ಬೆಂಗಳೂರಿನಲ್ಲಿ ವ್ಹೀಲಿಂಗ್​ ಮಾಡುತ್ತಿದ್ದ ಆರೋಪಿ ಬಂಧನ; ವೀಲಿಂಗ್ ಮಾಡುವವರ ಬಗ್ಗೆ ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರಿನ ಹಲವೆಡೆ ವೀಲಿಂಗ್ ಮಾಡುತ್ತಿದ್ದಾರೆ. ಈ ಬಗ್ಗೆ ನಿಗಾವಹಿಸಿರುವ ಪೊಲೀಸರು ನಿನ್ನೆ ಒಂದೇ ದಿನ ಎರಡು ಪ್ರತ್ಯೇಕ ಕೇಸ್ಗಳನ್ನು ದಾಖಲಿಸಿಕೊಂಡಿದ್ದಾರೆ. ಯಲಹಂಕ ಟ್ರಾಫಿಕ್ ಮತ್ತು ಪುಲಿಕೇಶಿ ನಗರ ಟ್ರಾಫಿಕ್ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

ಬೆಂಗಳೂರಿನಲ್ಲಿ ವ್ಹೀಲಿಂಗ್​ ಮಾಡುತ್ತಿದ್ದ ಆರೋಪಿ ಬಂಧನ; ವೀಲಿಂಗ್ ಮಾಡುವವರ ಬಗ್ಗೆ ಮಾಹಿತಿ ನೀಡಲು ಪೊಲೀಸರ ಮನವಿ
ವ್ಹೀಲಿಂಗ್ ಮಾಡುತ್ತಿರುವುದು
Follow us
TV9 Web
| Updated By: sandhya thejappa

Updated on:Aug 21, 2021 | 2:28 PM

ಬೆಂಗಳೂರು: ವ್ಹೀಲಿಂಗ್ (Wheeling) ಮಾಡುತ್ತಿದ್ದ ಆರೋಪಿಯನ್ನು ಯಲಹಂಕ ಸಂಚಾರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ನಿಖಿಲ್ ಜಿಕೆವಿಕೆ, ವೀರಸಾಗರ ಬಳಿ ವೀಲಿಂಗ್ ಮಾಡುತಿದ್ದ. ಇದರಿಂದ ಸಾರ್ವಜನಿಕರಿಗೆ ಕಿರಿಕಿರಿ ಆಗುತ್ತಿತ್ತು. ಜೋರಾಗಿ ಹಾರ್ನ್ ಮಾಡಿಕೊಂಡು ವ್ಹೀಲಿಂಗ್ ಮಾಡುತ್ತಿದ್ದ. ಇದೇ ವೇಳೆ ಸಂಚರಿಸುತಿದ್ದ ಉಳಿದ ಸವಾರರಿರೂ ಆರೋಪಿ ತೊಂದರೆ ಕೊಡುತ್ತಿದ್ದ. ಅಲ್ಲದೇ ಹೆಲ್ಮೆಟ್ ಧರಿಸದೆ ವ್ಹೀಲಿಂಗ್ ಮಾಡಿ ಪೊಲೀಸರಿಗೆ ನಿಂದನೆ ಮಾಡಿದ್ದ. ‘ಪೊಲೀಸರಿಗೆ ಹೆದರೋಕಾಗುತ್ತಾ ಪೊಲೀಸರು ಹುಳ ಇದ್ದಂಗೆ’ ಅಂತ ವಿಡಿಯೋ ಕೂಡಾ ಮಾಡಿದ್ದ.

ಬೆಂಗಳೂರಿನ ಹಲವೆಡೆ ವೀಲಿಂಗ್ ಮಾಡುತ್ತಿದ್ದಾರೆ. ಈ ಬಗ್ಗೆ ನಿಗಾವಹಿಸಿರುವ ಪೊಲೀಸರು ನಿನ್ನೆ ಒಂದೇ ದಿನ ಎರಡು ಪ್ರತ್ಯೇಕ ಕೇಸ್ಗಳನ್ನು ದಾಖಲಿಸಿಕೊಂಡಿದ್ದಾರೆ. ಯಲಹಂಕ ಟ್ರಾಫಿಕ್ ಮತ್ತು ಪುಲಿಕೇಶಿ ನಗರ ಟ್ರಾಫಿಕ್ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಪುಲಿಕೇಶಿನಗರ ಟ್ರಾಫಿಕ್ ಪೊಲೀಸರ ಕಾರ್ಯಾಚರಣೆಯಲ್ಲಿ ಐಟಿಸಿ ಬ್ರಿಡ್ಜ್ ಬಳಿ ವೀಲಿಂಗ್ ಮಾಡುತ್ತಿದ್ದವನನ್ನು ಬಂಧಿಸಿದ್ದಾರೆ. ವೈರಲ್ ಆಗಿದ್ದ ವಿಡಿಯೋವನ್ನು ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ವೀಲಿಂಗ್ ಬಗ್ಗೆ ಮಾಹಿತಿ ನೀಡಿ ಅಂತ ಸಾರ್ವಜನಿಕರಿಗೆ ಟ್ರಾಫಿಕ್ ಪೊಲೀಸರು ಮನವಿ ಮಾಡಿದ್ದಾರೆ. ಫೋಟೋ ಮತ್ತು ವಿಡಿಯೋ ಮೂಲಕ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಪೊಲೀಸರು ಸಲಹೆ ನೀಡಿದ್ದಾರೆ. ಮಾಹಿತಿ ನೀಡುವವರ ಬಗ್ಗೆ ಗೌಪ್ಯವಾಗಿಡುತ್ತೇವೆ ಅಂತ ಪೊಲೀಸರು ತಿಳಿಸಿದ್ದಾರೆ.

ಈ ಹಿಂದೆಯೂ ಅಪಾಯಕಾರಿ ಚಾಲನೆ ಹಾಗೂ ವ್ಹೀಲಿಂಗ್​ನಲ್ಲಿ ತೊಡಗಿದ್ದ ಐವರನ್ನು ಬಂಧಿಸಲಾಗಿತ್ತು. ಬೆಂಗಳೂರು ಪಶ್ಚಿಮ ವಿಭಾಗದ ಸಂಚಾರಿ ಪೊಲೀಸರು ಐದು ಮಂದಿಯನ್ನು ಸೆರೆ ಹಿಡಿದಿದ್ದಾರೆ. ಕೆಂಗೇರಿ, ಬ್ಯಾಟರಾಯನಪುರ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಕೆಂಗೇರಿ 4, ಬ್ಯಾಟರಾಯನಪುರ ಠಾಣೆಯಲ್ಲಿ 1 ಕೇಸ್ ದಾಖಲು ಮಾಡಲಾಗಿತ್ತು.

ಇದನ್ನೂ ಓದಿ

ದಿಶಾ ಅತ್ಯಾಚಾರ ಆರೋಪಿಗಳ ಎನ್​ಕೌಂಟರ್​; ಇಂದು ಪುರಾವೆ ಸಲ್ಲಿಸುವಂತೆ ತೆಲಂಗಾಣ ಸರ್ಕಾರಕ್ಕೆ ಸುಪ್ರೀಂ ಆಯೋಗದ ಸೂಚನೆ

‘ನಮ್ಮ ಕಾಲದ ಈ 3 ಹೀರೋಯಿನ್ಸ್​ ನಂಗಿಷ್ಟ’: ಸಿಎಂ ಬಸವರಾಜ ಬೊಮ್ಮಾಯಿ ಹಂಚಿಕೊಂಡ ಫಿಲ್ಮೀ ಮಾತುಗಳು

(Police have arrested an accused in Wheeling at Bangalore)

Published On - 2:27 pm, Sat, 21 August 21

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ