AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಫ್ಟ್​ನಲ್ಲಿ ಸಿಲುಕಿದ್ದ ವ್ಯಕ್ತಿ, 2 ಶ್ವಾನಗಳನ್ನ ರಕ್ಷಿಸಿದ ಪೊಲೀಸರು: ಸಾರ್ವಜನಿಕರಿಂದ ಮೆಚ್ಚುಗೆ

ಬೆಂಗಳೂರಿನ ಆರ್​ಜಿಎಸ್ ಕಾಲೇಜ್​ ಬಳಿಯ ಬಿಲ್ಡಿಂಗ್​ನಲ್ಲಿ ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡು ಲಿಫ್ಟ್​ನಲ್ಲಿ ಸಿಲುಕಿದ್ದ ಓರ್ವ ವ್ಯಕ್ತಿ ಮತ್ತು 2 ಶ್ವಾನಗಳನ್ನು ಪೊಲೀಸರು ರಕ್ಷಣೆ ಮಾಡಿರುವಂತಹ ಘಟನೆ ನಡೆದಿದೆ. ಮತ್ತೊಂದು ಪ್ರಕರಣದಲ್ಲಿ ಬೇಗೂರಿನಲ್ಲಿ ಅಸ್ವಸ್ಥ ಬಾಲಕನ ರಕ್ಷಣೆ ಮಾಡಿದ ಪೊಲೀಸರು ಬಳಿಕ ಪೋಷಕರಿಗೆ ಒಪ್ಪಿಸಿದ್ದಾರೆ.

ಲಿಫ್ಟ್​ನಲ್ಲಿ ಸಿಲುಕಿದ್ದ ವ್ಯಕ್ತಿ, 2 ಶ್ವಾನಗಳನ್ನ ರಕ್ಷಿಸಿದ ಪೊಲೀಸರು: ಸಾರ್ವಜನಿಕರಿಂದ ಮೆಚ್ಚುಗೆ
ಪೊಲೀಸರಿಂದ ವ್ಯಕ್ತಿಯ ರಕ್ಷಣೆImage Credit source: tv9 kannada
ರಾಚಪ್ಪಾಜಿ ನಾಯ್ಕ್
| Edited By: |

Updated on: Apr 03, 2026 | 7:55 PM

Share

ಬೆಂಗಳೂರು, ಏಪ್ರಿಲ್​ 03: ಲಿಫ್ಟ್‌ನಲ್ಲಿ ಸಿಲುಕಿದ್ದ (Lift Rescues) ವ್ಯಕ್ತಿ ಮತ್ತು ಎರಡು ಶ್ವಾನಗಳನ್ನು ಪೊಲೀಸರು ಯಶಸ್ವಿಯಾಗಿ ರಕ್ಷಣೆ ಮಾಡಿರುವಂತಹ ಘಟನೆ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆ ಸಮಯದಲ್ಲಿ ಲಿಫ್ಟ್​ನಲ್ಲಿ ವ್ಯಕ್ತಿ 112ಗೆ ಕರೆ ಮಾಡಿ ಮಾಹಿತಿ ನೀಡಿದ್ದ. ಕೇವಲ 8 ನಿಮಿಷದಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ವ್ಯಕ್ತಿ ಹಾಗೂ ಶ್ವಾನಗಳನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ.

ನಡೆದಿದ್ದೇನು?

ನಗರದ ಆರ್​.ಜಿಎಸ್ ಕಾಲೇಜು ಸಮೀಪದ ಕಟ್ಟಡದಲ್ಲಿ ತಾಂತ್ರಿಕ ದೋಷದಿಂದ ಲಿಫ್ಟ್ ಮಧ್ಯದಲ್ಲೇ ನಿಂತುಹೋಗಿತ್ತು. ಲಿಫ್ಟ್‌ನಲ್ಲಿ ಸಿಲುಕಿದ್ದ ವ್ಯಕ್ತಿ ತಕ್ಷಣವೇ ತುರ್ತು ಸಹಾಯಕ್ಕಾಗಿ 112ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಪೊಲೀಸರ ತ್ವರಿತ ಹಾಗೂ ಸಮರ್ಪಕ ಕಾರ್ಯಾಚರಣೆಯಿಂದ ವ್ಯಕ್ತಿ ಮತ್ತು ಎರಡು ಶ್ವಾನಗಳನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ.

ಅಸ್ವಸ್ಥ ಬಾಲಕನ ರಕ್ಷಣೆ ಮಾಡಿದ ಬೇಗೂರು ಪೊಲೀಸರು: ಪೋಷಕರಿಗೆ ಹಸ್ತಾಂತರ

ಅಸ್ವಸ್ಥ ಸ್ಥಿತಿಯಲ್ಲಿ ಅಸಹಜವಾಗಿ ವರ್ತಿಸುತ್ತಿದ್ದ 12 ವರ್ಷದ ಬಾಲಕನನ್ನು ಬೇಗೂರು ಪೊಲೀಸರು ರಕ್ಷಿಸಿ, ನಂತರ ಆತನ ಪೋಷಕರಿಗೆ ಸುರಕ್ಷಿತವಾಗಿ ಒಪ್ಪಿಸಿದ ಘಟನೆ ನಡೆದಿದೆ. ಸಾಗರ್ ಲೇಔಟ್ ಪ್ರದೇಶದಲ್ಲಿ ಬಾಲಕ ಅಸಹಜವಾಗಿ ವರ್ತಿಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕಾರ್ಯಕ್ರಮದಲ್ಲಿ ಕುಸಿದುಬಿದ್ದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ

ಮಾಹಿತಿ ಪಡೆದ ಬೇಗೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಬಾಲಕನನ್ನು ಸುರಕ್ಷಿತವಾಗಿ ತಮ್ಮ ವಶಕ್ಕೆ ಪಡೆದರು. ನಂತರ ಬಾಲಕನ ಪೋಷಕರನ್ನು ಪತ್ತೆಹಚ್ಚಿ, ಅವರಿಗೆ ಒಪ್ಪಿಸಲಾಗಿದೆ. ಇನ್ನು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಇಬ್ಬರು 112 ಪೊಲೀಸ್ ಸಿಬ್ಬಂದಿಯ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಸಿಲಿಕಾನ್ ಸಿಟಿಯಲ್ಲಿ ನಿಲ್ಲದ ವೀಲ್ಹಿಂಗ್ ಪುಂಡರ ಅಟ್ಟಹಾಸ

ಸಿಲಿಕಾನ್ ಸಿಟಿಯಲ್ಲಿ ವೀಲ್ಹಿಂಗ್ ಪುಂಡರ ಅಟ್ಟಹಾಸ ಮುಂದುವರೆದಿದೆ. ಇಷ್ಟುದಿನ ಖಾಲಿ ರಸ್ತೆ ಮತ್ತು ಹೆದ್ದಾರಿಗಳಲ್ಲಿ ವೀಲ್ಹಿಂಗ್ ಮಾಡುತ್ತಿದ್ದ ಯುವಕರು, ಇದೀಗ ಆಂಬ್ಯುಲೆನ್ಸ್​​ನ್ನೇ ಓವರ್‌ಟೇಕ್ ಮಾಡಿ ಅಪಾಯಕಾರಿ ಸಾಹಸ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಚಿಕ್ಕಬಿದರಕಲ್ಲು ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಬೆಂಗಳೂರಿಗರಿಗೆ ಬ್ಯಾಡ್​​ ನ್ಯೂಸ್​: ಸದ್ಯ ಸಾರ್ವಜನಿಕ ಸೇವೆಗೆ ಲಭ್ಯವಾಗಲ್ಲ ಬಹುನಿರೀಕ್ಷಿತ ಈ ಫ್ಲೈಓವರ್​

ರೋಗಿಯನ್ನು ಕರೆದುಕೊಂಡು ಹೋಗುತ್ತಿದ್ದ ಆಂಬ್ಯುಲೆನ್ಸ್​ನ್ನು ವೇಗವಾಗಿ ವೀಲ್ಹಿಂಗ್ ಮಾಡುತ್ತಾ ಓವರ್‌ಟೇಕ್ ಮಾಡಿದ್ದಾರೆ. ಸ್ವಲ್ಪ ಹೆಚ್ಚು ಕಡಿಮೆ ಆಗಿದ್ದರೆ ಭೀಕರ ಅಪಘಾತ ಸಂಭವಿಸುವ ಸಾಧ್ಯತೆ ಇತ್ತು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೀಲ್ಹಿಂಗ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us