ಬೆಂಗಳೂರು: ಪೊಲೀಸ್ ಸಂಸ್ಮರಣಾ ದಿನಾಚರಣೆ; ಬಂಪರ್​ ಕೊಡುಗೆ ನೀಡಿದ ಸಿಎಂ

ರಾಜ್ಯದಲ್ಲಿ ಈ ವರ್ಷ 16 ಜನ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹುತಾತ್ಮರಾಗಿದ್ದು, ಹುತಾತ್ಮರಾದ ಅಧಿಕಾರಿ, ಸಿಬ್ಬಂದಿಗೆ ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ ಪರಮೇಶ್ವರ್​ ಅವರು ಗೌರವ ಸಮರ್ಪಣೆ ಸಲ್ಲಿಸಿದ್ದಾರೆ.

ಬೆಂಗಳೂರು: ಪೊಲೀಸ್ ಸಂಸ್ಮರಣಾ ದಿನಾಚರಣೆ; ಬಂಪರ್​ ಕೊಡುಗೆ ನೀಡಿದ ಸಿಎಂ
ಸಿದ್ದರಾಮಯ್ಯ, ಜಿ. ಪರಮೇಶ್ವರ್​
Follow us
Prajwal Kumar NY
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 21, 2023 | 9:49 AM

ಬೆಂಗಳೂರು, ಅ.21: ಪೊಲೀಸ್ ಸಂಸ್ಮರಣ ದಿನಾಚರಣೆ(Police Remembrance Day)ಯನ್ನು ಇಂದು(ಅ.21) ಮೈಸೂರು ರಸ್ತೆಯ ಸಿಎಆರ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದು, ಕರ್ತವ್ಯ ನಿರತರಾಗಿ ಪ್ರಾಣತ್ಯಾಗ ಮಾಡಿದವರ ನೆನಪಿಗಾಗಿ ಈ ಹುತಾತ್ಮರ ದಿನಾಚರಣೆಯನ್ನು ಪ್ರತಿ ವರ್ಷ ಆಚರಿಸಿಕೊಂಡ ಬರಲಾಗುತ್ತಿದೆ. ಇನ್ನು ರಾಜ್ಯದಲ್ಲಿ ಈ ವರ್ಷ 16 ಜನ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹುತಾತ್ಮರಾಗಿದ್ದು, ಹುತಾತ್ಮರಾದ ಅಧಿಕಾರಿ, ಸಿಬ್ಬಂದಿಗೆ ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ ಪರಮೇಶ್ವರ್​ ಅವರು ಗೌರವ ಸಮರ್ಪಣೆ ಸಲ್ಲಿಸಿದ್ದಾರೆ.

ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ‘ದೇಶದಲ್ಲಿ ರಾಜ್ಯ ಪೊಲೀಸ್ ಇಲಾಖೆ ಉತ್ತಮ ಹೆಸರು ಪಡೆದಿದೆ. ಪೊಲೀಸ್ ಕಾನೂನು ಸುವ್ಯವಸ್ಥೆ ಕಾಪಾಡುವವರು. ಕೆಲಸ ಮಾಡುವಾಗ ಅನೇಕ ಅಪಾಯ ಎದುರಿಸುತ್ತಾರೆ. ಈ ವೇಳೆ ಪ್ರಾಣವನ್ನೂ ಕಳೆದುಕೊಳ್ಳುತ್ತಾರೆ. ಭಾರತದಲ್ಲಿ ಸೆಪ್ಟೆಂಬರ್ 22ರಿಂದ ಆಗಸ್ಟ್​ 23 ರವರೆಗೆ ಸುಮಾರು 189 ಜನ ಪೊಲೀಸ್ ಅಧಿಕಾರಿ, ಸಿಬ್ಬಂದಿ ಕರ್ತವ್ಯ ನಿರತರಾಗಿದ್ದಾಗ ಮೃತಪಟ್ಟಿದ್ದಾರೆ. ಕರ್ನಾಟಕದಲ್ಲಿ 16 ಜನ ಪೊಲೀಸ್ ಅಧಿಕಾರಿ, ಸಿಬ್ಬಂದಿ ಪ್ರಾಣ ತ್ಯಾಗ ಮಾಡಿದ್ದಾರೆ. ಅವರೆಲ್ಲರಿಗೂ ಶ್ರದ್ಧಾಂಜಲಿ ಅರ್ಪಿಸುತ್ತೇನೆ ಎಂದರು.

ಇದನ್ನೂ ಓದಿ:ಬೆಂಗಳೂರು: ಪೊಲೀಸ್​ ಠಾಣೆಯಲ್ಲಿ ಎಎಸ್​ಐ ಮೇಲೆ ಚಪ್ಪಲಿ ಎಸೆದು, ಪಿಎಸ್​​ಐಗೆ ಕಚ್ಚಿದ ಮಹಿಳೆ

2400 ಪೊಲೀಸ್ ಪೆದೆಗಳ ನೇಮಕ ಮಾಡಲಾಗುತ್ತೆ. ಗೃಹ 2025 ಯೋಜನೆ ಅಡಿಯಲ್ಲಿ 2, 225 ಪೊಲೀಸ್ ವಸತಿಗಾಗಿ 450ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಪೊಲೀಸ್ ಅಧಿಕಾರಿ, ಸಿಬ್ಬಂದಿ ಹಾಗೂ ಕುಟುಂಬಸ್ಥರಿಗಾಗಿ ಆರೋಗ್ಯ ಭಾಗ್ಯ ಯೋಜನೆ ಅಡಿ ನೂರು ಕೋಟಿ ಕೊಡಲಾಗಿದೆ. ನಿವೃತ್ತಿ ಅಧಿಕಾರಿ ಮತ್ತು ಸಿಬ್ಬಂದಿ ಅವರ ಅವಲಂಬಿತ ಪತಿ, ಪತ್ನಿಯರ ಚಿಕಿತ್ಸೆಗಾಗಿ 25ಕೋಟಿ ರಿಲೀಸ್ ಮಾಡಿದೆ. ಇನ್ನು ಕರ್ತವ್ಯ ನಿರತ ಸಾವನ್ನಪ್ಪಿದ ಪೊಲೀಸರಿಗೆ 50 ಲಕ್ಷ ಪರಿಹಾರ ಕೊಡಲಾಗುತ್ತೆ ಎಂದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published On - 9:31 am, Sat, 21 October 23

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್