ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ; ಭಕ್ತವತ್ಸಲ ಸಮಿತಿಯ ಮೂರು ಶಿಫಾರಸ್ಸಿಗೆ ಸಂಪುಟ ಅಸ್ತು

ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಮಾತನಾಡಿದ ಹೆಚ್​ಕೆ ಪಾಟೀಲ್​ ‘ ಸುಪ್ರಿಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಸಂಸ್ಥೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ರಾಜಕೀಯ ಪ್ರಾತಿನಿಧ್ಯಕ್ಕೆ ನ್ಯಾಯಮೂರ್ತಿ ಭಕ್ತವತ್ಸಲ ಸಮಿತಿ ರಚಿಸಲಾಗಿತ್ತು. ಈ ಸಮಿತಿಯ 5 ಶಿಫಾರಸ್ಸುಗಳ ಪೈಕಿ ಮೂರು ಶಿಫಾರಸ್ಸಿಗೆ ಸಂಪುಟ ಒಪ್ಪಿದೆ ಎಂದರು.

ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ; ಭಕ್ತವತ್ಸಲ ಸಮಿತಿಯ ಮೂರು ಶಿಫಾರಸ್ಸಿಗೆ ಸಂಪುಟ ಅಸ್ತು
ಹೆಚ್​ಕೆ ಪಾಟೀಲ್​
Follow us
ಪ್ರಸನ್ನ ಗಾಂವ್ಕರ್​
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 05, 2023 | 7:11 PM

ಬೆಂಗಳೂರು, ಅ.05: ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹಿಂದುಳಿದ ವರ್ಗಗಳಿಗೆ (Backward Class) ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಸಚಿವ ಹೆಚ್‌.ಕೆ ಪಾಟೀಲ್ (HK Patil) ಹೇಳಿದರು. ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಮಾತನಾಡಿದ ಅವರು ‘ ಸುಪ್ರಿಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಸಂಸ್ಥೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ರಾಜಕೀಯ ಪ್ರಾತಿನಿಧ್ಯಕ್ಕೆ ನ್ಯಾಯಮೂರ್ತಿ ಭಕ್ತವತ್ಸಲ ಸಮಿತಿ ರಚಿಸಲಾಗಿತ್ತು. ಈ ಸಮಿತಿಯ 5 ಶಿಫಾರಸ್ಸುಗಳ ಪೈಕಿ ಮೂರು ಶಿಫಾರಸ್ಸಿಗೆ ಸಂಪುಟ ಒಪ್ಪಿದೆ ಎಂದರು.

‘ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಚುನಾವಣೆ ನಿರ್ವಹಣ ಆಡಳಿತ ಸುಧಾರಣಾ ಇಲಾಖಾ ವ್ಯಾಪ್ತಿಗೆ ತರುವ ಶಿಫಾರಸ್ಸನ್ನು ಇದೀಗ ಕ್ಯಾಬಿನೆಟ್ ಒಪ್ಪಿದ್ದು, ಈ ಹಿಂದೆ ಪಂಚಾಯತ್ ರಾಜ್ ಇಲಾಖೆ ಜೊತೆಗೆ ಚುನಾವಣಾ ಆಯೋಗ ಸಮನ್ವಯ ಸಾಧಿಸುತ್ತಿತ್ತು. ಇದೀಗ ಆಡಳಿತ ಸುಧಾರಣಾ ಇಲಾಖೆ ಅಡಿಯಲ್ಲಿ ನಿರ್ವಹಣೆ ಮಾಡಲಾಗುವುದು. ರಾಜ್ಯ ಮುಖ್ಯ ಚುನಾವಣಾ ಆಯೋಗ ಕೂಡ ಇನ್ನುಮುಂದೆ ಆಡಳಿತ ಸುಧಾರಣಾ ಇಲಾಖೆ ಜೊತೆಗೆ ಚರ್ಚೆ ಮಾಡಬೇಕು ಎಂದರು.

ಇದನ್ನೂ ಓದಿ:ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ, ನಿರ್ಧಾರಗಳು ಏನೇನು?

ಬ್ರೇನ್ ಹೆಲ್ತ್ ಇನಿಶಿಯೇಟಿವ್ ಪ್ರೊಗ್ರಾಂಗೆ ಆಡಳಿತಾತ್ಮಕ ಅನುಮೋದನೆ

ಹಬ್ ಮತ್ತು ಸ್ಪೋಕ್ಸ್ ಮಾದರಿಯಲ್ಲಿ ಬ್ರೇನ್ ಹೆಲ್ತ್ ಇನಿಶಿಯೇಟಿವ್ ಪ್ರೊಗ್ರಾಂಗೆ 25 ಕೋಟಿ ವೆಚ್ಚದಲ್ಲಿ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರಲ್ಲಿ ಸ್ಥಾಪನೆ ಮಾಡಲು ನಿರ್ಧಾರ ಮಾಡಲಾಗಿದೆ. ಬ್ರೇನ್ ಹೆಲ್ತ್ ಇನಿಶಿಯೇಟಿವ್ ಅಡಿಯಲ್ಲಿ ಮೆದುಳಿನ ಆರೋಗ್ಯ, ಆರೈಕೆ, ತಲೆನೋವು ಹಾಗೂ ಒತ್ತಡ ನಿರ್ವಹಣೆ ಸೇರಿ ಹಲವು ಕಾರ್ಯಕ್ರಮಗಳಿಗೆ  ಬ್ರೇನ್ ಹೆಲ್ತ್ ಇನಿಶಿಯೇಟಿವ್ ಅನುವು ಮಾಡಲಿದೆ ಎಂದರು.

ಅನಿಮಿಯಾ ರಕ್ತಹೀನತೆ ಮುಕ್ತ ಪೌಷ್ಟಿಕ ಕರ್ನಾಟಕ ಯೋಜನೆಗೆ 185 ಕೋಟಿ

ಹೌದು, ಅನಿಮಿಯಾ ರಕ್ತಹೀನತೆ ಮುಕ್ತ ಪೌಷ್ಟಿಕ ಕರ್ನಾಟಕ ಯೋಜನೆಗೆ 185 ಕೋಟಿ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಐದು ವರ್ಷದ ಒಳಗಿನ ಮಕ್ಕಳು, ಗರ್ಭಿಣಿಯರಲ್ಲದ ಮಹಿಳೆಯರು ಸೇರಿದಂತೆ 15 ವರ್ಷ ಮೇಲ್ಪಟ್ಟ ಮಹಿಳೆಯರು ಇದರ ಸದುಪಯೋಗವನ್ನು ಪಡೆಯಬಹುದು. ಸಮೀಕ್ಷೆ ಆಧರಿಸಿ ಯೋಜನೆಯಡಿ ತರುವ ನಿರ್ಧಾರ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ