ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿವಾಸದಲ್ಲಿ ಬಿಗಿ ಭದ್ರತೆ: ಇಂದು ಮಧ್ಯಾಹ್ನ ಸಂಪುಟ ಸಭೆ

ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್​​ ಸಿಡಿ ಬಯಲು ಪ್ರಕರಣಕ್ಕೆ ಸಂಬಂಧಿಸಿದಂತೆ, ಮುಖ್ಯಮಂತ್ರಿ ನಿವಾಸ ಕಾವೇರಿ ಬಳಿ ಪ್ರತಿಭಟನೆ ಮಾಡುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

  • TV9 Web Team
  • Published On - 11:14 AM, 3 Mar 2021
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿವಾಸದಲ್ಲಿ ಬಿಗಿ ಭದ್ರತೆ: ಇಂದು ಮಧ್ಯಾಹ್ನ ಸಂಪುಟ ಸಭೆ
ಬಿ.ಎಸ್​.ಯಡಿಯೂರಪ್ಪ (ಸಂಗ್ರಹ ಚಿತ್ರ)

ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್​​ ಸಿ.ಡಿ. ಬಯಲು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನಿವಾಸ ಕಾವೇರಿ ಬಳಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಕಾವೇರಿ ನಿವಾಸದ ಬಳಿ ಪ್ರತಿಭಟನೆ ಮಾಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಪೊಲೀಸ್ ಸರ್ಪಗಾವಲು ಹಾಕಿದ್ದು, ಬಿಎಸ್​ವೈ ನಿವಾಸದ ಬಳಿ ಕಟ್ಟೆಚ್ಚರ ವಹಿಸಲಾಗಿದೆ. ಇನ್ನು ಪೂರ್ವಾನುಮತಿ ಇಲ್ಲದೆ ಯಾರನ್ನೂ ಮನೆಯ ಒಳಗೆ ಬಿಡದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಸಂಪುಟ ಸಭೆ:
ಇಂದು ಮಧ್ಯಾಹ್ನ 2 ಗಂಟೆಗೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಇಂದಿನ ಸಂಪುಟ ಸಭೆಯಲ್ಲಿ 19 ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಜಲಸಂಪನ್ಮೂಲ ಇಲಾಖೆ 2 ಯೋಜನೆಗಳ ಬಗ್ಗೆ, ಕಡೂರು, ಹೊಸದುರ್ಗ ತಾಲೂಕುಗಳಲ್ಲಿನ ಎರಡು ಯೋಜನೆ ಬಗ್ಗೆಯೂ ಚರ್ಚೆ ನಡೆಸಲಾಗುತ್ತದೆ.

ಇನ್ನು ಸಚಿವ ರಮೇಶ್ ಜಾರಕಿಹೊಳಿ‌ ಹಾಜರಾತಿ ವಿಚಾರವಾಗಿ ಸಂಪುಟ ಸಭೆಯಲ್ಲಿ ಕುತೂಹಲ ಕೆರಳಿಸಿದ್ದು, ರಮೇಶ್ ಜಾರಕಿಹೊಳಿ‌ ದೆಹಲಿಗೆ ತೆರಳಿದ್ದಾರಾ ಎನ್ನುವ ಕೌತುಕ ಎಲ್ಲರಲ್ಲೂ ಇದೆ. ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್​​ ಸಿಡಿ ಬಯಲು ಪ್ರಕರಣಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಯುತ್ತಿದ್ದು, ಜಾರಕಿಹೊಳಿ‌ ಸಿಡಿ ಮತ್ತು ರಾಜೀನಾಮೆ ವಿಚಾರ, ರಾಜ್ಯ ಸರ್ಕಾರಕ್ಕೆ ಮುಜುಗರ, ದಿನೇಶ್ ಕಲ್ಲಹಳ್ಳಿ ದೂರು ಬಗ್ಗೆಯೂ ಕೂಡ ಇಂದಿನ ಸಭೆಯಲ್ಲಿ ಪ್ರಸ್ತಾಪವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಹೊಸ ಡ್ರೆಸ್​ ಹಾಕಿ ಖುಷಿಯಿಂದ ಶಾಲೆಗೆ ಹೋದ ಬಾಲಕಿಯನ್ನು ಬೈದು ಮನೆಗೆ ಕಳಿಸಿದ ಶಿಕ್ಷಕಿ; ನೈತಿಕ ಪೊಲೀಸ್​ಗಿರಿಯ ವಿರುದ್ಧ ನೆಟ್ಟಿಗರು ಗರಂ