ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಕೇಸ್‌: ಓರ್ವ ಪೊಲೀಸ್ ವಶಕ್ಕೆ

ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ತನಿಖೆ ಚುರುಕುಗೊಳಸಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದಾರೆ. ಇದೀಗ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಹಿಂದೆ ಪ್ರತಿಮಾ ಅವರ ಕಾರು ಚಾಲಕನಾಗಿದ್ದ ಕಿರಣ್​ ಎನ್ನುವಾತನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.

ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಕೇಸ್‌: ಓರ್ವ ಪೊಲೀಸ್ ವಶಕ್ಕೆ
ಪ್ರತಿಮಾ , ಕೊಲೆಯಾದ ಅಧಿಕಾರಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Nov 06, 2023 | 10:40 AM

ಬೆಂಗಳೂರು, (ನವೆಂಬರ್ 06): ಗಣಿ-ಭೂವಿಜ್ಞಾನ ಇಲಾಖೆ (Mines and Geology Department) ಉಪ ನಿರ್ದೇಶಕಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಹಿಂದೆ ಪ್ರತಿಮಾ ಕಾರು ಚಾಲಕನಾಗಿದ್ದ ಕಿರಣ್ ಎನ್ನುವಾತನನ್ನು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹಲವು ವರ್ಷಗಳಿಂದ ಕಾರು ಚಾಲಕನಾಗಿದ್ದ ಕಿರಣ್​ನನ್ನು ಪ್ರತಿಮಾ ಅವರು ತೆಗೆದುಹಾಕಿದ್ದರು. ಕೆಲಸದಿಂದ ತೆಗದುಹಾಕಿದ್ದಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕಿರಣ್​ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.

ಕಿರಣ್ ಕಳೆದ ಐದು ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ಮಾಡುತ್ತಿದ್ದ. ಕಿರಣ್ ತಂದೆ ಸುರೇಶ್ ಸಹ ಇದೇ ಇಲಾಖೆಯಲ್ಲಿ ಚಾಲಕಾರಿದ್ದರು. ಆದ್ರೆ, ಪ್ರತಿಮಾ ಅವರು ಕಿರಣ್​ನನ್ನು ಕೆಲಸದಿಂದ ತೆಗೆದುಹಾಕಿದ್ದರು. ಹೀಗಾಗಿ ಕಿರಣನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಗಮನಿಸಬೇಕಾದ ಅಂಶ ಅಂದರೆ ಕೃತ್ಯ ನಡೆದ ಬಳಿಕ ಕಿರಣ್ ಚಾಮರಾಜನಗರ ಕಡೆಗೆ ಎಸ್ಕೇಪ್ ಆಗಿದ್ದ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ದಂಡುಪಾಳ್ಯ ಸಿನಿಮಾ ರೀತಿಯಲ್ಲಿ ಅಧಿಕಾರಿ ಪ್ರತಿಮಾ ಹತ್ಯೆ: ಇಬ್ಬರು ಹಂತಕರ ಸ್ಫೋಟಕ ಅಂಶ ಬೆಳಕಿಗೆ 

ಕಿರಣ್​ನನ್ನು ಕೆಲಸದಿಂದ ತೆಗೆದಿದ್ಯಾಕೆ?

ಹಲವು ವರ್ಷಗಳಿಂದ ಇಲಾಖೆಯ ಕಾರು ಚಾಲಕನಾಗಿದ್ದ ಕಿರಣ್​ ನನ್ನು ಪ್ರತಿಮಾ ಅವರೇ ಕೆಲಸದಿಂದ ತೆಗೆದು ಹಾಕಿದ್ದರು. ಯಾಕಂದರೆ ಅಕ್ರಮ ಕಲ್ಲು ಗಣಿಗಾರಿಕೆ ಮೇಲೆ ರೇಡ್​ ಹೋಗುವ ಮಾಹಿತಿಯನ್ನು ಲೀಕ್ ಮಾಡುತ್ತಿದ್ದ. ಈ ಕಾರಣಕ್ಕೆ ಪ್ರತಿಮಾ ಅವರು ಕಿರಣ್​ಗೆ ಎಚ್ಚರಿಕೆ ನೀಡಿದ್ದರು. ಹಾಗೇ ಕೆಲ ದಿನಗಳ ಹಿಂದೆ ಒಂದು ಅಕ್ಸಿಡೆಂಟ್ ಮಾಡಿದ್ದ. ಈ ಕಾರಣಕ್ಕೆ ಪ್ರತಿಮಾ ಅವರು ಕಾರು ಚಾಲಕ ಕಿರಣ್​ನನ್ನು ಕೆಲಸದಿಂದ ತೆಗೆದಿದ್ದರು ಎಂದು ತಿಳಿದುಬಂದಿದೆ.

ಕಿರಣ್​ ಮೇಲೆ ಪೊಲೀಸರು ಹೆಚ್ಚು ಅನುಮಾನ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಕಾನೂನು ಪ್ರಕ್ರಿಯೆ ಮುಗಿದ ಬಳಿಕ ಈತನ್ನು ಬಂಧಿಸುವ ಸಾಧ್ಯತೆಗಳಿವೆ. ಒಂದು ವೇಳೆ ಅರೆಸ್ಟ್ ಮಾಡಿದರೆ ಮೊದಲು ನ್ಯಾಯಾಲಯದ ಮುಂದೆ ಹಾಜರುಪಡಿಸಿ ವಿಚಾರಣೆ ಮಾಡಬೇಕಿದೆ ಎಂದು ಕಸ್ಟಡಿಗೆ ಕೇಳುವ ಸಾಧ್ಯತೆಗಳು ಹೆಚ್ಚಿವೆ.

ಶನಿವಾರ ಸಂಜೆ 7.30ರ ಸುಮಾರಿಗೆ ಸುಬ್ರಹ್ಮಣ್ಯ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕಲ್ಲಸಂದ್ರದ ಗೋಕುಲ್‌ ಅಪಾರ್ಟ್ಮೆಂಟ್‌ನ ಮನೆಗೆ ನುಗ್ಗಿ ಗಣಿ ಭೂವಿಜ್ಙಾನ ಇಲಾಖೆ ಉಪ ನಿರ್ದೇಶಕಿಯಾಗಿದ್ದ ಪ್ರತಿಮಾ ಅವರನ್ನು ಕೊಲೆ ಮಾಡಲಾಗಿತ್ತು. ಹಗ್ಗದಿಂದ ಕುತ್ತಿಗೆಗೆ ಬಿಗಿದು ಬಳಿಕ ಚಾಕುವಿನಿಂದ ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಿದ್ದು, ಇದೀಗ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಈಗಾಗಲೇ ಆರೋಪಿಗಳ ಪತ್ತೆಗೆ ಮೂರು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದ್ದು, ವೈಯಕ್ತಿಕ ಜೀವನ, ವೃತ್ತಿ ಜೀವನ, ಹಣಕಾಸು ( ಆರ್ಥಿಕ ) ಜೀವನ ಈ ಮೂರು ಆಯಾಮಗಳಲ್ಲಿ ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:10 am, Mon, 6 November 23

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್