ಬೆಂಗಳೂರು: ದೇಶದ 74ನೇ ಗಣರಾಜ್ಯೋತ್ಸವದ ದಿನದ ಅಂಗವಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸರಿಗೆ ರಾಷ್ಟ್ರಪತಿ ಪದಕ ಘೋಷಣೆ (Police President Medal) ಮಾಡಲಾಗಿದೆ. ಗಣನೀಯ ಸೇವೆ ಸಲ್ಲಿಸಿದ 901 ಪೊಲೀಸ್ ಸಿಬ್ಬಂದಿಗೆ ರಾಷ್ಟ್ರಪತಿ ಪದಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಈ ಪೈಕಿ ಕರ್ನಾಟಕ ಪೋಲೀಸ್ ಸಿಬ್ಬಂದಿಗೆ ಒಟ್ಟು 20 ಪ್ರಶಸ್ತಿ ಲಭಿಸಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಪಟ್ಟಿ ಪ್ರಕಟಿಸಿದೆ. ಗಣನೀಯ ಸೇವೆ ಸಲ್ಲಿಸಿದ ಕರ್ನಾಟಕ ಪೋಲೀಸ್ ಸಿಬ್ಬಂದಿಗೆ ಒಟ್ಟು 20 ಪ್ರಶಸ್ತಿ ಲಭಿಸಿದ್ದು, ಅದರಲ್ಲಿ 19 ಪ್ರಶಸ್ತಿ ವಿಶಿಷ್ಟ ಸೇವೆ ಮತ್ತು 1 ಗಣನೀಯ ಸೇವೆಗೆ ಪ್ರಶಸ್ತಿ, 8 ಇತರ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಪೊಲೀಸ್ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆಗಾಗಿ ಅತ್ಯುನ್ನತ ಗೌರವ ರಾಷ್ಟ್ರಪತಿ ಪದಕ ನೀಡಲಾಗುತ್ತದ್ದು, ಈ ಪದಕ ಎಡಿಜಿಪಿ ಶರತ್ ಚಂದ್ರ ಅವರಿಗೂ ಸಿಕ್ಕಿದೆ. ಇವರು ಶಿಕ್ಷಕರ ನೇಮಕಾತಿ ಹಗರಣ ಪ್ರಕರಣ ಸೇರಿದಂತೆ ಸಾಕಷ್ಟು ಪ್ರಮುಖ ಪ್ರಕರಣಗಳನ್ನು ಭೇದಿಸುವಲ್ಲಿ ಇವರದ್ದು ಪ್ರಮುಖ ಪಾತ್ರವಿದೆ. ಹಾಗಾಗಿ ತಮ್ಮ ವೃತ್ತಿ ಜೀವನದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆಗಾಗಿ ಕರ್ನಾಟಕದ ಎಡಿಜಿಪಿ ಶರತ್ ಚಂದ್ರ ಅವರಿಗೆ ಈ ಬಾರಿಯ ಗಣರಾಜ್ಯೋತ್ಸವದಂದು ರಾಷ್ಟ್ರಪತಿ ಪದಕ ನೀಡಿ ಗೌರವಿಸಲಾಗುತ್ತಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:04 pm, Wed, 25 January 23