AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರವೇ ರ‍್ಯಾಲಿ: ಏರ್​ಪೋರ್ಟ್​ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗದಂತೆ ಪೊಲೀಸರಿಂದ ಹೊಸ ಪ್ಲ್ಯಾನ್

ಅಂಗಡಿ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸುವಂತೆ ನಾರಾಯಣಗೌಡ ಬಣದ ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರಿಲ್ಲಿಂದು ಬೃಹತ್ ರ್ಯಾಲಿ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಮುಂಜಾತ್ರಾ ಕ್ರಮವಾಗಿ ಏರ್​ಪೋರ್ಟ್​ ರಸ್ತೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್​ ಕೈಗೊಳ್ಳಾಗಿದೆ. ಅಲ್ಲದೇ ಟ್ರಾಫಿಕ್ ಜಾಮ್ ಆಗದಂತೆ ಹೊಸ ಪ್ಲ್ಯಾನ್ ಮಾಡಿದ್ದಾರೆ.

ಕರವೇ ರ‍್ಯಾಲಿ: ಏರ್​ಪೋರ್ಟ್​ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗದಂತೆ ಪೊಲೀಸರಿಂದ ಹೊಸ ಪ್ಲ್ಯಾನ್
ಪೊಲೀಸ್ ಭದ್ರತೆ
TV9 Web
| Edited By: |

Updated on:Dec 27, 2023 | 12:25 PM

Share

ಬೆಂಗಳೂರು, (ಡಿಸೆಂಬರ್ 27): ಅಂಗಡಿ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ (Kannada) ಬಳಸುವಂತೆ ನಾರಾಯಣಗೌಡ ಬಣದ ಕರ್ನಾಟಕ ರಕ್ಷಣಾ ವೇದಿಕೆ( karnataka rakshana- Vedike) ಬೆಂಗಳೂರಿಲ್ಲಿಂದು ಬೃಹತ್ ರ‍್ಯಾಲಿ ಹಮ್ಮಿಕೊಂಡಿದೆ. ಬೆಂಗಳೂರು (Bengaluru) ವಿಮಾನ ನಿಲ್ದಾಣದ ಸಾದಹಳ್ಳಿ ಗೇಟ್​​ ಬಳಿಯ ಟೋಲ್​ ಪ್ಲಾಜಾದಿಂದ ಆರಂಭವಾಗುವ ರ‍್ಯಾಲಿ ಕಬ್ಬನ್ ಪಾರ್ಕ್ ವರೆಗೆ ಸಾಗಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್​ ಕೈಗೊಂಡಿದ್ದಾರೆ. ಅಲ್ಲದೇ ಟ್ರಾಫಿಕ್​ ಜಾಮ್ ಆಗದಂತೆ ಪೊಲೀಸರು ಏರ್​ಪೋರ್ಟ್​ ರಸ್ತೆಯ ಡಿವೈಡರ್ ಬಳಿ ಸೈಡ್ ವಾಲ್​ಗಳನ್ನು ಅವಳವಡಿಸಿದ್ದಾರೆ. ಪ್ರತಿಭಟನೆ ವೇಳೆ ಜನ ನೋಡುತ್ತಾ ಟ್ರಾಫಿಕ್ ಜಾಮ್ ಮಾಡುತ್ತಾರೆ ಎಂದು ಪೊಲೀಸರು ಸುಮಾರು 500 ಮೀಟರ್ ಗೂ ಅಧಿಕ ದೂರ ಸೈಡ್ ವಾಲ್ ಅಳವಡಿಕೆ ಮಾಡಿದ್ದಾರೆ.

500 ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಟೋಲ್ ಬಳಿ ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮೀಪ್ರಸಾದ್ ನೇತೃತ್ವದಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, 1 ಎಸಿಪಿ, 6 ಇನ್ಸ್​ಪೆಕ್ಟರ್, 12 ಸಬ್ ಇನ್ಸ್​ಪೆಕ್ಟರ್ ಸೇರಿದಂತೆ 500 ಕ್ಕೂ ಹೆಚ್ಚು ಪೋಲಿಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ರ‍್ಯಾಲಿಗೆ ಅವಕಾಶವಿಲ್ಲದ ಹಿನ್ನೆಲೆಯಲ್ಲಿ ಪ್ರತಿಭಟನೆ ತೀವ್ರಗೊಳಿಸಿದರೆ ಕಾರ್ಯಕರ್ತರನ್ನ ವಶಕ್ಕೆ ಪಡೆಯುವ ಸಾಧ್ಯತೆ ಇದ್ದು, ಮುಂಜಾಗ್ರತಾ ಕ್ರಮವಾಗಿ 10 ಬಸ್ ವ್ಯವಸ್ಥೆ ಮಾಡಿಕೊಂಡಿಕೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿಂದು ಕರವೇ ಮೆರವಣಿಗೆ, ಕನ್ನಡ ಫಲಕ ಹಾಕದಿದ್ದರೆ ಹುಷಾರ್!

ಡಿಸಿಪಿ ಲಕ್ಷ್ಮೀ ಪ್ರಸಾದ್ ಹೇಳಿದ್ದೇನು?

ಇನ್ನು ಈ ಬಗ್ಗೆ ಡಿಸಿಪಿ ಲಕ್ಷ್ಮೀ ಪ್ರಸಾದ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಕರವೇ ಕಾರ್ಯಕರ್ತರು ಬೃಹತ್ ಜಾಥ ಹಿನ್ನಲೆಯಲ್ಲಿ ಅಹಿತಕರ ಘಟನೆಯಾಗದಂತೆ ಎಲ್ಲಾ ಭದ್ರತೆ ಕೈಗೊಂಡಿದ್ದೇವೆ. ಏರ್ಪೋಟ್ ರಸ್ತೆಯಲ್ಲಿ ಪ್ರಯಾಣಿಕರಿಗೆ ತೊಂದರೆಯಾಗದಂತೆ ನಾವು ಬಂದೋಬಸ್ತ್ ಮಾಡಿಕೊಂಡಿದ್ದೇವೆ. ರ್ಯಾಲಿ ಮಾಡಲಿಕ್ಕೆ ಅವಕಾಶವಿಲ್ಲ. 5 ಕೆಎಸ್.ಆರ್ ಪಿ ಸಿಬ್ಬಂದಿ ಸೇರಿದಂತೆ 500 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನ ನಾವು ಸ್ಥಳದಲ್ಲಿ ನಿಯೋಜನೆ ಮಾಡಿಕೊಂಡಿದ್ದೆವೆ ಎಂದು ಮಾಹಿತಿ ನೀಡಿದರು.

ಭದ್ರತಾ ವ್ಯವಸ್ಥೆ ಪರಿಶೀಲಿಸಿದ ಕಮಿಷನರ್ ದಯಾನಂದ್

ಇನ್ನು ಏರ್ಪೋಟ್ ಟೋಲ್ ಬಳಿಗೆ ಕಮಿಷನರ್ ದಯಾನಂದ್ ಭೇಟಿ ನೀಡಿದ್ದು, ಪೊಲೀಸರ ಭದ್ರತೆ ಹಾಗೂ ಮುಂಜಾಗ್ರತಾ ಕ್ರಮ ಪರಿಶೀಲಿಸಿದರು. ಇನ್ನು ಇದೇ ವೇಳೆ ಭದ್ರತೆ ಬಗ್ಗೆ ಡಿಸಿಪಿ ಲಕ್ಷ್ನೀ ಪ್ರಸಾದ್ ಅವರಿಂದ ಮಾಹಿತಿ ಪಡೆದುಕೊಂಡರು. ಇದಕ್ಕೂ ಮೊದಲು ಮಾಲ್ ಆಫ್ ಏಷಿಯಾ ಬಳಿ ತೆರಳಿ ಭದ್ರತೆ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:43 am, Wed, 27 December 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ