AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವನಗುಡಿ ಈದ್ ಮಿಲಾದ್ ಮೆರವಣಿಗೆಯಲ್ಲಿನ ಗಲಾಟೆಗೆ ಅಸಲಿ ಕಾರಣ ಬಹಿರಂಗ

ನಿನ್ನೆ (ಆಗಸ್ಟ್ 26) ದೇಶದೆಲ್ಲೆಡೆ ಈದ್ ಮೀಲದ್ ಹಬ್ಬದ ಆಚರಣೆ ನಡೆಯುತ್ತಿತ್ತು. ಆದರೆ ಬೆಂಗಳೂರಿನ ಬಸವನಗುಡಿಯಲ್ಲಿ ಮಾತ್ರ ಎರಡು ಗುಂಪುಗಳ ನಡುವೆ ಮಾರಾಮಾರಿ ಆಗಿದೆ. ಈ ಸಂಬಂಧ ಜೈಕಾರ ಹಾಕಿ ಗಲಾಟೆ ಮಾಡಿದವರ ಮೇಲೆ ಕೇಸ್ ಬಿದ್ದಿದ್ದು, ಪೊಲೀಸರು ಕೆಲವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಇನ್ನೊಂದೆಡೆ ಇದು ತೀವ್ರ ಸ್ವರೂಪ ಪಡೆಯುತ್ತಿದ್ದಂತೆಯೇ ಘಟನೆ ಕಾರಣವೇನು ಎನ್ನುವುದನ್ನು ಪೊಲೀಸರೇ ಮಾಧ್ಯಮ ಪ್ರಕಟಣೆ ಮೂಲಕ ಬಹಿರಂಗಪಡಿಸಿದ್ದಾರೆ.

ಬಸವನಗುಡಿ ಈದ್ ಮಿಲಾದ್ ಮೆರವಣಿಗೆಯಲ್ಲಿನ  ಗಲಾಟೆಗೆ ಅಸಲಿ ಕಾರಣ ಬಹಿರಂಗ
Bengaluru Eid Clash
ಪ್ರದೀಪ್​ ಚಿಕ್ಕಾಟಿ
| Edited By: |

Updated on: Aug 27, 2026 | 10:26 PM

Share

ಬೆಂಗಳೂರು, (ಆಗಸ್ಟ್ 27): ನಗರದ ಬಸವನಗುಡಿಯಲ್ಲಿ ಈದ್ ಮಿಲಾದ್ (Bssawanagud Eid milad) ಮೆರವಣಿಗೆ ವೇಳೆ ಘೋಷಣೆ ಕೂಗುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದೆ. ಹಿಂದೂ ಕಾರ್ಯಕರ್ತನ ಮೇಲೆ ಮೇಲೆ ಹಲ್ಲೆಯಾಗಿದ್ದು, ಪ್ರಚೋದನೆ ಹಾಗೂ ಗಲಾಟೆ ಸೃಷ್ಟಿಸಿದ ಆರೋಪದಡಿ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಸೇರಿ ಎರಡೂ ಗುಂಪಿನ ಒಟ್ಟು 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೊಂದೆಡೆ ಮುಸ್ಲಿಂ ಯುವಕರೇ ಮೊದಲು ಗಲಾಟೆ ಮಾಡಿದ್ದಾರೆ ಎನ್ನುವ ಆರೋಪಗಳು ಸಹ ಕೇಳಿಬಂದಿವೆ. ಹೀಗಾಗಿ ಈ ಪ್ರಕರಣದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇದರ ಮಧ್ಯೆ ದಕ್ಷಿಣ ಪೊಲೀಸ್ ವಿಭಾಗ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಗಲಾಟೆ ನಡೆದಿದ್ಯಾಕೆ ಎನ್ನುವುದನ್ನು ಬಿಚ್ಚಿಟ್ಟಿದ್ದಾರೆ.

ಪೊಲೀಸರ ಮಾಧ್ಯಮ ಪ್ರಕಟಣೆಯಲ್ಲೇನಿದೆ?

ಈದ್ ಮಿಲಾದ್ ಮೆರವಣೆಗೆ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು. ಪೊಲೀಸರು ಮೆರವಣಿಗೆಯನ್ನು ಶಾಂತಿಯುತವಾಗಿ ಕರೆತಂದಿರುತ್ತಾರೆ. ಕೆ.ಆರ್. ರಸ್ತೆಯಲ್ಲಿ ಗರಡಿ ಅಪಾರ್ಟ್‌ಮೆಂಟ್ ಮುಂದೆ ಮೆರವಣಿಗೆ ಬಂದಿತ್ತು ಮುಸ್ಲಿಂ ಸಮುದಾಯದವರು ತಮ್ಮ ಘೋಷಣೆ ಕೂಗಿಕೊಂಡು ಸಾಗುತ್ತಿದ್ದರು. ಈ ವೇಳೆ ರಾಷ್ಟ್ರ ರಕ್ಷಣಾ ಪಡೆಯ ಪುನಿತ್ ಕೆರೆಹಳ್ಳಿ ಹಾಗೂ ಸಂಘಟನೆಯ ಇತರರು ಕೇಸರಿ ಧ್ವಜ ಹಿಡಿದು ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ಮುಸ್ಲಿಂರ ಮೆರವಣಿಗೆಯ ಕಡೆ ನೋಡುತ್ತಾ ಪ್ರಚೋದಿಸಿದ್ರು. ಇದರಿಂದ ಮುಸ್ಲಿಂ ಸಮುದಾಯದವರು ಘೋಷಣೆ ಕೂಗದಂತೆ ತಾಕೀತು ಮಾಡಲು ಬಂದಿದ್ರು. ಆಗ ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿಯು ಪುನೀತ್ ಕೆರೆಹಳ್ಳಿರವರನ್ನು ತಡೆದಿದ್ದಾರೆ. ಈ ವೇಳೆ ಮುಸ್ಲಿಂ ಹುಡುಗರು ಮುರುಳಿ ಎಂಬಾತನಿಗೆ ಯಾವುದೋ ಆಯುಧದಿಂದ ಹಲ್ಲೆ ಮಾಡಿದ್ದಾರೆ.

ಇದನ್ನೂ ನೋಡಿ: ಬಸವನಗುಡಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 ಎಫ್​ಐಆರ್: 8 ಮಂದಿ ಪೊಲೀಸ್ ವಶಕ್ಕೆ

ಇದನ್ನು ನೋಡಿದ ಪುನೀತ್ ಕೆರೆಹಳ್ಳಿ ಹಾಗೂ ಸಹಚರರು ಗಾಯಾಳುವನ್ನು ಆಸ್ಪತ್ರೆಗೆ ಕಳುಹಿಸದೇ ರಸ್ತೆಯ ಮಧ್ಯದಲ್ಲಿ ಕುಳಿತು ಘೋಷಣೆಗಳನ್ನು ಕೂಗುತ್ತಾ ಸಾರ್ವಜನಿಕರಿಗೆ ಹಾಗೂ ಮೆರವಣಿಗೆಗೆ ತೊಂದರೆ ಮಾಡಿದ್ದರು. ಪುನೀತ್ ಕೆರೆಹಳ್ಳಿ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಲು ಬಿಡದೇ ಹಠ ಮಾಡಿದ್ದು, ಆಂಬುಲೇನ್ಸ್ ಕರೆಯಿಸಿ ಎಂದು ಹಠ ಮಾಡಿ ಗಾಯಾಳುವನ್ನು ಬಿಡದೇ ತನ್ನ ಹತ್ತಿರ ಮಲಗಿಸಿಕೊಂಡು ರಸ್ತೆ ಮಧ್ಯೆ ಪ್ರತಿಭಟನೆ ಮಾಡಿದ್ದಾರೆ. ಬಳಿಕ ಹಿರಿಯ ಅಧಿಕಾರಿಗಳು ಸಮಾಧಾನ ಮಾಡಿ ಗಾಯಾಳುನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕಳಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಒಟ್ಟು ಮೂರು ಪ್ರಕರಣಗಳು ದಾಖಲಾಗಿವೆ. ಒಂದು ಅಬ್ದುಲ್ ರಜಾಕ್, ಮತ್ತೊಂದು ಪುನೀತ್ ಕೆರೆಹಳ್ಳಿ ಮತ್ತು ಪೊಲೀಸ್ ಸಿಬ್ಬಂದಿ ದೂರಿನನ್ವಯ 3 ಕೇಸ್ ದಾಖಲಿಸಿ ತನಿಖೆ ನಡೆಯುತ್ತಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
40 ಕೋಟಿ ಸಾಲದಿಂದ 19,000 ಕೋಟಿ ಸಾಮ್ರಾಜ್ಯ ಕಟ್ಟಿದ ಸ್ಪೂರ್ತಿದಾಯಕ ಕಥೆ
40 ಕೋಟಿ ಸಾಲದಿಂದ 19,000 ಕೋಟಿ ಸಾಮ್ರಾಜ್ಯ ಕಟ್ಟಿದ ಸ್ಪೂರ್ತಿದಾಯಕ ಕಥೆ
RSS ನೋಂದಣಿ ವಿವಾದ: ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಅಶೋಕ್​​ ಕೌಂಟರ್​​
RSS ನೋಂದಣಿ ವಿವಾದ: ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಅಶೋಕ್​​ ಕೌಂಟರ್​​
ನೇಪಾಳದ ಪ್ರವಾಹದಿಂದ ಪಾರಾದ ಕನ್ನಡಗನ ಜೊತೆ ಸಿಎಂ ವಿಡಿಯೋ ಕಾಲ್, ಹೇಳಿದ್ದೇನು
ನೇಪಾಳದ ಪ್ರವಾಹದಿಂದ ಪಾರಾದ ಕನ್ನಡಗನ ಜೊತೆ ಸಿಎಂ ವಿಡಿಯೋ ಕಾಲ್, ಹೇಳಿದ್ದೇನು
ಈದ್ ಮಿಲಾದ್ ಆಚರಣೆ ವೇಳೆ ಗಲಾಟೆ: ಗೃಹ ಸಚಿವ ಖರ್ಗೆ ಖಡಕ್ ಎಚ್ಚರಿಕೆ
ಈದ್ ಮಿಲಾದ್ ಆಚರಣೆ ವೇಳೆ ಗಲಾಟೆ: ಗೃಹ ಸಚಿವ ಖರ್ಗೆ ಖಡಕ್ ಎಚ್ಚರಿಕೆ
4 ವರ್ಷದೊಳಗೆ ಮನೆ ಕಟ್ಟದಿದ್ದರೆ ಸರ್ಕಾರಿ ಸೈಟ್ ವಾಪಸ್
4 ವರ್ಷದೊಳಗೆ ಮನೆ ಕಟ್ಟದಿದ್ದರೆ ಸರ್ಕಾರಿ ಸೈಟ್ ವಾಪಸ್
ಗರ್ಭಿಣಿ ಮಹಿಳಾ ಕಾನ್ಸ್ಟೇಬಲ್ ಮೇಲೆ ರಾಡ್ ನಿಂದ ಹಲ್ಲೆ: ಆರೋಪಿ ಬಂಧನ
ಗರ್ಭಿಣಿ ಮಹಿಳಾ ಕಾನ್ಸ್ಟೇಬಲ್ ಮೇಲೆ ರಾಡ್ ನಿಂದ ಹಲ್ಲೆ: ಆರೋಪಿ ಬಂಧನ