Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಠಾಣೆಗಳು ವ್ಯಾಪಾರ ಕೇಂದ್ರಗಳಾಗಿ ಮಾರ್ಪಟ್ಟಿವೆ: ಲೋಕಾಯುಕ್ತ ಕೋರ್ಟ್​

ಭ್ರಷ್ಟಾಚಾರದಿಂದಾಗಿ ಪೊಲೀಸ್ ಠಾಣೆಗಳು ವ್ಯಾಪಾರ ಕೇಂದ್ರಗಳಾಗಿ ಮಾರ್ಪಟ್ಟಿವೆ. ಇದನ್ನು ನಿಲ್ಲಿಸದಿದ್ದರೆ, ಇದು ಖಂಡಿತವಾಗಿಯೂ ಸವಾಲಾಗಿ ಪರಿಣಮಿಸುತ್ತದೆ ಮತ್ತು ಸಮಾಜಕ್ಕೆ ತಪ್ಪು ಸಂದೇಶವನ್ನು ರವಾನಿಸುತ್ತದೆ ಎಂದು ಲೋಕಾಯುಕ್ತ ನ್ಯಾಯಾಲಯ ಹೇಳಿದೆ.

ಪೊಲೀಸ್ ಠಾಣೆಗಳು ವ್ಯಾಪಾರ ಕೇಂದ್ರಗಳಾಗಿ ಮಾರ್ಪಟ್ಟಿವೆ: ಲೋಕಾಯುಕ್ತ ಕೋರ್ಟ್​
ಲೋಕಾಯುಕ್ತ
Follow us
ವಿವೇಕ ಬಿರಾದಾರ
|

Updated on:Mar 26, 2024 | 9:31 AM

ಬೆಂಗಳೂರು, ಮಾರ್ಚ್​ 26: ಪೊಲೀಸ್​ ಠಾಣೆಗಳಲ್ಲಿನ (Police Station) ಹೀನಾಯ ಪರಿಸ್ಥಿತಿಯು ಸಾಮಾನ್ಯ ಜನರಿಗೆ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುವಂತೆ ಮಾಡಿದೆ. ಪೊಲೀಸರು ವಿನಮ್ರ, ಪ್ರಾಮಾಣಿಕ, ಸೇವಾ ಮನೋಭಾವದವರಾಗಿ ಅಮಾಯಕರನ್ನು ರಕ್ಷಿಸಬೇಕು. ಆದರೆ ದುರದೃಷ್ಟವಶಾತ್, ಭ್ರಷ್ಟಾಚಾರದಿಂದಾಗಿ ಪೊಲೀಸ್ ಠಾಣೆಗಳು ವ್ಯಾಪಾರ ಕೇಂದ್ರಗಳಾಗಿ ಮಾರ್ಪಟ್ಟಿವೆ. ಇದನ್ನು ನಿಲ್ಲಿಸದಿದ್ದರೆ, ಇದು ಖಂಡಿತವಾಗಿಯೂ ಸವಾಲಾಗಿ ಪರಿಣಮಿಸುತ್ತದೆ ಮತ್ತು ಸಮಾಜಕ್ಕೆ ತಪ್ಪು ಸಂದೇಶವನ್ನು ರವಾನಿಸುತ್ತದೆ. ಅಲ್ಲಿ ಧ್ವನಿಯಿಲ್ಲದ, ಅಸಹಾಯಕ ಮತ್ತು ಬಡ ಪೊಲೀಸ್ ಸಿಬ್ಬಂದಿ ಅಧಿಕಾರಿಗಳಿಗೆ ಬಲಿಪಶುಗಳಾಗುವ ಸಾಧ್ಯತೆಯಿದೆ ಎಂದು ಲೋಕಾಯುಕ್ತ ನ್ಯಾಯಾಲಯ (Lokayukta Court) ಹೇಳಿದೆ.

ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಪಡೆಯುವವರೆಗೆ ಆರೋಪಿತ ದಂಪತಿಯನ್ನು ಬಂಧಿಸದಿರಲು 50,000 ರೂ. ಗಳನ್ನು ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರಿಂದ ಬಂಧಿಸಲ್ಪಟ್ಟ ಕೆಆರ್​ ಪುರಂ ಪೊಲೀಸ್​ ಇನ್ಸಪೆಕ್ಟರ್​​ ವಜ್ರಮುನಿ ಕೆ ಅವರ ಜಾಮೀನು ಅರ್ಜಿ ವಿಚಾರಣೆ ವೇಳೆ ಲೋಕಾಯುಕ್ತ ನ್ಯಾಯಾಲಯ ಈ ಅಭಿಪ್ರಾಯಪಟ್ಟಿದೆ.

ಆರೋಪಿಗಳಿಗೆ ಜಾಮೀನು ನೀಡಿದರೆ ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಮತ್ತು ತನಿಖೆಗೆ ಅಡ್ಡಿಯಾಗಬಹುದು. ಅಲ್ಲದೆ ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸುವವರೆಗೆ ಮತ್ತು ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಅಂತ ತಿಳಿಯಲು ಇನ್ಸ್‌ಪೆಕ್ಟರ್‌ನ ಕಸ್ಟಡಿ ವಿಚಾರಣೆ ಅಗತ್ಯವಾಗಿದೆ ಎಂದು ನ್ಯಾಯಾಧೀಶ ಕೆ.ಎಂ.ರಾಧಾಕೃಷ್ಣ ಅವರು ವಜ್ರಮುನಿ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು.

ಲಂಚ ಪ್ರಕರಣದಲ್ಲಿ ಬಂಧಿತರಾಗಿರುವ ಕೆಆರ್ ಪುರಂ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ರಮ್ಯಾ ಎನ್ ಅವರು ಗರ್ಭಿಣಿ ಮತ್ತು ಕೆಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಇದನ್ನೂ ಓದಿ: ಮೂಡಾ ಕಮಿಷನರ್ ಲೋಕಾಯುಕ್ತ ಬಲೆಗೆ ವಿಚಾರ: ಮಾಜಿ ಅಧ್ಯಕ್ಷ ರವಿಶಂಕರ್ ಮಿಜಾರ್ ಹೇಳಿದ್ದಿಷ್ಟು

ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೆಆರ್ ಪುರಂ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ರಮ್ಯಾ ಎನ್​ 12 ರಂದು ಆರೋಪಿತ ದಂಪತಿಯನ್ನು ವಿಚಾರಣೆಗೆ ಒಳಪಡಿಸಿದ್ದರು. ಆರೋಪಿಗಳ ಪರ ವಕೀಲರು ಠಾಣೆಗೆ ಭೇಟಿ ನೀಡಿದಾಗ, ಸಬ್ ಇನ್ಸ್ ಪೆಕ್ಟರ್ ರಮ್ಯಾ ಎನ್ “ನಿರೀಕ್ಷಣಾ ಜಾಮೀನು ಪಡೆಯುವವರೆಗೆ ಆರೋಪಿಗಳನ್ನು ಬಂಧಿಸದಿರಲು 5 ಲಕ್ಷ ರೂ. ಲಂಚ ಕೇಳಿದ್ದರು”. ಮಾತಕತೆ ಬಳಿಕ ರಮ್ಯಾ ಎನ್​ ಎರಡು ಲಕ್ಷ ರೂ.ಗೆ ಒಪ್ಪಿಕೊಂಡರು.

ಈ ಎರಡು ಲಕ್ಷ ರೂ. ನಲ್ಲಿ ರಮ್ಯಾ ಎನ್​​ಕೆ 50 ಸಾವಿರ ರೂ. ಲಂಚ ಪಡೆದಿದ್ದು, ಉಳಿದ ಹಣ ಪೊಲೀಸ್​ ಇನ್ಸಪೆಕ್ಟರ್​​ ವಜ್ರಮುನಿ ಕೆ ಅವರಿಗೆ ಕೊಡಬೇಕಿತ್ತು. ರಮ್ಯ ಎನ್​ ಮತ್ತು ವಜ್ರಮುನಿ ಕೆ. ಆರೋಪಿಗಳಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ, ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:41 am, Tue, 26 March 24

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ