ರೋಗಿಯ ಪ್ರಾಣ ಉಳಿಸಲು ಮೆಕಾನಿಕ್ ಆದ ಪೊಲೀಸ್ ಸಿಬ್ಬಂದಿ; ಆ್ಯಂಬುಲೆನ್ಸ್ ಟೈರ್ ಚೇಂಜ್ ಮಾಡಿ ಸಹಾಯ, ಪೊಲೀಸ್ ಕಾರ್ಯಕ್ಕೆ ಬಿಗ್​ ಸೆಲ್ಯೂಟ್!

ಫೆಬ್ರವರಿ 2ರ ಮಧ್ಯಾಹ್ನ ಗ್ಲೋಬಲ್ ಹಾಸ್ಪಿಟಲ್ ನಿಂದ ಬೇರೆ ಖಾಸಗಿ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ರೋಗಿಯನ್ನು ಶಿಫ್ಟ್ ಮಾಡಲಾಗುತ್ತಿತ್ತು. ಈ ವೇಳೆ ಸಿಐಡಿ ಕಚೇರಿ ಬಳಿ ಆ್ಯಂಬುಲೆನ್ಸ್ ಟೈರ್ ಪಂಚರ್ ಆಗಿದೆ.

ರೋಗಿಯ ಪ್ರಾಣ ಉಳಿಸಲು ಮೆಕಾನಿಕ್ ಆದ ಪೊಲೀಸ್ ಸಿಬ್ಬಂದಿ; ಆ್ಯಂಬುಲೆನ್ಸ್ ಟೈರ್ ಚೇಂಜ್ ಮಾಡಿ ಸಹಾಯ, ಪೊಲೀಸ್  ಕಾರ್ಯಕ್ಕೆ ಬಿಗ್​ ಸೆಲ್ಯೂಟ್!
ಕಾನ್ಸ್ಟೇಬಲ್ ಕಾಸಪ್ಪ ಕಲ್ಲೂರು
Follow us
TV9 Web
| Updated By: ಆಯೇಷಾ ಬಾನು

Updated on:Feb 02, 2022 | 11:38 AM

ಬೆಂಗಳೂರು: ರೋಗಿಯೊಬ್ಬನ ಪ್ರಾಣ ಉಳಿಸಲು ಪೊಲೀಸ್ ಸಿಬ್ಬಂದಿ(Police Constable) ತಾನೇ ಮೆಕಾನಿಕ್ ಆಗಿ ಆ್ಯಂಬುಲೆನ್ಸ್ (Ambulance)ಟೈರ್ ಚೇಂಜ್ ಮಾಡಿ ವ್ಯಕ್ತಿಯ ಪ್ರಾಣ ಉಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಂಚಾರಿ ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಫೆಬ್ರವರಿ 2ರಂದು ಮಧ್ಯಾಹ್ನ ಸಿಐಡಿ ಕಚೇರಿ ಬಳಿ ಈ ಘಟನೆ ನಡೆದಿದೆ. ಗ್ಲೋಬಲ್ ಹಾಸ್ಪಿಟಲ್ ನಿಂದ ಬೇರೆ ಖಾಸಗಿ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ರೋಗಿಯನ್ನು ಶಿಫ್ಟ್ ಮಾಡಲಾಗುತ್ತಿತ್ತು. ಈ ವೇಳೆ ಆ್ಯಂಬುಲೆನ್ಸ್ ಟೈರ್ ಪಂಚರ್ ಆಗಿದೆ. ಈ ವೇಳೆ ಪೊಲೀಸ್ ಸಿಬ್ಬಂದಿ ರೋಗಿಯ ಪ್ರಾಣ ಉಳಿಸಲು ಸಹಾಯ ಮಾಡಿದ್ದಾರೆ.

ಫೆಬ್ರವರಿ 2ರ ಮಧ್ಯಾಹ್ನ ಗ್ಲೋಬಲ್ ಹಾಸ್ಪಿಟಲ್ ನಿಂದ ಬೇರೆ ಖಾಸಗಿ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ರೋಗಿಯನ್ನು ಶಿಫ್ಟ್ ಮಾಡಲಾಗುತ್ತಿತ್ತು. ಈ ವೇಳೆ ಸಿಐಡಿ ಕಚೇರಿ ಬಳಿ ಆ್ಯಂಬುಲೆನ್ಸ್ ಟೈರ್ ಪಂಚರ್ ಆಗಿದೆ. ಆಗ ವಿಷಯ ತಿಳಿದ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸ್ ಠಾಣಾ ಕಾನ್ಸ್ಟೇಬಲ್ ಕಾಸಪ್ಪ ಕಲ್ಲೂರು ಸಮಯ ಪ್ರಜ್ಞೆ ಮೆರೆದಿದ್ದಾರೆ. ಆ್ಯಂಬುಲೆನ್ಸ್ ಟೈರ್ ಪಂಚರ್ ಆಗುತ್ತಿದ್ದಂತೆ ರೋಗಿಯ ಪತ್ನಿ ಹಾಗೂ ಮಗಳು ದಿಕ್ಕು ಕಾಣದೆ ಕಂಗಾಲಾದ್ರು. ಆಗ ಆ್ಯಂಬುಲೆನ್ಸ್ ನಲ್ಲಿ ರೋಗಿಯ ಪರಿಸ್ಥಿತಿ ನೋಡಿದ ಸಂಚಾರಿ ಪೊಲೀಸ್ ಸಿಬ್ಬಂದಿ ಕಾಸಪ್ಪ ಕಲ್ಲೂರು ರೋಗಿಯ ಪ್ರಾಣ ಉಳಿಸಲು ಸ್ವತಃ ತಾನೇ ಮೆಕಾನಿಕ್ ಆಗಿ ಆ್ಯಂಬುಲೆನ್ಸ್ ಟೈರ್ ಚೇಂಜ್ ಮಾಡಿ ಆಸ್ಪತ್ರೆಗೆ ಹೋಗಲು ಸಹಾಯ ಮಾಡಿದ್ದಾರೆ. ಸದ್ಯ ಕಾನ್ಸ್ಟೇಬಲ್ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಲವ್​ ಮಾಕ್ಟೇಲ್​ 3’ ಮಾಡ್ತೀರಾ ಎಂಬ ಪ್ರಶ್ನೆಗೆ ಮಿಲನಾ ನಾಗರಾಜ್​ ಏನ್​ ಅಂದ್ರು?

Published On - 10:08 am, Wed, 2 February 22

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್