾನಭಾರತಿ ಪೊಲೀಸರು ಬಂಧಿಸಿದ್ದಾರೆ.

ಒಂದಲ್ಲ ಎರಡಲ್ಲ ಒಟ್ಟು ಮೂರು ಮನೆಗಳ್ಳತನ ಪ್ರಕರಣದಲ್ಲಿ ಪೊಲೀಸ್​ ಕಾನ್ಸ್​​ಟೇಬಲ್​​ ಯಲ್ಲಪ್ಪ ಭಾಗಿಯಾಗಿದ್ದ. ಈ ಹಿಂದೆ ಚಂದ್ರಾಲೇಔಟ್, ಚಿಕ್ಕ ಜಾಲ,ಬನಶಂಕರಿ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ್ದ ಆರೋಪದ ಮೇಲೆ ಯಲ್ಲಪ್ಪನನ್ನ ಅಮಾನತು ಮಾಡಿ ತನಿಖೆಗೆ ಅದೇಶ ಹೊರಡಿಸಲಾಗಿತ್ತು. ಆದರೂ ತನ್ನ ಹಳೆ ಚಾಳಿಯನ್ನ ಬಿಡದ ಯಲ್ಲಪ್ಪ, ತನ್ನ ಕೈಚಳಕ ಮುಂದುವರೆಸಿ ಇದೀಗ ಲಾಕ್​ ಆಗಿದ್ದಾನೆ.

ಇದನ್ನೂ ಓದಿ: ಬೆಂಗಳೂರು ಏರ್ಪೋರ್ಟ್ ರಸ್ತೆಯಲ್ಲಿ ಮೂರು ಕಡೆ ಕಳ್ಳತನ, ಆನೇಕಲ್​ನಲ್ಲಿ ಕಾರಿನ ಗಾಜು ಒಡೆದು ಹಣ ಕದ್ದ ಖದೀಮರು

ಚಂದ್ರಾಲೇಔಟ್, ಚಿಕ್ಕ ಜಾಲದಲ್ಲೂ ಕೈ ಚಳಕ ತೋರಿಸಿದ್ದ ಯಲ್ಲಪ್ಪ. ಈ ಹಿಂದೆ ಕೂಡ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದ. ಅಗ ಬನಶಂಕರಿ ಠಾಣೆಯ ಕ್ರೈಂ ವಿಭಾಗದ ಕಾನ್ಸ್ ಟೇಬಲ್ ಅಗಿದ್ದ. ಕಳ್ಳತನ ಆರೋಪಿಗಳ ವಿಚಾರಣೆ ವೇಳೆ ಕಾನ್ಸ್​ಟೇಬಲ್​ ಯಲ್ಲಪನ ಪಾತ್ರದ ಬಗ್ಗೆ ಬಾಯ್ಬಿಟ್ಟಿದ್ದರು. ಬಳಿಕ ತನಿಖೆ ನಡೆಸಿದ್ದ ಪೊಲೀಸರು ಪ್ರಾಥಮಿಕ ಹಂತದಲ್ಲಿ ಯಲಪ್ಪನ ಪಾತ್ರದ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಯಲ್ಲಪ್ಪನನ್ನು ಅಮಾನತು ಮಾಡಲಾಗಿತ್ತು.

ಇನ್ನು ಕಳ್ಳತನ ಮಾಡಿದ್ದ ವಸ್ತುಗಳ ರಿಕವರಿಗಾಗಿ ಯಲ್ಲಪ್ಪನನ್ನು ಆತನ ಊರಿಗೆ ಕರೆದುಕೊಂಡು ಹೋದಾಗ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದ. ಊರಿಗೆ ಮಾತ್ರ ಕರೆದುಕೊಂಡು ಹೋಗಬೇಡಿ ಎಂದು ಪಟ್ಟು ಹಿಡಿದಿದ್ದ ಎಂದು ತಿಳಿದುಬಂದಿದೆ.

ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಆರಕ್ಷಕರು ಇರುತ್ತಾರೆ. ಸ್ಥಳೀಯವಾಗಿ ನಡೆಯುವ ಸಾವಿರಾರು ಪ್ರಕರಣಗಳನ್ನು ಬೇಧಿಸಿ ಅಪರಾಧಿಗಳನ್ನು ಹಿಡಿದು ಅವರನ್ನು ನ್ಯಾಯಾಲಯಕ್ಕೆ ಒಪ್ಪಿಸಿ ತನಿಖೆ ನಡೆಯುವಾಗ ಅ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತವಾದ ಸಾಕ್ಷಿಗಳನ್ನು ಒದಗಿಸಿ ಅಪರಾಧಿಗೆ ಶಿಕ್ಷೆಯಾಗುವಂತೆ ಮಾಡುವುದರಲ್ಲಿ ಪೋಲಿಸರ ಪಾತ್ರ ಬಹಳ ಮುಖ್ಯವಾಗಿರುತ್ತದೆ. ಅದೆಷ್ಟೋ ಪ್ರಕರಣಗಳನ್ನು ನ್ಯಾಯಾಲಯದವರೆಗೂ ಬಾರದಂತೆ ಸ್ಥಳೀಯವಾಗಿಯೇ ಪೋಲಿಸರು ಬಗೆಹರಿಸುವ ಕಾರಣ ನಮ್ಮ ಸಮಾಜದಲ್ಲಿ ಪೋಲಿಸರಿಗೆ ಅಪಾರವಾದ ಗೌರವ ಇದೆ, ನಮ್ಮ ಕರ್ನಾಟಕದ ಪೋಲಿಸರೆಂದರೆ ದಕ್ಷತೆ ಮತ್ತು ಪ್ರಾಮಣಿಕತೆಗೆ ಇಡೀ ದೇಶದಲ್ಲೇ ಹೆಸರುವಾಸಿಯಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಅಪರಾಧಿಗಳನ್ನು ಹಿಡಿದು ಅವರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕಾದಂತಹ ಕೆಲ ಪೋಲೀಸರೇ ಈ ರೀತಿಯ ಅಂದರೆ ಲಂಚ ಹೀಗೆ ಅನೇಕ ಅಪರಾಧಗಳಲ್ಲಿ ಭಾಗಿಯಾಗುತ್ತಿರುವುದು ದುರಂತ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ