ಹಳೆ ಛಾಪಾಕಾಗದ ಮಾರಾಟ ಮಾಡ್ತಿದ್ದವರ ಮನೆ ಮೇಲೆ ಪೊಲೀಸರ ದಾಳಿ; ಸಾಕಷ್ಟು ಅಪರಾಧ ಕೃತ್ಯ ಬೆಳಕಿಗೆ

ಲಿಟಿಗೇಷನ್ ಸೈಟ್​ಗಳನ್ನು ಕಬ್ಜಾ ಮಾಡುವುದಕ್ಕೆ ಕಾಗದ ಪತ್ರಗಳನ್ನು ಸಿದ್ಧಮಾಡಲಾಗುತ್ತಿತ್ತು. ದಾಳಿಯಲ್ಲಿ ಐವರು ಛಾಪಾಕಾಗದ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಳೆ ಛಾಪಾಕಾಗದ ಮಾರಾಟ ಮಾಡ್ತಿದ್ದವರ ಮನೆ ಮೇಲೆ ಪೊಲೀಸರ ದಾಳಿ; ಸಾಕಷ್ಟು ಅಪರಾಧ ಕೃತ್ಯ ಬೆಳಕಿಗೆ
ಸಾಂಕೇತಿಕ ಚಿತ್ರ
Follow us
TV9 Web
| Updated By: preethi shettigar

Updated on:Nov 13, 2021 | 1:09 PM

ಬೆಂಗಳೂರು: ಹಳೆ ಛಾಪಾಕಾಗದ ಮಾರಾಟ ಮಾಡುತ್ತಿದ್ದವರ ಮನೆ ಮೇಲೆ ಬೆಂಗಳೂರಿನ ಪೂರ್ವ ವಿಭಾಗದ ಪೊಲೀಸರು ದಾಳಿ ಮಾಡಿದ್ದಾರೆ. ದಾಳಿ ವೇಳೆ ಸಾವಿರಾರು ಛಾಪಾಕಾಗದ (old stamp papers) ಪತ್ತೆಯಾಗಿದೆ. ಡಿಸಿಪಿ ಶರಣಪ್ಪ, ಎಸಿಪಿ ಸಕ್ರಿ ನೇತೃತ್ವದಲ್ಲಿ ಬ್ಯಾಟರಾಯನಪುರ, ಕೋರಮಂಗಲ ಸೇರಿ ನಾಲ್ಕು ಕಡೆ ದಾಳಿ ನಡೆಸಲಾಗಿದೆ. ಈ ಸಂದರ್ಭದಲ್ಲಿ ಹಳೆ ಛಾಪಾಕಾಗದ ಬಳಸಿಕೊಂಡು ಸಾಕಷ್ಟು ಅಪರಾಧ ಕೃತ್ಯ ನಡೆಸುತ್ತಿರುವುದು ಬೆಳಕಿಗೆ ಬಂದಿದೆ.

ಲಿಟಿಗೇಷನ್ ಸೈಟ್​ಗಳನ್ನು ಕಬ್ಜಾ ಮಾಡುವುದಕ್ಕೆ ಕಾಗದ ಪತ್ರಗಳನ್ನು ಸಿದ್ಧಮಾಡಲಾಗುತ್ತಿತ್ತು. ದಾಳಿಯಲ್ಲಿ ಐವರು ಛಾಪಾಕಾಗದ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ಒಂಟಿ ಮನೆಯಲ್ಲಿ ವಾಸವಾಗಿದ್ದ ಮಹಿಳೆಯನ್ನು ಕಟ್ಟಿ ಹಾಕಿ ಕಳ್ಳತನ ಒಂಟಿ ಮನೆಯಲ್ಲಿ ವಾಸವಾಗಿದ್ದ ಮಹಿಳೆಯನ್ನು ಕಟ್ಟಿ ಹಾಕಿ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಕೃತ್ಯ ನಡೆದ 24 ಗಂಟೆಯಲ್ಲಿ ಬೆಂಗಳೂರಿನ ಚಿಕ್ಕಜಾಲ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದೊಡ್ಡಜಾಲದಲ್ಲಿ ಮಹಿಳೆ ಮನೆಗೆ ನುಗ್ಗಿ ಆರೋಪಿಗಳು ಕಳ್ಳತನ ಎಸಗಿದ್ದರು. ಮಹಿಳೆಯನ್ನು ಕಟ್ಟಿಹಾಕಿ ಬಾಯಿಗೆ ಬಟ್ಟೆ ತುರುಕಿ, ಮನೆಯಲ್ಲಿ ಚಿನ್ನಾಭರಣ, ನಗದು ದೋಚಿ ಪರಾರಿಯಾಗಿದ್ದರು. ದೊಡ್ಡಜಾಲದ ರಾಕೇಶ್ ಸೇರಿ ಇಬ್ಬರು ಆರೋಪಿಗಳು ಸದ್ಯ ಬಂಧನಕ್ಕೊಳಗಾಗಿದ್ದಾರೆ.

ದೊಡ್ಡಜಾಲದ ಒಂಟಿ ಮನೆಯಲ್ಲಿ ಮಹಿಳೆಯೊಬ್ಬರು ವಾಸವಾಗಿದ್ದರು. ಇದೇ ತಿಂಗಳ 6ನೇ ತಾರೀಖು ರಾತ್ರಿ ವೇಳೆ ಮಹಿಳೆ ಮನೆಗೆ ನುಗ್ಗಿದ್ದ ಖದೀಮರು ಕಳ್ಳತನ ನಡೆಸಿದ್ದರು. ಮನೆಯ ಬಾಗಿಲು ತಟ್ಟಿ ಒಳ ಪ್ರವೇಶಿಸಿ ಕೃತ್ಯ ಎಸಗಿದ್ದರು. ಬಾಗಿಲು ತೆರೆದ ಮಹಿಳೆ ಮೇಲೆ ಹಲ್ಲೆ ಮಾಡಿದ್ದ ಆರೋಪಿಗಳು, ನಂತರ ಮಹಿಳೆಯ ಬಾಯಿಗೆ ಬಟ್ಟೆ ತುರುಕಿ ಕೈಕಾಲು ಕಟ್ಟಿ ಹಾಕಿದ್ದರು. ನಂತರ ಮನೆಯಲ್ಲಿದ್ದ ಚಿನ್ನಾಭರಣ, ನಗದು ಕದ್ದು ಎಸ್ಕೇಪ್ ಆಗಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಚಿಕ್ಕಜಾಲ ಪೊಲೀಸರು ಮಾಹಿತಿ ಬಂದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

ಮಹಿಳೆಯ ಮಗಳು ವಿದೇಶದಲ್ಲಿ ವಾಸವಿದ್ದಾರೆ. ದೊಡ್ಡ ಮನೆಯಲ್ಲಿ ಮಹಿಳೆ ಒಂಟಿಯಾಗಿ ವಾಸವಿದ್ದರು. ಅದೇ ಊರಿನ ನಿವಾಸಿಯಾದ ರಾಕೇಶ್ ಮಹಿಳೆ ಬಗ್ಗೆ ಮಾಹಿತಿ ಪಡೆದು ತನ್ನ ಗೆಳೆಯನೊಂದಿಗೆ ಸೇರಿ ಕೃತ್ಯ ಎಸಗಿದ್ದಾನೆ. ಸದ್ಯ ಆರೋಪಿಗಳ ಬಂಧಿಸಿ ಚಿಕ್ಕಜಾಲ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ನಮಾಜ್​ಗೆ ಅಡ್ಡಿಪಡಿಸಿ, ಪ್ರತಿಭಟನೆ ನಡೆಸಿದ 30 ಜನರನ್ನು ವಶಕ್ಕೆ ಪಡೆದ ಪೊಲೀಸರು

ಬೆಳಗಾವಿ ಸಿಇಎನ್ ಪೊಲೀಸರ ಭರ್ಜರಿ ಕಾರ್ಯಾಚರಣೆ! ಆನ್​ಲೈನ್​ನಲ್ಲಿ ಹಣ ಕಳೆದುಕೊಂಡಿದ್ದ 2 ಕೋಟಿಗೂ ಹೆಚ್ಚು ಹಣ ಜಪ್ತಿ

Published On - 1:01 pm, Sat, 13 November 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ