ಬೆಂಗಳೂರಿನಲ್ಲಿ ಪೊಲೀಸರ ಕಾರ್ಯಾಚರಣೆ; ಮಾದಕ ವಸ್ತು ಸೇವಿಸುತ್ತಿದ್ದ 18 ಜನ ಸೇರಿ 3 ಡ್ರಗ್ ಪೆಡ್ಲರ್​ಗಳ ಬಂಧನ

ರಾಜ್ಯ ಇತ್ತೀಚೆಗೆ ಡ್ರಗ್ಸ್​ , ಗಾಂಜಾ ಜಾಲಗಳು ಪತ್ತೆಯಾಗುತ್ತಿದ್ದು, ಈ ಹಿನ್ನಲೆ ಕಟ್ಟುನಿಟ್ಟಿನ ಕ್ರಮವಹಿಸಿದ್ದ ಬೆಂಗಳೂರು(Bangalore) ಕೇಂದ್ರ ವಿಭಾಗದ ಪೊಲೀಸರು, ಡ್ರಗ್ಸ್ ದಂಧೆ ವಿರುದ್ಧ ವಿಶೇಷ ಕಾರ್ಯಾಚರಣೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಪೊಲೀಸರ ಕಾರ್ಯಾಚರಣೆ; ಮಾದಕ ವಸ್ತು ಸೇವಿಸುತ್ತಿದ್ದ 18 ಜನ ಸೇರಿ 3 ಡ್ರಗ್ ಪೆಡ್ಲರ್​ಗಳ ಬಂಧನ
ಸಾಂದರ್ಭಿಕ ಚಿತ್ರ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Jun 01, 2023 | 2:03 PM

ಬೆಂಗಳೂರು: ರಾಜ್ಯ ಇತ್ತೀಚೆಗೆ ಡ್ರಗ್ಸ್​ , ಗಾಂಜಾ ಜಾಲಗಳು ಪತ್ತೆಯಾಗುತ್ತಿದ್ದು, ಈ ಹಿನ್ನಲೆ ಕಟ್ಟುನಿಟ್ಟಿನ ಕ್ರಮವಹಿಸಿದ್ದ ಬೆಂಗಳೂರು(Bangalore) ಕೇಂದ್ರ ವಿಭಾಗದ ಪೊಲೀಸರು, ಡ್ರಗ್ಸ್ ದಂಧೆ ವಿರುದ್ಧ ವಿಶೇಷ ಕಾರ್ಯಾಚರಣೆ ಮಾಡಿದ್ದಾರೆ. ಹೌದು ಇಂದು(ಜೂ.1) ನಗರದ ವಿವಿಧೆಡೆ ದಾಳಿ ನಡೆಸಿದ್ದ ಪೊಲೀಸರು ಗಾಂಜಾ, ಇತರೆ ಮಾದಕ ವಸ್ತು ಸೇವಿಸುತ್ತಿದ್ದ 18 ಜನ ಸೇರಿ 3 ಡ್ರಗ್ ಪೆಡ್ಲರ್​ಗಳ ಬಂಧಿಸಿದ್ದಾರೆ. ಡ್ರಗ್​ ಪೆಡ್ಲರ್​(Drug Peddler)ಗಳ ಬಳಿಯಿದ್ದ 2.5 ಕೆಜಿ ಗಾಂಜಾ, 11 ಗ್ರಾಂ ಎಂಡಿಎಂಎ, 7 ಗ್ರಾಂ ಹೈಡ್ರಾ ಮ್ಯಾಂಗೋ ವಶಕ್ಕೆ ಪಡೆದಿದ್ದಾರೆ.

ಕಾಲೇಜು, ಪಿಜಿಗಳ ಬಳಿ ಡ್ರಗ್ ಮಾರಾಟ: ಡ್ರಗ್​​ ಪೆಡ್ಲರ್ ಬಂಧಿಸಿದ ಬೆಂಗಳೂರು ಪೊಲೀಸರು

ಬೆಂಗಳೂರು: ಕಾಲೇಜು, ಪಿಜಿಗಳ ಬಳಿ ಡ್ರಗ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ನಿನ್ನೆ(ಮೇ.31) ಬೆಂಗಳೂರು ಪೊಲೀಸರು ಬಂಧಿಸಿದ್ದರು. ಫಯಾಜ್ ಪಾಷಾ ಅಲಿಯಾಸ್ ಪಿಲ್ಲು ಬಂಧಿತ ಡ್ರಗ್ ಪೆಡ್ಲರ್. ಗುಬ್ಬಲಾಳ ಬಳಿಯ ಖಾಲಿ ಜಾಗವೊಂದರಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ತಲಘಟ್ಟಪುರ ಠಾಣಾ ಪೊಲೀಸರು, ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದರು.

ಬಂಧಿತ ಆರೋಪಿ ಪಿಲ್ಲುನಿಂದ 10.50 ಲಕ್ಷ ಮೌಲ್ಯದ 15 ಕೆಜಿ ಗಾಂಜಾ, ನಗದು ಮತ್ತು ಬೈಕ್ ಜಪ್ತಿ ಮಾಡಿದ್ದರು. ಆರೋಪಿ ವಿರುದ್ಧ ಬನಶಂಕರಿ, ಜಯನಗರ, ಕೋರಮಂಗಲ, ಕೆ.ಎಸ್.ಲೇಔಟ್ ಸೇರಿ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ​​ ದಾಖಲಾಗಿದ್ದವು. ಸದ್ಯ ಆರೋಪಿಯನ್ನು ಬಂಧಿಸಿದ್ದ ಪೊಲೀಸರು ತನಿಖೆ ಆರಂಭಿಸಿದ್ದರು.

ಇದನ್ನೂ ಓದಿ:Bidar News: ಮಹಾರಾಷ್ಟ್ರ ಸರ್ಕಾರಿ ಬಸ್​ನಲ್ಲಿ ಗಾಂಜಾ ಸಾಗಾಟ: ಇಬ್ಬರ ಬಂಧನ

ಜೈಲಿನಲ್ಲಿದ್ದುಕೊಂಡೇ ಹೆಂಡತಿಮಕ್ಕಳಿಂದ ಗಾಂಜಾ ದಂಧೆ: 13 ಲಕ್ಷ ರೂ. ಮೌಲ್ಯದ ಗಾಂಜಾ ಜೊತೆ ಸಿಕ್ಕಿಬಿದ್ದ ಮಹಿಳೆ

ಬೆಂಗಳೂರು: ಜೈಲಿನಲ್ಲಿ ಕೂತು ಕೊಂಡೇ ತನ್ನ ಹೆಂಡತಿ ಮಕ್ಕಳಿಂದ ಆರೋಪಿ ಗಾಂಜಾ ದಂಧೆ ಮುಂದುವರೆಸಿದ್ದು ಮಹಿಳೆ ಪೊಲೀಸರ ಬಲೆಗೆ ಬಿದ್ದಿದ್ದಳು. ಗಾಂಜಾ ದಂಧೆಯಲ್ಲಿ ಒಂದು ತಿಂಗಳ ಹಿಂದೆ ಜೆಜೆ ನಗರ ಪೊಲೀಸರಿಂದ ಅರೆಸ್ಟ್ ಆಗಿ ಜೈಲು ಪಾಲಾಗಿದ್ದ ಮುಜ್ಜು ಎಂಬುವವನ ಹೆಂಡತಿ ನಗ್ಮಾ, ಗಾಂಜಾ ಸಾಗಿಸುವಾಗ ಕಲಾಸಿಪಾಳ್ಯ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಳು. ಬಳಿಕ ಪೊಲೀಸರು ಆಕೆಯನ್ನೂ ಜೈಲಿಗಟ್ಟಿದ್ದರು. ಗಂಡ-ಹೆಂಡತಿ ಇಬ್ಬರೂ ಪರಪ್ಪನ ಅಗ್ರಹಾರ ಸೇರಿದ್ದು, ಮಕ್ಕಳು ಅನಾಥರಾಗಿದ್ದಾರೆ. ಈ ಗಂಡ-ಹೆಂಡತಿ ತಮ್ಮ ಚಿಕ್ಕ ಮಕ್ಕಳನ್ನೇ ಬಳಸಿಕೊಂಡಿ ಗಾಂಜಾ ದಂಧೆ ನಡೆಸುತ್ತಿದ್ದರು ಎಂಬುವುದು ಪತ್ತೆಯಾಗಿತ್ತು.

ಆರೋಪಿ ಮುಜ್ಜು ವಿಶಾಖಪಟ್ಟಣದಿಂದ ಗಾಂಜಾ ತಂದು ಬೆಂಗಳೂರಿನಲ್ಲಿ ಮಾರಾಟ ಮಾಡ್ತಿದ್ದ. ಜೆಜೆ ನಗರ ಪೊಲೀಸರು ಆತನನ್ನ ಬಂಧಿಸಿ ಜೈಲಿಗೆ ಅಟ್ಟಿದ್ದರು. ಪತಿ‌ ಬಳಿಕ ಫೀಲ್ಡ್​ಗೆ ಇಳಿದ ಪತ್ನಿ ಗಾಂಜಾ ಮಾರಾಟ ಮಾಡುವುದನ್ನು ಮುಂದುವರೆಸಿದ್ದಳು. ಗಾಂಜಾ ತರಲು ತನ್ನ ಮೂವರು ಮಕ್ಕಳೇ ಅಸ್ತ್ರವಾಗಿ ಬಳಸಿಕೊಂಡಿದ್ದಳು. 1,3,7 ವರ್ಷದ ಮೂವರು ಮಕ್ಕಳನ್ನು ಗಾಂಜಾ ದಂಧೆಯಲ್ಲಿ ತೊಡಗಿಸಿಕೊಂಡಿದ್ದಳು. ಮಕ್ಕಳು, ತಾಯಿ ಜೊತೆ ಹೋಗಿ ಬ್ಯಾಗ್​ನಲ್ಲಿ ಗಾಂಜಾ ತಂದು ಡೀಲ್ ಮಾಡುತ್ತಿದ್ದರು ಎಂದು ಮಾಹಿತಿ ಬಯಲಾಗಿತ್ತು. 26 ಕೆಜಿ ಗಾಂಜಾ ಜೊತೆಗೆ ಸಿಕ್ಕಿಬಿದ್ದ ಮಹಿಳೆಯನ್ನು ಕಲಾಸಿಪಾಳ್ಯ ಪೊಲೀಸರು ಜೈಲಿಗಟ್ಟಿದ್ದರು.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್