Bengaluru News: ಕೆಟ್ಟು ನಿಂತ ಕಾರು: ಚಾಲಕನ ಸಹಾಯಕ್ಕೆ ಹೋಗಿದ್ದ ಕಾನ್ಸ್ಟೇಬಲ್ ದುರಂತ ಅಂತ್ಯ
ಕೆಟ್ಟು ನಿಂತಿದ್ದ ಕಾರು ಪರಿಶೀಲನೆ ಮಾಡಲು ಹೋಗಿದ್ದ ಕಾನ್ಸ್ಟೇಬಲ್ ದುರಂತ ಅಂತ್ಯ ಕಂಡಿದ್ದು, ಅದೃಷ್ಟವಶಾತ್ ಇನ್ಸ್ಪೆಕ್ಟರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (kempegowda international airport) ರಸ್ತೆ ಚಿಕ್ಕಜಾಲ ಬಳಿಯ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಕಾರು ಪರಿಶೀಲನೆ ಮಾಡಲು ಹೋಗಿದ್ದ ಕಾನ್ಸ್ಟೇಬಲ್ ದುರಂತ ಕಂಡಿದ್ದಾರೆ. ನಿನ್ನೆ(ಜುಲೈ 02) ರಾತ್ರಿ ನೈಟ್ ರೌಂಡ್ಸ್ನಲ್ಲಿದ್ದ ದೇವನಹಳ್ಳಿ ಇನ್ಸ್ಪೆಕ್ಟರ್ ಧರ್ಮೆಗೌಡ ಮತ್ತು ಜೀಪ್ ಡ್ರೈವ್ ಮಾಡುತ್ತಿದ್ದ ಕಾನ್ಸ್ಟೇಬಲ್ ಸುರೇಶ್, ಹೆದ್ದಾರಿ ಬದಿಯಲ್ಲಿ ಕೆಟ್ಟು ನಿಂತಿದ್ದ ಕಾರು ಪರಿಶೀಲನೆಗೆ ತೆರಳಿದ್ದಾರೆ. ಆ ವೇಳೆ ಇನ್ನೊಂದು ಕಾರು ಬಂದು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕೆಟ್ಟು ನಿಂತಿದ್ದ ಕಾರು ಪರಿಶೀಲನೆಗೆ ತೆರಳಿದ್ದ ಕಾನ್ಸ್ಟೇಬಲ್ ಸುರೇಶ್ ಮೃತಪಟ್ಟಿದ್ದು, ಅದೃಷ್ಟವಶಾತ್ ಇನ್ಸ್ಪೆಕ್ಟರ್ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸಹಾಯಕ್ಕೆ ಹೋಗಿದ್ದ ಕಾನ್ಸ್ಟೇಬಲ್ ದುರಂತ ಅಂತ್ಯ
ಚಿಕ್ಕಜಾಲ ಬಳಿಯ ಹೆದ್ದಾರಿಯಲ್ಲಿ ಇನ್ನೋವಾ ಕಾದು ಕೆಟ್ಟು ನಿಂತಿತ್ತು. ರಾತ್ರಿ ಗಸ್ತಿನಲ್ಲಿದ್ದ ದೇವನಹಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಹಾಗೂ ಕಾನ್ಸ್ಟೇಬಲ್ ಸುರೇಶ್ ಕೆಟ್ಟು ನಿಂತಿದ್ದ ಕಾರಿನ ಬಳಿ ಹೋಗಿ ಏನಾಗಿದೆ? ಎಂದು ವಿಚಾರಿಸಲು ಹೋಗಿದ್ದಾರೆ. ಆದ್ರೆ ಇದೇ ಸಮಯದಲ್ಲಿ ಫೋನ್ನಲ್ಲಿ ಮಾತನಾಡಲು ಇನ್ಸಪೇಕ್ಟರ್ ಧರ್ಮೆಗೌಡ ಸೈಡಿಗೆ ಹೋಗಿದ್ದರು. ಈ ವೇಳೆ ಅಸೆಂಟ್ ಕಾರು ಬಂದು ಕೆಟ್ಟು ನಿಂತಿದ್ದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿದೆ.
ಅಸೆಂಟ್ ಕಾರಿನಲ್ಲಿ ಮೂವರು ಯುವಕರು ಹಾಗೂ ಮೂವರು ಯುವತಿಯರಿದ್ದು, ರಾತ್ರಿಯೆಲ್ಲ ಪಾರ್ಟಿ ಮಾಡಿಕೊಂಡು ಮುಂಜಾನೆ ನಂದಿಬೆಟ್ಟಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಕೆಟ್ಟು ನಿಂತಿದ್ದ ಕಾರಿನ ಚಾಲಕನನ್ನು ವಿಚಾರಿಸಲು ಹೋಗಿದ್ದ ಕಾನ್ಸ್ಟೇಬಲ್ ಸುರೇಶ್ ಮೃತಪಟ್ಟಿದ್ದು, ಅಸೆಂಟ್ ಕಾರಿನ ಚಾಲಕನ ಕೈ ಕಾಲು ಮುರಿದಿವೆ. ಇನ್ನು ಕುಡಿದ ಮತ್ತಿನಲ್ಲಿದ್ದ ಯುವಕ ಯುವತಿಯರಿಗೂ ಸಹ ಗಂಭೀರ ಗಾಯಗಳವಾಗಿವೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಇನ್ಸ್ಪೆಕ್ಟರ್ ಬಚಾವ್ ಆಗಿದ್ದಾರೆ.
ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ
ಬೆಂಗಳೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿ4ರಲ್ಲಿ ನಡೆದಿದೆ. ಘಟನೆಯಲ್ಲಿ ಮಂಡ್ಯ ಮೂಲದ ಪ್ರಸನ್ನ(40)ಗೆ ಗಂಭೀರ ಗಾಯವಾಗಿದ್ದು, ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ಕೆಎಸ್ಆರ್‌ಟಿಸಿ ಬಸ್ ಚಾಲಕನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ