AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನ ಪೊಲೀಸ್​ ಆಯುಕ್ತರ ಖಡಕ್​ ಸೂಚನೆ: ಬೆಂಗಳೂರಿನಲ್ಲಿ ಬೆಳ್ಳಂಬೆಳ್ಳಗೆ ರೌಡಿ ಶೀಟರ್​ಗಳಿಗೆ ಶಾಕ್

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚಾಗಿರುವ ಕ್ರೈಂ ಚಟುವಟಿಕೆ ಹಾಗೂ ಗಾಂಜಾ ಪ್ರಕರಣಗಳ ಹಿನ್ನಲೆಯಲ್ಲಿ ಪೊಲೀಸರು ಬೆಳ್ಳಂ ಬೆಳ್ಳಗೆ ರೌಡಿಶೀಟರ್‌ಗಳಿಗೆ ಶಾಕ್ ನೀಡಿದ್ದಾರೆ.

ನೂತನ ಪೊಲೀಸ್​ ಆಯುಕ್ತರ ಖಡಕ್​ ಸೂಚನೆ: ಬೆಂಗಳೂರಿನಲ್ಲಿ ಬೆಳ್ಳಂಬೆಳ್ಳಗೆ ರೌಡಿ ಶೀಟರ್​ಗಳಿಗೆ ಶಾಕ್
ರೌಡಿಶೀಟರ್​ ಮನೆಗಳ ಪೊಲೀಸರ ದಾಳಿ
ರಮೇಶ್ ಬಿ. ಜವಳಗೇರಾ
|

Updated on: Jun 08, 2023 | 8:31 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚಾಗಿರುವ ಕ್ರೈಂ ಚಟುವಟಿಕೆ ಹಾಗೂ ಗಾಂಜಾ ಪ್ರಕರಣಗಳ ಹಿನ್ನಲೆಯಲ್ಲಿ ಪೊಲೀಸರು ಬೆಳ್ಳಂ ಬೆಳ್ಳಗೆ ರೌಡಿಶೀಟರ್‌ಗಳಿಗೆ ಶಾಕ್ ನೀಡಿದ್ದಾರೆ. ನೂತನ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಸೂಚನೆ ಮೇರೆಗೆ ದಾಳಿ​​ ನಗರದ 8 ವಿಭಾಗದ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ರೌಡಿಶೀಟರ್​ಗಳ ಮನೆ ಮೇಲೆ ದಾಳಿ ಮಾಡಲಾಗಿದ್ದು, 1 ಸಾವಿರಕ್ಕೂ ಹೆಚ್ಚು ರೌಡಿಶೀಟರ್​ಗಳ ಮನೆಗಳಲ್ಲಿ ಪರಿಶೀಲನೆ ಮಾಡಲಾಗಿದೆ. ದಾಳಿ ವೇಳೆ ಹಲವರ ಮನೆಗಳಲ್ಲಿ ಮಾರಕಾಸ್ತ್ರಗಳು, ಗಾಂಜಾ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Bengaluru News: ನೈತಿಕ ಪೊಲೀಸ್​​ಗಿರಿ, ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷದ ಪೋಸ್ಟ್; ಖಡಕ್ ಎಚ್ಚರಿಕೆ ನೀಡಿದ ಬೆಂಗಳೂರು ಪೊಲೀಸರು

ಬೆಂಗಳೂರು ಪೂರ್ವ ವಿಭಾಗದ ಪೋಲಿಸರು ಹಲಸೂರು, ಪುಲಕೇಶಿನಗರ, ಡಿಜೆ ಹಳ್ಳಿ, KG ಹಳ್ಳಿ ಠಾಣಾ ವ್ಯಾಪ್ತಿಯ ರೌಡಿಶೀಟರ್‌ಗಳ ಮನೆಗಳ ಮೇಲೆ ಡಿಸಿಪಿ ಭೀಮಾಶಂಕರ ಗುಳೇದ್ ನೇತೃತ್ವದಲ್ಲಿ ದಾಳಿ ಮಾಡಿ ಮಾಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಇನ್ನು ಆಗ್ನೇಯ ವಿಭಾಗದ ರೌಡಿಶೀಟರ್‌ಗಳ ಮನೆಗಳ ಮೇಲೂ ದಾಳಿ ನಡೆಸಲಾಗಿದೆ. ಚುನಾವಣಾ ಸಂದರ್ಭದಲ್ಲಿ ಜೈಲು ಸೇರಿ ಬಿಡುಗಡೆಗೊಂಡಿರುವ ರೌಡಿಶೀಟರ್‌ಗಳಿಗೆ ಮತ್ತೆ ಎಚ್ಚರಿಕೆ ಕೊಡುವ ಸಲುವಾಗಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದು, ರೌಡಿ ಆಕ್ಟಿವಿಟಿಗಳಲ್ಲಿ ಭಾಗಿಯಾಗದಂತೆಯೂ ಎಚ್ಚರಿಕೆ ಕೊಡಲಾಗಿದೆ. ಡಿಸಿಪಿ ಸಿಕೆ ಬಾಬ ನೇತೃತ್ವದಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದು, ಕೋರಮಂಗಲ, ಮಡಿವಾಳ, ಆಡುಗೋಡಿ, ಮೈಕೋ ಲೇ ಔಟ್ ಸೇರಿ ಎಲ್ಲಾ ಠಾಣಾ ವ್ಯಾಪ್ತಿಯಲ್ಲಿ ದಾಳಿ ಮಾಡಲಾಗಿದೆ. ಸದ್ಯ ಹಲವು ರೌಡಿಶೀಟರ್‌ಗಳ ಮನೆಗಳಲ್ಲಿ ಮಾರಕಾಸ್ತ್ರ ಪತ್ತೆಯಾಗಿದೆ.

ಇನ್ನು ಪೊಲೀಸ್ ಆಯುಕ್ತ ಬಿ ದಯಾನಂದ ಸೂಚನೆ ಮೇರೆಗೆ ನಗರದ ಎಂಟು ವಿಭಾಗದ ಪೊಲೀಸರಿಂದ ಸುಮಾರು ಒಂದು ಸಾವಿರಕ್ಕೂ ಹೆಚ್ಚು ರೌಡಿಗಳ ನಿವಾಸದ ಮೇಲೆ ದಾಳಿ ನಡೆಸಲಾಗಿದ್ದು, ಈ ವೇಳೆ ಹಲವಾರು ರೌಡಿಗಳ ನಿವಾಸದಲ್ಲಿ ಮಾರಕಾಸ್ತ್ರಗಳು ಮತ್ತು ಗಾಂಜಾ ಪತ್ತೆಯಾಗಿದೆ. ಎಂಟು ವಿಭಾಗದ ಪೊಲೀಸರು ದಾಳಿಯಲ್ಲಿ ಭಾಗಿಯಾಗಿದ್ದರು.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್