ಜಾರಿ ನಿರ್ದೇಶನಾಲಯ ಅಧಿಕಾರಿಗಳ ವಿರುದ್ಧ ಪೊಲೀಸ್​ FIR: ಕೇಸ್​ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಇಡಿ

ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧ ಪೊಲೀಸರ ಎಫ್ಐಆರ್​ ಪ್ರಕರಣ ರದ್ದು ಇಡಿ ಉಪ ನಿರ್ದೇಶಕ ಮನೋಜ್ ಮಿಟ್ಟಲ್ ಮತ್ತು ಇಡಿ ಸಹಾಯಕ ನಿರ್ದೇಶಕ ಅಜಯ್ ಕುಮಾರ್ ವೈದ್ಯರಿಂದ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ. ದೂರುದಾರ ವೈ.ಬಿ.ಅಶ್ವತ್ಥ್‌ ನಾರಾಯಣಗೆ ಹೈಕೋರ್ಟ್ ನೋಟಿಸ್​ ನೀಡಿದ್ದು, ವಿಲ್ಸನ್ ಗಾರ್ಡನ್ ಠಾಣೆಯ ಪೊಲೀಸರ ತನಿಖೆಗೆ ತಡೆ ನೀಡಿದೆ. 

ಜಾರಿ ನಿರ್ದೇಶನಾಲಯ ಅಧಿಕಾರಿಗಳ ವಿರುದ್ಧ ಪೊಲೀಸ್​ FIR: ಕೇಸ್​ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಇಡಿ
ಹೈಕೋರ್ಟ್
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Feb 02, 2024 | 6:14 PM

ಬೆಂಗಳೂರು, ಫೆಬ್ರುವರಿ 2: ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧ ಪೊಲೀಸರ ಎಫ್ಐಆರ್​​ (FIR) ಪ್ರಕರಣ ರದ್ದು ಕೋರಿ ಇಡಿ ಅಧಿಕಾರಿಗಳು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಜಾರಿ ನಿರ್ದೇಶನಾಲಯದ ಉಪ ನಿರ್ದೇಶಕ ಮನೋಜ್ ಮಿಟ್ಟಲ್ ಮತ್ತು ಇಡಿ ಸಹಾಯಕ ನಿರ್ದೇಶಕ ಅಜಯ್ ಕುಮಾರ್ ವೈದ್ಯರಿಂದ ಅರ್ಜಿ ಸಲ್ಲಿಸಲಾಗಿದೆ. ಕೊಮುಲ್ ನಿರ್ದೇಶಕ ವೈ.ಬಿ.ಅಶ್ವತ್ಥ್‌ ನಾರಾಯಣರಿಂದ ಎಫ್ಐಆರ್​ ದಾಖಲಿಸಲಾಗಿತ್ತು. ಇಡಿ ಅಧಿಕಾರಿಗಳ ವಿರುದ್ಧ ವಿಲ್ಸನ್‌ಗಾರ್ಡನ್ ಪೊಲೀಸರಿಂದ ಮೊಕದ್ದಮೆ ಹೂಡಲಾಗಿದೆ. ಇಡಿಯಿಂದ‌ ವಿಚಾರಣೆ ವೇಳೆ ಪ್ಲಾಸ್ಟಿಕ್ ಪೈಪ್‌ನಿಂದ ಹೊಡೆದಿದ್ದಾರೆಂದು ಆರೋಪ ಮಾಡಲಾಗಿದೆ.

ಸುಳ್ಳು ದೂರೆಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ವಾದ ಮಂಡಿಸಿದ್ದಾರೆ. ದೂರುದಾರ ವೈ.ಬಿ.ಅಶ್ವತ್ಥ್‌ ನಾರಾಯಣಗೆ ಹೈಕೋರ್ಟ್ ನೋಟಿಸ್​ ನೀಡಿದ್ದು, ವಿಲ್ಸನ್ ಗಾರ್ಡನ್ ಠಾಣೆಯ ಪೊಲೀಸರ ತನಿಖೆಗೆ ತಡೆ ನೀಡಿದೆ.

ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ (ಕೋಚಿಮುಲ್​) ನಿರ್ದೇಶಕ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ ಸುಧಾಕರ್​ ಅವರ ಆಪ್ತ ವೈ.ಬಿ.ಅಶ್ವತ್ಥ್‌ ನಾರಾಯಣ ಅವರ ಚಿಂತಾಮಣಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದರು. ವೈ.ಬಿ.ಅಶ್ವತ್ಥ್‌ ನಾರಾಯಣ ಅವರು ಎರಡು ಬಾರಿ ಪಕ್ಷೇತರರಾಗಿ ಕೋಚಿಮುಲ್ ನಿರ್ದೇಶಕರಾಗಿದ್ದರು.

ಇದನ್ನೂ ಓದಿ: ಕೋಚಿಮುಲ್ ಅವ್ಯವಹಾರ: ಶಾಸಕ ಕೆ.ವೈ.ನಂಜೇಗೌಡ ಮನೆ ಮೇಲೆ ಇಡಿ ದಾಳಿ

ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ನೇಮಕಾತಿಯಲ್ಲಿ ಅಕ್ರಮ ಇತ್ತೀಚೆಗೆ ಸದ್ದು ಮಾಡಿತ್ತು. ಕೋಟ್ಯಂತರ ರೂಪಾಯಿ ಅವ್ಯವಹಾರ ಪ್ರಕರಣ ಬೆಚ್ಚಿಬೀಳಿಸಿತ್ತು. ನೇಮಕಾತಿ ಪ್ರಕ್ರಿಯೆ ಹಣ, ಶಿಫಾರಸು ಪತ್ರಗಳ ಮೇಲೆ ನಡೆದಿದೆ ಅನ್ನೋ ಆರೋಪ ಕೇಳಿ ಬಂದಿತ್ತು. ಆದರೆ ಇಲ್ಲಿವರೆಗೆ ಅಂತಿಮ ನೇಮಕಾತಿ ಪಟ್ಟಿಯನ್ನು ಬಹಿರಂಗ ಪಡಿಸಿಲ್ಲ. ನೋಟಿಸ್ ಬೋರ್ಡ್​ನಲ್ಲೂ ಪ್ರಕಟಿಸಿರಲಿಲ್ಲ.

ಬಿಜೆಪಿ ಸಂಸದ ಮುನಿಸ್ವಾಮಿ ಕೋಚಿಮುಲ್ ಅಧ್ಯಕ್ಷ, ಮಾಲೂರು ಶಾಸಕ ನಂಜೇಗೌಡ ವಿರುದ್ದ ಆರೋಪಗಳ ಸುರಿಮಳೆ ಗೈದಿದ್ದರು. 75 ಜನರಿಗೆ ಕೆಲ್ಸ ಕೊಡಲು 40 ರಿಂದ 45 ಕೋಟಿ ರೂ. ಹಣ ವಸೂಲಿ ಮಾಡಲಾಗಿದೆ ಅಂತ ಆರೋಪಿಸಿದ್ದರು.

ಇದನ್ನೂ ಓದಿ: ಶಾಸಕ ನಂಜೇಗೌಡ ಮನೆ ಮೇಲೆ ಇಡಿ ದಾಳಿ ಕೇಸ್​: ಪುತ್ರ ಹರೀಶ್, ಪಿಎ ಕರೆದೊಯ್ದ ಅಧಿಕಾರಿಗಳು

ನಿರ್ದೇಶನಾಲಯ ಅಧಿಕಾರಿಗಳು ನಂಜೇಗೌಡ ಅವರ ಆಪ್ತ ಸಹಾಯಕ ಹರೀಶ್, ಕೋಚಿಮುಲ್ ಅಡ್ಮಿನ್ ಮ್ಯಾನೇಜರ್ ನಾಗೇಶ್, ಕೋಚಿಮುಲ್​​ ವ್ಯವಸ್ಥಾಪಕ ನಿರ್ದೇಶಕ ಗೋಪಾಲ್​ಮೂರ್ತಿ ನಿವಾಸದ ಮನೆ ಮೇಲೂ ದಾಳಿ ಮಾಡಿದ್ದರು. ಕೆ.ವೈ.ನಂಜೇಗೌಡ ಅವರ ಬೆಂಗಳೂರು ನಿವಾಸ, ಮಾಲೂರು ಕೋಚಿಮುಲ್ ಕಚೇರಿ ಸೇರಿದಂತೆ ಒಟ್ಟು ಹತ್ತಕ್ಕೂ ಹೆಚ್ಚು ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:55 pm, Fri, 2 February 24