‘ಗಂಧದಗುಡಿ’ ಪುನೀತ ಪರ್ವ ಕಾರ್ಯಕ್ರಮಕ್ಕೆ ಕ್ಷಣಗಣನೆ: ಕೆಲ ಮಾರ್ಗಗಳನ್ನು ಬಳಸದಿರುವಂತೆ ಪೊಲೀಸರಿಂದ ಸೂಚನೆ

ಅರಮನೆ ಮೈದಾನದ ಸಮೀಪವಿರುವ ಮೇಖ್ರಿ ವೃತ್ತ, ಬಳ್ಳಾರಿ ರಸ್ತೆ, ಜಯಮಹಲ್ ರಸ್ತೆ ಬಳಸಬೇಡಿ ಎಂದು ವಾಹನ ಸವಾರರಿಗೆ ನೀಡಿದ ಟ್ರಾಫಿಕ್ ಪೊಲೀಸರು ಸಲಹೆ ಮಾಡಿದ್ದಾರೆ.

‘ಗಂಧದಗುಡಿ’ ಪುನೀತ ಪರ್ವ ಕಾರ್ಯಕ್ರಮಕ್ಕೆ ಕ್ಷಣಗಣನೆ: ಕೆಲ ಮಾರ್ಗಗಳನ್ನು ಬಳಸದಿರುವಂತೆ ಪೊಲೀಸರಿಂದ ಸೂಚನೆ
ಸಾಂಧರ್ಬಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Oct 21, 2022 | 1:31 PM

ಬೆಂಗಳೂರು: ‘ಗಂಧದಗುಡಿ’ ಪುನೀತ ಪರ್ವ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಅರಮನೆ ಮೈದಾನದತ್ತ ಪುನೀತ್ ರಾಜ್​ಕುಮಾರ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಯಿರುವುದರಿಂದ ಮಧ್ಯಾಹ್ನ 3.30ರ ಬಳಿಕ ಕೆಲ ಮಾರ್ಗಗಳನ್ನು ಬಳಸದಂತೆ ಪೊಲೀಸರು ಸೂಚನೆ ನೀಡಿದ್ದಾರೆ. ಅರಮನೆ ಮೈದಾನದ ಸಮೀಪವಿರುವ ಮೇಖ್ರಿ ವೃತ್ತ, ಬಳ್ಳಾರಿ ರಸ್ತೆ, ಜಯಮಹಲ್ ರಸ್ತೆ ಬಳಸಬೇಡಿ ಎಂದು ವಾಹನ ಸವಾರರಿಗೆ ನೀಡಿದ ಟ್ರಾಫಿಕ್ ಪೊಲೀಸರು ಸಲಹೆ ಮಾಡಿದ್ದಾರೆ. ಈ ಮಾರ್ಗಗಳಿಗೆ ಬದಲಾಗಿ ಪರ್ಯಾಯ ಮಾರ್ಗವನ್ನು ಬಳಸಬೇಕು ಎಂದು ಪೊಲೀಸರು ಸೂಚಿಸಿದ್ದಾರೆ.

ನಗರದ ಅರಮನೆ ಮೈದಾನದ ‘ಕೃಷ್ಣ ವಿಹಾರ’ದಲ್ಲಿ ಪುನೀತ್ ರಾಜ್​ಕುಮಾರ್ ನೆನಪಿನ ‘ಪುನೀತ ಪರ್ವ’ ಕಾರ್ಯಕ್ರಮ ಶುಕ್ರವಾರ (ಅ 21) ನಡೆಯಲಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಗರ ಪೊಲೀಸರು ಟ್ರಾಫಿಕ್ ನಿರ್ವಹಣೆಗೆ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಕುರಿತು ಸಂಚಾರ ವಿಭಾಗದ ಪೊಲೀಸ್ ಜಂಟಿ ಆಯುಕ್ತ ರವಿಕಾಂತೇಗೌಡ ಮಾಹಿತಿ ನೀಡಿದ್ದಾರೆ. ‘ಅರಮನೆ ಸುತ್ತಮುತ್ತ ಯಾವುದೇ ಮಾರ್ಗ ಬದಲಾವಣೆ ಇಲ್ಲ. ನಗರದಲ್ಲಿ ಯಾವುದೇ ರಸ್ತೆಗಳನ್ನು ಬಂದ್ ಮಾಡುವುದಿಲ್ಲ. ಪರಿಸ್ಥಿತಿ ನೋಡಿಕೊಂಡು ಮುಂದಿನ ಕ್ರಮ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ ಕಾರ್ಯಕ್ರಮ

ಕಾರ್ಯಕ್ರಮದಲ್ಲಿ ಸಾವಿರಾರು ಅಭಿಮಾನಿಗಳು ಭಾಗಿಯಾಗುವ ಸಾಧ್ಯತೆ ಇರುವುದರಿಂದ ಸಂಚಾರ ದಟ್ಟಣೆ ಆಗದಂತೆ ಪೊಲೀಸರು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದಾರೆ. ಅಭಿಮಾನಿಗಳು ಹಾಗೂ ಸಾರ್ವಜನಿಕರ ಆಗಮನಕ್ಕೆ ಹಲವು ಮಾರ್ಗಗಳನ್ನು ಪೊಲೀಸರು ಗುರುತಿಸಿದ್ದಾರೆ. ಮೈಸೂರು ರಸ್ತೆಯ ಕಡೆಯಿಂದ ಬರುವ ವಾಹನಗಳು ನಾಯಂಡನಹಳ್ಳಿ ಜಂಕ್ಷನ್, ಸುಮ್ಮುನಹಳ್ಳಿ ಸೇತುವೆ, ರಾಜಕುಮಾರ್ ಸಮಾಧಿ, ಗೊರಗುಂಟೆಪಾಳ್ಯ ಜಂಕ್ಷನ್, ಬಿಇಎಲ್ ಸೇತುವೆ, ಹೆಬ್ಬಾಳ ಮೇಲ್ಸೇತುವೆ ಮೆಕ್ರಿ ಸರ್ಕಲ್ ಮಾರ್ಗವಾಗಿ ಅರಮನೆ ಮೈದಾನ ತಲುಪಬೇಕೆಂದು ಸೂಚಿಸಲಾಗಿದೆ.

ತುಮಕೂರು ಕಡೆಯಿಂದ ಬರುವ ವಾಹನಗಳು ತುಮಕೂರು ರಸ್ತೆ, ಗೊರಗುಂಟೆಪಾಳ್ಯ ಜಂಕ್ಷನ್, ಬಿಇಎಲ್ ಸೇತುವೆ, ಹೆಬ್ಬಾಳ ಮೇಲ್ಸೇತುವೆ, ಮೆಕ್ರಿ ಸರ್ಕಲ್ ಮಾರ್ಗವಾಗಿ ಅರಮನೆ ಮೈದಾನ ತಲುಪಬೇಕು. ದೊಡ್ಡಬಳ್ಳಾಪುರ ಕಡೆಯಿಂದ ಬರುವ ವಾಹನಗಳು, ಮೇಜರ್ ಉನ್ನಿಕೃಷ್ಣನ್ ರಸ್ತೆ, ಯಲಹಂಕ ಪೊಲೀಸ್ ಠಾಣೆ, ಬಳ್ಳಾರಿ ರಸ್ತೆ, ಹೆಬ್ಬಾಳ ಮೇಲ್ಸೇತುವೆ ಮೆಕ್ರಿ ಸರ್ಕಲ್ ಮಾರ್ಗವಾಗಿ ಅರಮನೆ ಮೈದಾನ ತಲುಪಬೇಕು. ಹೊಸೂರು ಕಡೆಯಿಂದ ಬರುವ ವಾಹನಗಳು ಹೊಸೂರು ರಸ್ತೆ, ಮಡಿವಾಳ ಚೆಕ್​ಪೋಸ್ಟ್, ಡೇರಿ ಸರ್ಕಲ್, ಲಾಲ್​ಬಾಗ್ ಮುಖ್ಯದ್ವಾರ, ಮಿನರ್ವ ಸರ್ಕಲ್, ಟೌನ್ ಹಾಲ್, ಮೈಸೂರು ಬ್ಯಾಂಕ್ ಸರ್ಕಲ್, ಬಸವೇಶ್ವರ ವೃತ್ತ, ಮೌಂಟ್ ಕಾರ್ಮಲ್ ಕಾಲೇಜ್, ವಸಂತ ನಗರ ಜಯಮಹಲ್ ರಸ್ತೆ ಮೂಲಕ ಅರಮನೆ ಮೈದಾನ ತಲುಪಬೇಕು ಎಂದು ಪೊಲೀಸರು ಸಲಹೆ ಮಾಡಿದ್ದಾರೆ.

ಕೋಲಾರ ಹೊಸಕೋಟೆ ಕಡೆಯಿಂದ ಬರುವ ವಾಹನಗಳು ಕೆ‌.ಆರ್.ಪುರ, ಟಿನ್ ಫ್ಯಾಕ್ಟರಿ, ಹೆಣ್ಣೂರು ರಿಂಗ್ ರೋಡ್, ಹೆಬ್ಬಾಳ ಮೇಲ್ಸೇತುವೆ, ಮೆಕ್ರಿ ಸರ್ಕಲ್, ಅರಮನೆ ಮೈದಾನ ಮಾರ್ಗ ಬಳಸಬೇಕು ಎಂದು ಪೊಲೀಸರು ಹೇಳಿದ್ದಾರೆ. ಕಾರ್ಯಕ್ರಮಕ್ಕೆ ಬರುವ ಎಲ್ಲಾ ವಾಹಗಳಗೆ ಸರ್ಕಸ್ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮ ಆರಂಭವಾಗುವ ಕ್ಷಣದಿಂದ ಕಾರ್ಯಕ್ರಮ‌ ಮುಗಿಯುವ ತನಕ ಸಂಚಾರ ದಟ್ಟಣೆ ಆಗದಂತೆ ಈ ಮಾರ್ಗದಲ್ಲಿ ಹೆಚ್ಚುವರಿಯಾಗಿ ಸಂಚಾರ ಪೊಲೀಸರನ್ನು ನಿಯೋಜಿಸಲಾಗುವುದು ಎಂದು ಬೆಂಗಳೂರು ಪೊಲೀಸರು ಹೇಳಿದ್ದಾರೆ.

Published On - 1:31 pm, Fri, 21 October 22

ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ