ಉದ್ಯಮಿ ಮನೆಯಲ್ಲಿ ದರೋಡೆ ಕೇಸ್​​ಗೆ ಬಿಗ್​​ ಟ್ವಿಸ್ಟ್​​: ಪ್ರಾಣ ಸ್ನೇಹಿತನ ಮನೆಯಲ್ಲೇ ರಾಬರಿ ಮಾಡಿಸಿದ ಸ್ಟಾಂಪ್ ವೆಂಡರ್

ಬೆಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಮನೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರ ಸೋಗಿನಲ್ಲಿ ಮನೆಗೆ ನುಗ್ಗಿ ₹20 ಲಕ್ಷ ನಗದು ಮತ್ತು ಚಿನ್ನಾಭರಣ ದೋಚಿದ್ದ ಪ್ರಕರಣದ ಹಿಂದೆ ಉದ್ಯಮಿಯ ಪ್ರಾಣ ಸ್ನೇಹಿತ, ಸ್ಟಾಂಪ್ ವೆಂಡರ್ ಕೈವಾಡ ಇರುವುದು ಬೆಳಕಿಗೆ ಬಂದಿದೆ. ಸೈಟ್ ಮಾರಾಟದ ಹಣದ ಮಾಹಿತಿ ತಿಳಿದು, ಜೈಲಿನಿಂದ ಪೆರೋಲ್ ಮೇಲೆ ಬಂದಿದ್ದ ಆರೋಪಿ ಮೂಲಕ ಈತ ದರೋಡೆ ಮಾಡಿಸಿರೋದು ಬಯಲಾಗಿದೆ.

ಉದ್ಯಮಿ ಮನೆಯಲ್ಲಿ ದರೋಡೆ ಕೇಸ್​​ಗೆ ಬಿಗ್​​ ಟ್ವಿಸ್ಟ್​​: ಪ್ರಾಣ ಸ್ನೇಹಿತನ ಮನೆಯಲ್ಲೇ ರಾಬರಿ ಮಾಡಿಸಿದ ಸ್ಟಾಂಪ್ ವೆಂಡರ್
ಸಾಂದರ್ಭಿಕ ಚಿತ್ರ
Image Credit source: google
Edited By:

Updated on: Mar 08, 2026 | 11:43 AM

ಬೆಂಗಳೂರು, ಮಾರ್ಚ್​​ 08: ಪೊಲೀಸರ ಹೆಸರಲ್ಲಿ ಮನೆಗೆ ಎಂಟ್ರಿಕೊಟ್ಟ ಗ್ಯಾಂಗ್​​ ಒಂದು ರಿಯಲ್ ಎಸ್ಟೇಟ್ ಉದ್ಯಮಿ ಮನೆಯಿಂದ ಬರೋಬ್ಬರಿ 20 ಲಕ್ಷ ರೂಪಾಯಿ ನಗದು ಮತ್ತು ಸುಮಾರು ಅರ್ಧ ಕೆಜಿ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬಿಇಎಲ್ ಲೇಔಟ್‌ನಲ್ಲಿ ನಡೆದಿತ್ತು. ಈ ಪ್ರಕರಣವನ್ನು ಭೇದಿಸಿರುವ ಬ್ಯಾಡರಹಳ್ಳಿ ಪೊಲೀಸರು ಈ ಹಿಂದೆ ನಾಗೇಂದ್ರ ಹಾಗೂ ಬಚ್ಚನ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಆದರೆ ತನಿಖೆ ಮುಂದುವರಿದಾಗ ಅಸಲಿ ಸತ್ಯ ಬಯಲಾಗಿದ್ದು, ಪ್ರಕರಣದ ಹಿಂದಿನ ಮಾಸ್ಟರ್​​ ಮೈಂಡ್​​ ಹೆಸರು ರಿವೀಲ್​ ಆಗಿದೆ.

ಸ್ನೇಹಿತನ ಮನೆಯಲ್ಲೇ ರಾಬರಿ ಮಾಡಿಸಿದವ ಲಾಕ್​

ಹೊಂಬೇಗೌಡ ಮನೆಯಲ್ಲಿ ನಡೆದ ದರೋಡೆ ಹಿಂದೆ ಅವರ ಪ್ರಾಣ ಸ್ನೇಹಿತ ಬೆಟ್ಟೇಗೌಡ ಎಂಬಾತನ ಪಾತ್ರ ಇರೋದೀಗ ಬಯಲಾಗಿದೆ. ಸೈಟ್​​ ಮಾರುವ ಸಂಬಂಧ ಸ್ಟಾಂಪ್ ವೆಂಡರ್ ಆಗಿರುವ ಬೆಟ್ಟೇಗೌಡನ ಬಳಿಯೇ ಹೊಂಬೇಗೌಡರು ಪೇಪರ್​​ ಮಾಡಿಸಿದ್ದರು. ಹೀಗಾಗಿ ಸ್ನೇಹಿತನ ಬಳಿ ಸೈಟ್ ಮಾರಿದ ಹಣ ಇದೆ‌ ಎಂದು ತಿಳಿದಿದ್ದ ಆರೋಪಿ, ದರೋಡೆ ಮಾಡುವಂತೆ ಜೈಲಿಂದ ಪೆರೋಲ್ ಮೇಲೆ ಬಿಡುಗಡೆಯಾಗಿದ್ದ ನಾಗೇಂದ್ರನಿಗೆ ಐಡಿಯಾ ಕೊಟ್ಟಿದ್ದ. ಶಿವಾಜಿನಗರದಲ್ಲಿ ಶೂಟಿಂಗ್​​ಗೆ ಎಂದು ಹೇಳಿ ಸಬ್ ಇನ್ಸ್​​ಪೆಕ್ಟರ್ ಡ್ರೆಸ್ ಬಾಡಿಗೆಗೆ ತಂದಿದ್ದ ನಾಗೇಂದ್ರ, ಅದೇ ಡ್ರೆಸ್​​ ಹಾಕಿಕೊಂಡು ಮನೆಗೆ ನುಗ್ಗಿ ದರೋಡೆ ನಡೆಸಿದ್ದ ಎಂಬುದು ಗೊತ್ತಾಗಿದೆ.

ಇದನ್ನೂ ಓದಿ: ಉದ್ಯಮಿ ಮನೆಯಲ್ಲಿ ಕಳ್ಳತನ ಪ್ರಕರಣಕ್ಕೆ ಬಿಗ್​​​​ ಟ್ವಿಸ್ಟ್​; ಪೆರೋಲ್ ಮೇಲೆ ಹೊರಬಂದಿದ್ದ ಕುಖ್ಯಾತ ಖೈದಿಯಿಂದಲ್ಲೇ ಕನ್ನ!

ಘಟನೆ ಏನಾಗಿತ್ತು?

ಹೊಂಬೇಗೌಡ ಅವರು ಪತ್ನಿ ಮಂಗಳಮ್ಮ ಹಾಗೂ ಮೊಮ್ಮಕ್ಕಳೊಂದಿಗೆ ಮನೆಯಲ್ಲಿ ಇದ್ದ ವೇಳೆ ಪೊಲೀಸರಂತೆ ವೇಷಧರಿಸಿ ಮನೆಗೆ ಎಂಟ್ರಿ ಕೊಟ್ಟಿದ್ದ ಆರೋಪಿಗಳು , ತಾವು ಯಲಹಂಕ ಠಾಣೆಯಿಂದ ಬಂದಿದ್ದೇವೆ ಎಂದು ತಿಳಿಸಿದ್ದರು. ಇವರು ಬ್ಯಾಗ್​​ ಮತ್ತು ಡೈರಿಯನ್ನೂ ಹಿಡಿದು ಬಂದಿದ್ದ ಕಾರಣ ಆರಂಭದಲ್ಲಿ ಮನೆಯವರೂ ಆರೋಪಿಗಳ ಮಾತು ನಂಬಿದ್ದರು. ಆದರೆ ಬಳಿಕ ಆರೋಪಿಗಳು ವೃದ್ಧ ದಂಪತಿಯನ್ನು ಬಂದೂಕು ಮತ್ತು ಚಾಕುವಿನಿಂದ ಬೆದರಿಸಿದ್ದರು. ಅಲ್ಲದೆ ಅವರ ಕೈಕಾಲುಗಳನ್ನು ಕಟ್ಟಿ. ನಗದು ಮತ್ತು ಚಿನ್ನಾಭರಣ ದೋಚಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More
Loading...
Unable to load recommendations.
Follow Us