ಓವರ್ ಟೈಂ ಓಪನ್, ಅಶ್ಲೀಲ ಡ್ಯಾನ್ಸ್: ಬೆಂಗಳೂರಿನ 17 ಕ್ಕೂ ಹೆಚ್ಚು ಡ್ಯಾನ್ಸ್ ಬಾರ್​ಗಳ ಮೇಲೆ ಪೊಲೀಸರಿಂದ ದಾಳಿ

ಅವಧಿ ಮೀರಿದರೂ ತೆರೆದಿರುವುದು, ಯುವತಿಯರಿಂದ ಅಶ್ಲೀಲ ನೃತ್ಯ ಮಾಡಿಸುವುದೂ ಸೇರಿದಂತೆ ವಿವಿಧ ನಿಯಮಗಳ ಉಲ್ಲಂಘನೆ ಮಾಡುತ್ತಿದ್ದ ಆರೋಪದ ಕಾರಣ ಬೆಂಗಳೂರು ಪೊಲೀಸರು 17ಕ್ಕೂ ಹೆಚ್ಚು ಬಾರ್​ಗಳ ಮೇಲೆ ದಾಳಿ ನಡೆಸಿ, ಕೆಲವು ಬಾರ್​ಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮತ್ತೊಂದು ಪ್ರಕರಣದಲ್ಲಿ, ಬೆಂಗಳೂರಿನಲ್ಲಿ ಕಾರು ಕದ್ದು ಹಳ್ಳಿಗಳಲ್ಲಿ ಮಾರಾಟ ಮಾಡುತ್ತಿದ್ದ ಗ್ಯಾಂಗ್​ ಅನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ.

ಓವರ್ ಟೈಂ ಓಪನ್, ಅಶ್ಲೀಲ ಡ್ಯಾನ್ಸ್: ಬೆಂಗಳೂರಿನ 17 ಕ್ಕೂ ಹೆಚ್ಚು ಡ್ಯಾನ್ಸ್ ಬಾರ್​ಗಳ ಮೇಲೆ ಪೊಲೀಸರಿಂದ ದಾಳಿ
ಬೆಂಗಳೂರು ಪೊಲೀಸ್
Updated By: Ganapathi Sharma

Updated on: Jun 20, 2025 | 7:57 AM

ಬೆಂಗಳೂರು, ಜೂನ್ 20: ಬೆಂಗಳೂರು (Bengaluru) ನಗರದ ವಿವಿಧ ಕಡೆಗಳಲ್ಲಿ ಡ್ಯಾನ್ಸ್ ಬಾರ್​ಗಳ (Bangalore Bars) ಮೇಲೆ ಗುರುವಾರ ತಡರಾತ್ರಿ ಪೊಲೀಸರು ದಾಳಿ ಮಾಡಿದ್ದಾರೆ. ಕ್ಲಬ್ ಒನ್, ರಂಬಾ, ಬ್ರಿಗೇಡ್ ಬ್ಲೂ ಸೇರಿದಂತೆ 17 ಕ್ಕೂ ಹೆಚ್ಚು ಬಾರ್​​ಗಳ ಮೇಲೆ ದಾಳಿ ನಡೆದಿದೆ. ಅವಧಿ ಮೀರಿ ಕಾರ್ಯಾಚರಿಸುತ್ತಿರುವುದು, ಯುವತಿಯರಿಂದ ಅಶ್ಲೀಲ ನೃತ್ಯ ಮಾಡಿಸುತ್ತಿರುವುದೂ ಸೇರಿದಂತೆ ಹಲವು ನಿಯಮಗಳ ಉಲ್ಲಂಘನೆ ಆರೋಪದ ಕಾರಣ ದಾಳಿ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು ಕೇಂದ್ರ ವಿಭಾಗ ಹಾಗೂ ಪಶ್ಚಿಮ ವಿಭಾಗದ ಡ್ಯಾನ್ಸ್ ಬಾರ್​ಗಳ ಮೇಲೂ ದಾಳಿ ನಡೆದಿದೆ. ಕಬ್ಬನ್ ಪಾರ್ಕ್, ಅಶೋಕ್ ನಗರ, ಎಸ್.ಜೆ.ಪಾರ್ಕ್, ಉಪ್ಪಾರಪೇಟೆ ಸೇರಿ ನಗರದ ವಿವಿಧ ಠಾಣಾ ವ್ಯಾಪ್ತಿಗಳ ಬಾರ್​ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ನಿಯಮ ಉಲ್ಲಂಘಿಸಿದ ಬಾರ್​ಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಕಾರುಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಬಂಧನ

ಮತ್ತೊಂದು ಪ್ರಕರಣದಲ್ಲಿ, ಕಾರುಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಗ್ಯಾಂಗ್​ ಅನ್ನು ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಉಮೇಶ್, ತಬ್ರೇಜ್, ಜಬೀರ್ ಖಾನ್ ಬಂಧಿತ ಆರೋಪಿಗಳಾಗಿದ್ದಾರೆ. ಇವರಿಂದ 12 ಲಕ್ಷ ರೂ. ಮೌಲ್ಯದ ಆರು ಓಮ್ನಿ ಕಾರುಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ
SSLC ಫಲಿತಾಂಶ ಕಡಿಮೆ ಬಂದರೆ ಶಿಕ್ಷಕರ ವಾರ್ಷಿಕ ವೇತನ ಬಡ್ತಿಗೆ ತಡೆ!
ಚಾಮರಾಜನಗರದಲ್ಲಿ ವ್ಯಾಘ್ರ ಅಟ್ಟಹಾಸ: ತಿಂಗಳಲ್ಲಿ 2 ಜೀವ ಬಲಿ ಪಡೆದ ನರಭಕ್ಷಕ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!

ಆರೋಪಿಗಳಾದ ಜಬೀರ್ ಖಾನ್, ಉಮೇಶ್, ತಬ್ರೇಜ್

ಈ ಹಿಂದೆ ಈ ಗ್ಯಾಂಗ್​​ ಟ್ರ್ಯಾಕ್ಟರ್​​ಗಳನ್ನು ಕದ್ದು ಮಾರಾಟ ಮಾಡುತ್ತಿತ್ತು. 2020ರಲ್ಲಿ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಟ್ರ್ಯಾಕ್ಟರ್ ಕಳ್ಳತನ ಕೇಸ್​​ನಲ್ಲಿ ಬಂಧನವಾಗಿತ್ತು. ನಂತರ ಜೈಲು ಸೇರಿದ್ದ ಆರೋಪಿಗಳು ಜಾಮೀನು ಪಡೆದು ಹೊರಬಂದಿದ್ದರು. ಬಳಿಕ ಟ್ರ್ಯಾಕ್ಟರ್ ಬಿಟ್ಟು ಓಮ್ನಿ ಕಾರು ಕದಿಯುತ್ತಿದ್ದರು.

ಇದನ್ನೂ ಓದಿ: ಎಸ್​ಎಸ್​ಎಲ್​ಸಿ ಫಲಿತಾಂಶ ಕಡಿಮೆ ಬಂದರೆ ಶಿಕ್ಷಕರ ವಾರ್ಷಿಕ ವೇತನ ಬಡ್ತಿಗೆ ತಡೆ, ಶಾಲೆ ಅನುದಾನ ಬಂದ್

ಬೆಂಗಳೂರಿನಲ್ಲಿ ಕಾರುಗಳನ್ನು ಕದ್ದು ಹಳ್ಳಿಗಳಲ್ಲಿ ಮಾರಾಟ ಮಾಡುತ್ತಿದ್ದರು. ಆರೋಪಿಗಳು ಮೇ ತಿಂಗಳಲ್ಲಿ ವಿದ್ಯಾರಣ್ಯಪುರದಲ್ಲಿ ಕಾರು ಕಳವು ಮಾಡಿದ್ದರು. ಆ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ