ಚುನಾವಣೆ ಹೊಸ್ತಿಲಲ್ಲಿ ಫುಲ್ ಅಲರ್ಟ್ ಆದ ಪೊಲೀಸರು; ಮತದಾರರಿಗೆ ಹಂಚಲು ಸಂಗ್ರಹಿಸಿದ್ದ ಅಕ್ಕಿ ಚೀಲ, ಮದ್ಯ ವಶ

ಚುನಾವಣೆ ಹಿನ್ನೆಲೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಮಾಸ್ತಿ ಗ್ರಾಮದ MSIL ಶಾಪ್​​ನಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹ ಮಾಡಲಾಗಿದ್ದು ಅಬಕಾರಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 22.5 ಲಕ್ಷ ಮೌಲ್ಯದ ಮದ್ಯ ವಶಕ್ಕೆ ಪಡೆದಿದ್ದಾರೆ.

Follow us
TV9 Web
| Updated By: ಆಯೇಷಾ ಬಾನು

Updated on:Mar 19, 2023 | 9:46 AM

ಬೆಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಮತದಾರರ ಮನ ಗೆಲ್ಲಲು ಅವರಿಗೆ ಅನೇಕ ರೀತಿಯ ಆಮಿಷಗಳನ್ನು ಒಡ್ಡಲಾಗುತ್ತಿದೆ. ಹೀಗಾಗಿ ಪೊಲೀಸರು ಫುಲ್ ಅಲರ್ಟ್ ಆಗಿದ್ದು ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿಟ್ಟ ವಸ್ತುಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ರೌಡಿಶೀಟರ್ ಕಚೇರಿಯಲ್ಲಿ ಸಂಗ್ರಹಿಸಿಟ್ಟ ಅಕ್ಕಿ ಚೀಲಗಳನ್ನು ವಶಕ್ಕೆ ಪಡೆಯಲಾಗಿದೆ. ಹಾಘೂ ಕೋಲಾರದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ.

ಅಕ್ಕಿ ವಶಕ್ಕೆ ಪಡೆದ ಪೊಲೀಸರು

ಮತದಾರರಿಗೆ ಹಂಚಲು ಸಂಗ್ರಹಿಸಲಾದ ಅಕ್ಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತದಾರರಿಗೆ ಹಂಚಲು ಅಕ್ಕಿ ಚೀಲ ಸಂಗ್ರಹದ ಶಂಕೆ ಹಿನ್ನೆಲೆ ಶಿವಾಜಿನಗರದ ನೋವಾ ರಸ್ತೆಯಲ್ಲಿರುವ ರೌಡಿಶೀಟರ್ ಇಸ್ತಿಯಾಖ್ ಕಚೇರಿ ಮೇಲೆ ಪೊಲೀಸರು ದಾಳಿ ನಡೆಸಿದ್ದು ಕಚೇರಿಯಲ್ಲಿದ್ದ ಅಕ್ಕಿ ಚೀಲಗಳನ್ನು ವಶಕ್ಕೆ ಪಡೆದಿದ್ದಾರೆ. ಇಸ್ತಿಯಾಖ್, ಶಿವಾಜಿನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್.

ಅಕ್ರಮವಾಗಿ ಸಂಗ್ರಹಿಸಿದ್ದ 22.5 ಲಕ್ಷ ಮೌಲ್ಯದ ಮದ್ಯ ವಶಕ್ಕೆ

ಚುನಾವಣೆ ಹಿನ್ನೆಲೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಮಾಸ್ತಿ ಗ್ರಾಮದ MSIL ಶಾಪ್​​ನಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹ ಮಾಡಲಾಗಿದ್ದು ಅಬಕಾರಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 22.5 ಲಕ್ಷ ಮೌಲ್ಯದ ಮದ್ಯ ವಶಕ್ಕೆ ಪಡೆದಿದ್ದಾರೆ. ದಾಖಲೆ ಪುಸ್ತಕದಲ್ಲಿ ಇದ್ದ ಲೆಕ್ಕಕ್ಕಿಂತ ಹೆಚ್ಚು ಮದ್ಯ ಸಂಗ್ರಹ ಹಿನ್ನೆಲೆ ಅಕ್ರಮವಾಗಿ ಸಂಗ್ರಹಿಸಿದ್ದ ಮದ್ಯ ವಶಕ್ಕೆ ಪಡೆಯಲಾಗಿದೆ. ಮತ್ತು ಅಬಕಾರಿ ಪೊಲೀಸರು ವೇಣು ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: AICC ಹೆಸರಲ್ಲಿ ಕರೆ ಮಾಡಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ವಂಚನೆ ಯತ್ನ; ಎಚ್ಚರವಹಿಸುಂತೆ ಸೂಚನೆ

ರಾಮನಗರ ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಾಳಿ

ಇನ್ನು ಮತ್ತೊಂದೆಡೆ ರಾಮನಗರ ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಅಕ್ರಮವಾಗಿ ತಂಬಾಕು ಸಂಗ್ರಹ, ಮೊಬೈಲ್ ಬಳಕೆ ಆರೋಪ​​​​ ಹಿನ್ನೆಲೆ ರಾಮನಗರ ಡಿವೈಎಸ್​​ಪಿ ದಿನಕರ್ ಶೆಟ್ಟಿ ನೇತೃತ್ವದಲ್ಲಿ ಕಾರಾಗೃಹದ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗಿದೆ. 50 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಜೈಲಿನಲ್ಲಿ ಪರಿಶೀಲನೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಗಳ ತಂಡ

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:46 am, Sun, 19 March 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ