Sign In

By signing in or creating an account, you agree with Associated Broadcasting Company's Terms & Conditions and Privacy Policy.

New Year Celebration Guidelines: ಕ್ರಿಸ್‌ಮಸ್, ಹೊಸ ವರ್ಷ ಆಚರಣೆ: ಪೊಲೀಸ್ ಗೈಡ್​ ಲೈನ್ಸ್ ಪ್ರಕಟ: ಸಿಬ್ಬಂದಿ ನಿಯೋಜನೆ ಸಂಪೂರ್ಣ ಮಾಹಿತಿ, ಸಿಸಿ ಕ್ಯಾಮರಾ ಕಡ್ಡಾಯ

Christmas Celebration Guidelines: ಬೆಂಗಳೂರಿನಲ್ಲಿ ಕ್ರಿಸ್‌ಮಸ್, ಹೊಸ ವರ್ಷದ ಸಂದರ್ಭಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಆಯೋಜಕರು, ಹೋಟೆಲ್, ರೆಸ್ಟೋರೆಂಟ್​ ಮಾಲೀಕರಿಗೆ ಬೆಂಗಳೂರು ಪೊಲೀಸರು ಕೆಲವು ಸೂಚನೆಗಳನ್ನು ನೀಡಿದ್ದಾರೆ.

New Year Celebration Guidelines: ಕ್ರಿಸ್‌ಮಸ್, ಹೊಸ ವರ್ಷ ಆಚರಣೆ: ಪೊಲೀಸ್ ಗೈಡ್​ ಲೈನ್ಸ್ ಪ್ರಕಟ: ಸಿಬ್ಬಂದಿ ನಿಯೋಜನೆ ಸಂಪೂರ್ಣ ಮಾಹಿತಿ, ಸಿಸಿ ಕ್ಯಾಮರಾ ಕಡ್ಡಾಯ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Dec 20, 2022 | 4:01 PM

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕ್ರಿಸ್‌ಮಸ್(Christmas), ಹೊಸ ವರ್ಷದ(New Year) ಕಾರ್ಯಕ್ರಮಗಳಿಗೆ ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ. 2 ವರ್ಷ ಸಂಭ್ರಮಾಚರಣೆಗಳಿಗೆ ಬ್ರೇಕ್ ಹಾಕಿದ್ದ ಮಹಾಮಾರಿ ಕೊರೊನಾ ಸದ್ಯ ಸುಳಿವೇ ಇಲ್ಲದಂಗೆ ಧೂಳಿಪಟವಾಗಿದೆ. ಹೀಗಾಗಿ 2 ವರ್ಷದ ಬಳಿಕ ಅದ್ಧೂರಿಯಾಗಿ ಕ್ರಿಸ್‌ಮಸ್, ಹೊಸ ವರ್ಷ ಆಚರಿಸಲು ಬೆಂಗಳೂರು ತಯಾರಿ ನಡೆಸುತ್ತಿದೆ. ಇನ್ನು ಸಂಭ್ರಮಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಸಿಟಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

ಬೆಂಗಳೂರಿನಲ್ಲಿ ಕ್ರಿಸ್‌ಮಸ್, ಹೊಸ ವರ್ಷದ ಸಂದರ್ಭಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಆಯೋಜಕರು, ಹೋಟೆಲ್, ರೆಸ್ಟೋರೆಂಟ್​ ಮಾಲೀಕರಿಗೆ ಬೆಂಗಳೂರು ಪೊಲೀಸರು ಕೆಲವು ಸೂಚನೆಗಳನ್ನು ನೀಡಿದ್ದಾರೆ. ಕಾರ್ಯಕ್ರಮಕ್ಕೆ ಸಿಬ್ಬಂದಿ ಆಯೋಜನೆ ಮಾಡುವ ವೇಳೆ ಅವರ ಬಗ್ಗೆ ಸರಿಯಾಗಿ ಪರಿಶೀಲನೆ ಮಾಡಲು ಹಾಗೂ ಮಹಿಳಾ ಸಿಬ್ಬಂದಿಯನ್ನು ನೇಮಿಸಿ ಅವರಿಗೆ ಸರಿಯಾಗಿ ಟೈನಿಂಗ್ ಕೊಟ್ಟು ಅವರಿಗೆ ಸಾರಿಗೆ ವ್ಯವಸ್ಥೆ ಮಾಡುವಂತೆ ಆಯೋಜಕರಿಗೆ ಪೊಲೀಸರು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ:  New year celebration: ಹೊಸ ವರ್ಷಾಚರಣೆಗೆ ದಿನದ 24 ಗಂಟೆ ಹೋಟೆಲ್ ತೆರೆಯಲು ಗೃಹ ಇಲಾಖೆಗೆ ಮನವಿ

ಶುಕ್ರವಾರ ಹೋಟೆಲ್, ರೆಸ್ಟೋರೆಂಟ್ ಮಾಲೀಕರೊಂದಿಗೆ ಸಭೆ ನಡೆಸಿದ ಪೊಲೀಸ್ ಇಲಾಖೆ ಕೆಲವು ಗೈಡ್​ಲೈನ್ಸ್ ಹೊರಡಿಸಿದೆ. ಹಾಗೂ ತಾವು ಆಯೋಜಿಸುವ ಕಾರ್ಯಕ್ರಮದ ಭದ್ರತಾ ಸಿಬ್ಬಂದಿಯ ವಿರುದ್ಧ ಯಾವುದೇ ಕ್ರಿಮಿನಲ್ ಆರೋಪಗಳಿವೆಯೇ ಎಂದು ಪರಿಶೀಲಿಸಲು ತಿಳಿಸಲಾಗಿದೆ. ಇದಕ್ಕಾಗಿ ಸೇವಾ ಸಿಂಧು ಆ್ಯಪ್ ಬಳಸಲು ಪೊಲೀಸರು ಸೂಚಿಸಿದ್ದಾರೆ.

ಕಾರ್ಯಕ್ರಮ ಆಯೋಜಿಸುವ ಕಡೆ ಸಿಸಿ ಕ್ಯಾಮರಾ ಕಡ್ಡಾಯ

ಪಬ್, ಹೋಟೆಲ್, ರೆಸ್ಟೋರೆಂಟ್​ಗಳಲ್ಲಿ ಕ್ರಿಸ್‌ಮಸ್, ಹೊಸ ವರ್ಷಕ್ಕೆ ಕಾರ್ಯಕ್ರಮಗಳನ್ನು ಆಯೋಜಿಸಿದರೆ ಆ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಅನುಮತಿ ಪಡೆಯಲು ತಿಳಿಸಲಾಗಿದೆ. ಹಾಗೂ ಭದ್ರತಾ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ಪ್ರವೇಶ, ನಿರ್ಗಮನ ಮತ್ತು ಪಾರ್ಕಿಂಗ್ ಪ್ರದೇಶಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲು ಪೊಲೀಸರು ತಿಳಿಸಿದ್ದಾರೆ.

ಪಾರ್ಟಿಗಳಲ್ಲಿ ಯಾವುದೇ ರಿತಿಯ ಶಸ್ತ್ರಾಸ್ತ್ರಗಳು, ಡ್ರಗ್ಸ್ ಅಥವಾ ಇತರ ನಿಷೇಧಿತ ವಸ್ತುಗಳನ್ನು ತರಲು ಅನುಮತಿ ನೀಡಬಾರದು. ಈವೆಂಟ್ ಆಯೋಜಕರು ಟ್ರಾವೆಲ್ ಏಜೆನ್ಸಿಗಳೊಂದಿಗೆ ಮಾತನಾಡಿಕೊಂಡು ಪಾರ್ಟಿಗೆ ಬಂದ ಅತಿಥಿ, ಸಿಬ್ಬಂದಿಗೆ ಸುರಕ್ಷಿತ ಸಾರಿಗೆ ವ್ಯವಸ್ಥೆಯನ್ನು ಮಾಡಬೇಕು. ಈವೆಂಟ್​ನಲ್ಲಿ ಹೆಚ್ಚು ಜನರಿಗೆ ಅನುಮತಿ ನೀಡುವಂತಿಲ್ಲ. ಹೆಚ್ಚು ಟಿಕೆಟ್ ಸೇಲ್ ಮಾಡುವಂತಿಲ್ಲ. ಹೀಗೆ ಮಾಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಯಕ್ರಮ ಆಯೋಜಕರಿಗೆ ಪೊಲೀಸರು ವಾರ್ನಿಂಗ್ ಕೊಟ್ಟಿದ್ದಾರೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಅಥವಾ ವ್ಯಕ್ತಿಗಳ ಮೇಲೆ ಅನುಮಾನ ಬಂದತೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:34 pm, Mon, 19 December 22

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ