ರಾಜ್ಯಾದ್ಯಂತ ಪಿಎಫ್​ಐ ಮುಖಂಡರ ಮನೆಗಳ ಮೇಲೆ ದಾಳಿ: 70ಕ್ಕೂ ಹೆಚ್ಚು ಮುಖಂಡರು ವಶಕ್ಕೆ

ಕಾನೂನು & ಸುವ್ಯವಸ್ಥೆ ಎಡಿಜಿಪಿ ಅಲೋಕ್​ ಕುಮಾರ್​ ನೇತೃತ್ವದಲ್ಲಿ ಪಿಎಫ್​ಐ (PFI) ಮುಖಂಡರ ಮನೆಗಳ ಮೇಲೆ ದಾಳಿ ನಡೆದಿದ್ದು 40ಕ್ಕೂ ಹೆಚ್ಚು ಮುಖಂಡರನ್ನ ವಶಕ್ಕೆ ಪಡೆಯಲಾಗಿದೆ.

ರಾಜ್ಯಾದ್ಯಂತ ಪಿಎಫ್​ಐ ಮುಖಂಡರ ಮನೆಗಳ ಮೇಲೆ ದಾಳಿ: 70ಕ್ಕೂ ಹೆಚ್ಚು ಮುಖಂಡರು ವಶಕ್ಕೆ
ರಾಜ್ಯಾದ್ಯಂತ ಪಿಎಫ್​ಐ ಮುಖಂಡರ ಮನೆಗಳ ಮೇಲೆ ದಾಳಿ
Follow us
TV9 Web
| Updated By: ಆಯೇಷಾ ಬಾನು

Updated on:Sep 27, 2022 | 9:54 AM

ಬೆಂಗಳೂರು: ಬೆಳ್ಳಂ ಬೆಳಗ್ಗೆ ರಾಜ್ಯಾದ್ಯಂತ ಪಿಎಫ್​ಐ (PFI) ಮುಖಂಡರ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಹಾಗೂ 70ಕ್ಕೂ ಹೆಚ್ಚು ಮುಖಂಡರನ್ನ ವಶಕ್ಕೆ ಪಡೆದಿದ್ದಾರೆ. ಬಾಗಲಕೋಟೆ, ಬೀದರ್​, ಚಾಮರಾಜನಗರ, ಚಿತ್ರದುರ್ಗ, ರಾಮನಗರ, ಮಂಗಳೂರು, ಕೊಪ್ಪಳ, ಬಳ್ಳಾರಿ, ಕೋಲಾರ, ಬೆಂಗಳೂರು ಗ್ರಾ., ಮೈಸೂರು, ವಿಜಯಪುರ ಸೇರಿದಂತೆ ರಾಜ್ಯಾದ್ಯಂತ ಪಿಎಫ್​​ಐ ಮುಖಂಡರ ಮನೆ ಮೇಲೆ ದಾಳಿ ನಡೆದಿದೆ.

ಕಳೆದ ಕೆಲ ದಿನಗಳ ಹಿಂದೆ ಎನ್​ಐಎ ದಾಳಿ ನಡೆಸಿ ನೂರಕ್ಕೂ ಹೆಚ್ಚು ಪಿಎಫ್​ಐ ಮುಖಂಡರನ್ನು ವಶಕ್ಕೆ ಪಡೆಯಲಾಗಿತ್ತು. ಈಗ ಮತ್ತೆ ಕಾನೂನು & ಸುವ್ಯವಸ್ಥೆ ಎಡಿಜಿಪಿ ಅಲೋಕ್​ ಕುಮಾರ್​ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು 40ಕ್ಕೂ ಹೆಚ್ಚು ಮುಖಂಡರನ್ನ ವಶಕ್ಕೆ ಪಡೆಯಲಾಗಿದೆ. ಶಾಂತಿ ಕದಡುವ ಕೃತ್ಯದಲ್ಲಿ ಭಾಗಿ ಆರೋಪದಡಿ ವಶಕ್ಕೆ ಪಡೆಯಲಾಗಿದೆ.

ಈ ಬಗ್ಗೆ ಮಾತನಾಡಿದ ಎಡಿಜಿಪಿ ಅಲೋಕ್​ ಕುಮಾರ್,  ರಾಜ್ಯಾದ್ಯಂತ PFI ಮುಖಂಡರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಈವರೆಗೂ ಸುಮಾರು 70 PFI ಕಾರ್ಯಕರ್ತರು ವಶಕ್ಕೆ ಪಡೆಯಲಾಗಿದೆ. ಶಾಂತಿ ಕದಡುವ ಕೃತ್ಯದಲ್ಲಿ ಭಾಗಿ ಆರೋಪದಡಿ ಆಯಾ ಜಿಲ್ಲೆಗಳಲ್ಲಿ ಎಸ್​ಪಿ ನೇತೃತ್ವದಲ್ಲಿ ದಾಳಿ ನಡೆದಿದೆ ಎಂದರು.

ಬಾಗಲಕೋಟೆಯಲ್ಲಿ 7 ಜನ ಪಿಎಫ್​ಐ ಹಾಗೂ ಎಸ್​ಡಿಪಿಐ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ. ವಿಜಯಪುರ ನಗರದಲ್ಲಿ ಜಿಲ್ಲಾ ಪೊಲೀಸರು ಪಿಎಫ್ಐ ಮುಖ್ಯಸ್ಥನನ್ನು ವಶಕ್ಕೆ ಪಡೆದಿದ್ದಾರೆ. ನಗರದ ಜಿಎಂ ರಸ್ತೆಯಲ್ಲಿರೋ ಅಶ್ಪಾಕ್ ಜಮಖಂಡಿ ಮನೆಯಲ್ಲಿದ್ದ ವೇಳೆ ಆತನನ್ನು ವಶಕ್ಕೆ ಪಡೆಯಲಾಗಿದೆ. ಪಿಎಫ್ಐ ಸಂಘಟನೆ ಹೋರಾಟ, ಹಣಕಾಸಿನ ವ್ಯವಹಾರ ಸೇರಿದಂತೆ ಇತರೆ ವಿಷಯಗಳ ವಿಚಾರಣೆ ನಡೆಸಲಾಗುತ್ತಿದೆ. ವಿಚಾರಣೆ ಬಳಿಕ ಅವಶ್ಯಕತೆ ಬಿದ್ದರೆ ಅಶ್ಪಾಕ್ ಜಮಖಂಡಿಯನ್ನು ಬೆಂಗಳೂರಿಗೆ ಕರೆದೊಯ್ಯುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 14 ಮುಖಂಡರ ಮನೆ ಮೇಲೆ ದಾಳಿ ನಡೆಸಿ 10 PFI ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ‘ಲೈಗರ್​’ ಸೋತ ಬಳಿಕ ಮುಂಬೈ ಬಿಟ್ಟು ಬಂದ ನಿರ್ದೇಶಕ ಪುರಿ ಜಗನ್ನಾಥ್​ ಈಗ ಎಲ್ಲಿದ್ದಾರೆ?

ರಾಮನಗರದಲ್ಲಿ‌‌ 9 ಜನ, ಚನ್ನಪಟ್ಟಣದಲ್ಲಿ ‌6 ಜನ ಸೇರಿದಂತೆ 15 ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಾಂತಿ ಕದಡುವ ಕೃತ್ಯದಲ್ಲಿ ಭಾಗಿಯಾದ ಆರೋಪದಡಿ ಕೋಲಾರದಲ್ಲಿ ನವಾಜ್ ಪಾಷಾ, ವಸೀಂ‌ ಪಾಷಾ, ಸಿದ್ದಿಕ್ ಪಾಷಾ, ಅಲ್ಲಾಭಕ್ಷ್ ಇಂತಿಯಾಜ್ ಪಾಷಾ, ಶಾಬಾಜ್ ಪಾಷಾ ಸೇರಿದಂತೆ 6 ಪಿಎಫ್​ಐ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗ, ಭದ್ರಾವತಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಶಿವಮೊಗ್ಗ ಜಿಲ್ಲೆಯಲ್ಲಿ ಐವರು ಪಿಎಫ್​ಐ ಮುಖಂಡರನ್ನ ವಶಕ್ಕೆ ಪಡೆದಿದ್ದಾರೆ. ಇನ್ನು ಉಡುಪಿ ಜಿಲ್ಲೆಯ ಹೂಡೆ, ಕುಂದಾಪುರ, ಗಂಗೊಳ್ಳಿ, ಬೈಂದೂರಿನಲ್ಲೂ ರೇಡ್​ ಆಗಿದ್ದು ನಾಲ್ವರು PFI ಮುಖಂಡರನ್ನ ವಶಕ್ಕೆ ಪಡೆಯಲಾಗಿದೆ. ಕಲಬುರಗಿಯಲ್ಲಿ ಹುಸೇನ್ ಎಂಬ ಓರ್ವ PFI ಮುಖಂಡನನ್ನು ವಶಕ್ಕೆ ಪಡೆಯಲಾಗಿದ್ದು ಮತ್ತಿಬ್ಬರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಇನ್ನು ಚಾಮರಾಜನಗರ ಜಿಲ್ಲೆಯಲ್ಲಿ PFI ಜಿಲ್ಲಾಧ್ಯಕ್ಷ ಕಪಿಲ್, ಕಾರ್ಯದರ್ಶಿ ಸುಯೇಬ್ ಸೇರಿ ಇಬ್ಬರು ಪಿಎಫ್​ಐ ಮುಖಂಡರನ್ನ ವಶಕ್ಕೆ ಪಡೆಯಲಾಗಿದೆ. ರಾಯಚೂರಿನಲ್ಲೂ ಮೊಹ್ಮದ್ ಇಸ್ಮಾಯಿಲ್, ಆಸೀಂ ಸೇರಿ ಇಬ್ಬರು PFI ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ. ಬೆಳಗಾವಿಯಲ್ಲಿ ಡಿಸಿಪಿ ರವೀಂದ್ರ ಗಡಾದಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಐವರು PFI ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ. ವಶಕ್ಕೆ ಪಡೆದವರನ್ನು ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಹೊಸಕೋಟೆಯಲ್ಲಿ 4 ಜನ, ದೊಡ್ಡಬಳ್ಳಾಪುರದಲ್ಲಿ 3 ಮತ್ತು ವಿಜಯಪುದಲ್ಲಿ ಇಬ್ಬರ ಮನೆಗಳ ಮೇಲೆ ದಾಳಿ ನಡೆದಿದ್ದು ಒಟ್ಟು 9 ಜನರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

6 ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅರ್ಫಾನ್ ಅಲಿ ಬಂಧನ

ಚಿತ್ರದುರ್ಗದಲ್ಲಿ ಪಿಎಫ್​ಐ ಮುಖಂಡ ಅರ್ಫಾನ್ ಅಲಿಯನ್ನು ಬಂಧಿಸಲಾಗಿದೆ. ಶಾಂತಿ ಕದಡುವ ಕೃತ್ಯದಲ್ಲಿ ಭಾಗಿಯಾದ ಆರೋಪದಡಿ ನಗರದ ಚಿಕ್ಕಪೇಟೆ ಬಡಾವಣೆ ನಿವಾಸಿ ಅರ್ಫಾನ್ ಅಲಿ ಅರೆಸ್ಟ್ ಮಾಡಲಾಗಿದೆ. ಎಸ್​​ಪಿ ಹಾಗೂ ಡಿವೈಎಸ್​​ಪಿ, ಸಿಪಿಐ ನೇತೃತ್ವದಲ್ಲಿ ಕೋಟೆ ಠಾಣೆಯಲ್ಲಿ ಅರ್ಫಾನ್ ಅಲಿ ವಿಚಾರಣೆ ನಡೆಸಲಾಗುತ್ತಿದೆ. ಹಾಗೂ ಹುಬ್ಬಳ್ಳಿಯಲ್ಲಿ 9ಕ್ಕೂ ಹೆಚ್ಚು PFI, SDPI ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ.

PFI ಮಾಜಿ ಅಧ್ಯಕ್ಷ ಮೊಹಮ್ಮದ್ ಬಂಧನ

ರಾಯಚೂರಿನಲ್ಲಿ PFI ಮಾಜಿ ಅಧ್ಯಕ್ಷ ಮೊಹಮ್ಮದ್ ಬಂಧಿಸಲಾಗಿದ್ದು ತಹಶೀಲ್ದಾರ್​​ ಎದುರು ಹಾಜರುಪಡಿಸಿ ಕಾನೂನು ಪ್ರಕ್ರಿಯೆ ನಡೆಸಲಾಗುತ್ತೆ. ಸದ್ಯ ಮೊಹಮ್ಮದ್ ಇಸ್ಮಾಯಿಲ್ ಜಿಲ್ಲಾ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗುತ್ತೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:55 am, Tue, 27 September 22

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ