ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ 2 ಐಷಾರಾಮಿ ಕಾರುಗಳಿಗೆ ಬೆಂಕಿ: ಚುರುಕುಗೊಂಡ ಪೊಲೀಸ್ ತನಿಖೆ

ಆರೋಪಿಗಳ ಪತ್ತೆಗಾಗಿ ತಲಾಶ್ ಆರಂಭವಾಗಿದೆ. ಬೈಕ್ನಲ್ಲಿ ಬಂದ ಇಬ್ಬರು ವ್ಯಕ್ತಿಗಳಿಂದ ಈ ಕೃತ್ಯ ನಡೆದಿದ್ದು ಒಂದು ಸಿಸಿಟಿವಿಯಲ್ಲಿ ಮೂರು ನಿಮಿಷದ ದೃಶ್ಯ ಸೆರೆಯಾಗಿದೆ. 30ರ ವಯಸ್ಸಿನ ಇಬ್ಬರಿಂದ ಕೃತ್ಯ ನಡೆದಿದೆ.

ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ 2 ಐಷಾರಾಮಿ ಕಾರುಗಳಿಗೆ ಬೆಂಕಿ: ಚುರುಕುಗೊಂಡ ಪೊಲೀಸ್ ತನಿಖೆ
ಚುರುಕುಗೊಂಡ ಪೊಲೀಸ್ ತನಿಖೆ
Follow us
TV9 Web
| Updated By: ಆಯೇಷಾ ಬಾನು

Updated on:Aug 12, 2021 | 9:13 AM

ಬೆಂಗಳೂರು: ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಬೆಂಕಿ ಕೇಸ್ಗೆ ಸಂಬಂಧಿಸಿ ಎಸಿಪಿ ಮೈಕೊಲೇಔಟ್ ನೇತೃತ್ವದಲ್ಲಿ ತನಿಖೆ ಚುರುಕುಗೊಂಡಿದೆ. ಆರೋಪಿಗಳ ಪತ್ತೆಗಾಗಿ ತಲಾಶ್ ಆರಂಭವಾಗಿದೆ. ಬೈಕ್ನಲ್ಲಿ ಬಂದ ಇಬ್ಬರು ವ್ಯಕ್ತಿಗಳಿಂದ ಈ ಕೃತ್ಯ ನಡೆದಿದ್ದು ಒಂದು ಸಿಸಿಟಿವಿಯಲ್ಲಿ ಮೂರು ನಿಮಿಷದ ದೃಶ್ಯ ಸೆರೆಯಾಗಿದೆ. 30ರ ವಯಸ್ಸಿನ ಇಬ್ಬರಿಂದ ಕೃತ್ಯ ನಡೆದಿದೆ.

1:23ರ ಸುಮಾರಿಗೆ ಎಂಟ್ರಿ ಕೊಟ್ಟ ಇಬ್ಬರು ದುಷ್ಕರ್ಮಿಗಳು ಒಂದು ಲೀಟರ್ ಬಾಟಲ್ನಲ್ಲಿ ಪೆಟ್ರೋಲ್ ತಂದು ಕಾರಿಗೆ ಬೆಂಕಿ ಹಚ್ಚಿ 1:26ರಷ್ಟರೊಳಗೆ ಕೆಲಸ ಮುಗಿಸಿ ಎಸ್ಕೆಪ್ ಆಗಿದ್ದಾರೆ. ಸದ್ಯ ಬೊಮ್ಮನಹಳ್ಳಿ ಪೊಲೀಸರಿಂದ ಆರೋಪಿಗಳಿಗಾಗಿ ತಲಾಶ್ ನಡೆಸುತ್ತಿದ್ದಾರೆ.3 ಪ್ರತ್ಯೇಕ ತಂಡಗಳಾಗಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಯಲಿದೆ. ಸುದ್ದಗುಂಟೆಪಾಳ್ಯ, ಬೊಮ್ಮನಹಳ್ಳಿ, ತಿಲಕ್‌ನಗರ ಠಾಣೆ ಸೇರಿ ಮೂರು ಠಾಣೆಗಳ ಇನ್ಸ್‌ಪೆಕ್ಟರ್‌ಗಳ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಘಟನೆಗೆ ಅಸಲಿ ಕಾರಣ ಏನು ಎಂಬ ನಿಟ್ಟಿನಲ್ಲಿ ರಾಜಕೀಯ ಕಾರಣನಾ, ಶಿವಮೂರ್ತಿ ವಿಚಾರಕ್ಕಾ? ಯಾವ ಕಾರಣದಿಂದ ದಾಳಿಯಾಗಿದೆ ಎಂದು ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.

ಇನ್ನು ಬೆಂಕಿಗೆ ಆಹುತಿಯಾದ ಕಾರುಗಳು ಹೊಸದಾಗಿ ಖರೀದಿಸಿದ್ದ ಕಾರುಗಳು. ಮಹಿಂದ್ರಾ ಥಾರ್ ಖರೀದಿಸಿ ಕೇವಲ ಒಂದು ತಿಂಗಳಾಗಿತ್ತು. ಫಾರ್ಚುನರ್ ಕಾರ್ ಇತ್ತೀಚೆಗೆ ಖರೀದಿಸಲಾಗಿತ್ತು. ಎರಡು ಕಾರ್ ಗಳ ಮೇಲೆ ಸತೀಶ್ ರೆಡ್ಡಿ ಅವರಿಗೆ ಎಲ್ಲಿಲ್ಲದ ಪ್ರೀತಿ ಇತ್ತು ಎನ್ನಲಾಗಿದೆ.

ಘಟನೆ ವಿವರ ಬೊಮ್ಮನಹಳ್ಳಿಯಲ್ಲಿರುವ ಸತೀಶ್ ರೆಡ್ಡಿ ಮನೆ ಮುಂಭಾಗದಲ್ಲಿದ್ದ ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಇಟ್ಟಿದ್ದು 2 ಕಾರುಗಳು ಸುಟ್ಟು ಕರಕಲಾಗಿವೆ. ತಡರಾತ್ರಿ 1.30ರ ವೇಳೆಗೆ ನಾಲ್ವರು ಕಿಡಿಗೇಡಿಗಳು ಈ ಕೃತ್ಯವೆಸಗಿದ್ದಾರೆ. ಕಾರಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ಶಾಸಕ ಸತೀಶ್ ರೆಡ್ಡಿ ಟಿವಿ9ಗೆ ಮಾಹಿತಿ ನೀಡಿದ್ದಾರೆ.

ಎರಡು ಕಾರುಗಳೂ ಕೂಡಾ ದುಬಾರಿ ಬೆಲೆಯದ್ದಾಗಿದ್ದು, ಬೆಂಕಿ ಹಚ್ಚಿದವರು ಯಾರು ಎನ್ನುವ ಬಗ್ಗೆ ಇಲ್ಲಿಯ ತನಕ ಸುಳಿವು ಸಿಕ್ಕಿಲ್ಲ. ರಾಜಕೀಯ ದ್ವೇಷಕ್ಕಾಗಿ ಬೆಂಕಿ ಹಚ್ಚಲಾಗಿದೆಯಾ? ವೈಯಕ್ತಿಕ ಕಾರಣಗಳೇನಾದರೂ ಇವೆಯಾ? ಎನ್ನುವುದು ತನಿಖೆಯಿಂದ ಗೊತ್ತಾಗಬೇಕಿದೆ. ಘಟನೆಯ ನಂತರ ಪೊಲೀಸರಿಗೆ ಸತೀಶ್ ರೆಡ್ಡಿ ಮಾಹಿತಿ ನೀಡಿದ್ದು, ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಶಾಸಕ ಸತೀಶ್​ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ 2 ಐಷಾರಾಮಿ ಕಾರುಗಳಿಗೆ ಬೆಂಕಿ; ದುಷ್ಕರ್ಮಿಗಳು ಪರಾರಿ

Published On - 9:09 am, Thu, 12 August 21