ಹಿಜಾಬ್ ವಿವಾದಕ್ಕೆ ರಾಜಕಾರಣವೇ ಮುಖ್ಯ ಕಾರಣ ಎಂದ ಕಾಂಗ್ರೆಸ್​ನ ಸಲೀಂ ಅಹ್ಮದ್, ಬಿಜೆಪಿ ಮಾಧುಸ್ವಾಮಿ

Hijab Controversy: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಬಳಕೆಯ ಅಗತ್ಯವೇನಿದೆ ಎಂದು ಯುವ ಕಾಂಗ್ರೆಸ್ ನಾಯಕಿ ಸುರಯ್ಯಾ ಅಂಜುಮ್ ಪ್ರಶ್ನಿಸಿದರು.

ಹಿಜಾಬ್ ವಿವಾದಕ್ಕೆ ರಾಜಕಾರಣವೇ ಮುಖ್ಯ ಕಾರಣ ಎಂದ ಕಾಂಗ್ರೆಸ್​ನ ಸಲೀಂ ಅಹ್ಮದ್, ಬಿಜೆಪಿ ಮಾಧುಸ್ವಾಮಿ
ಕಾಂಗ್ರೆಸ್ ನಾಯಕ ಸಲೀಂ ಅಹ್ಮದ್ ಮತ್ತು ಸಚಿವ ಜೆ.ಸಿ.ಮಾಧುಸ್ವಾಮಿ
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Feb 08, 2022 | 8:00 PM

ಬೆಂಗಳೂರು: ಕರ್ನಾಟಕದ ಹಲವು ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಕುರಿತು ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ (Salim Ahmed) ಪ್ರತಿಕ್ರಿಯಿಸಿದ್ದಾರೆ. ಇಸ್ಲಾಂ ಅನುಯಾಯಿಗಳಲ್ಲಿ ಬುರ್ಖಾ, ನಕಾಬ್, ಹಿಜಾಬ್ ಎಂಬ ಮೂರು ಪದ್ಧತಿಗಳು ನೂರಾರು ವರ್ಷಗಳಿಂದ ಇವೆ. ಇದರಲ್ಲಿ ಸಂಘರ್ಷದ ಪ್ರಶ್ನೆಯೇ ಇಲ್ಲ. ಆದರೆ ಇದೀಗ ಹಿಜಾಬ್-ಕೇಸರಿ ಶಾಲು ಸಂಘರ್ಷ ಏಕಾಏಕಿ ಉದ್ಭವವಾಗಿದೆ. ಇದರ ಬಗ್ಗೆ ವಿಸ್ತೃತ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಈ ಘಟನೆಯ ಹಿಂದೆ ಕೆಲವು ಕಾಣದ ಕೈಗಳು ಅಡಗಿವೆ. ಸರಿಯಾದ ಸಮಯದಲ್ಲಿ ಸರ್ಕಾರ ಕ್ರಮ ಜರುಗಿಸಿಲ್ಲ. ಹೀಗಾಗಿ ಇಂಥ ಸಮಸ್ಯೆಗಳು ಉದ್ಭವಿಸಿವೆ. ವಿದ್ಯಾರ್ಥಿಗಳು ಶಾಂತಿ ಕಾಪಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆ ಚರ್ಚೆ ನಡೆಸಿದ ಬಳಿಕ ಪ್ರತಿಕ್ರಿಯಿಸಿದ ಅವರು, ಇಂದು ಶಿವಮೊಗ್ಗದಲ್ಲಿ ನಡೆದ ಘಟನೆ ಇಡೀ ದೇಶ ತಲೆ ತಗ್ಗಿಸುವಂಥದ್ದು. ರಾಷ್ಟ್ರಧ್ವಜವನ್ನು ಕೆಳಗಿಳಿಸಿ ಕೇಸರಿ ಧ್ವಜ ಹಾರಿಸಿದ್ದಾರೆ. ಈ ಬೆಳವಣಿಗೆಯು ಬಹಳ ದುಃಖ ತರಿಸಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಒಂದು ವಾರ ಕಾಲೇಜುಗಳಲ್ಲಿ ಭೌತಿಕ ತರಗತಿಗಳನ್ನು ರದ್ದುಪಡಿಸಿ, ಆನ್​ಲೈನ್ ತರಗತಿಗಳನ್ನು ನಡೆಸಲಿ. ರಾಜ್ಯದಲ್ಲಿ ಇದೀಗ ಉದ್ಭವಿಸಿರುವ ವಿವಾದದ ಹಿಂದೆ ರಾಜಕೀಯ ಷಡ್ಯಂತ್ರವಿದೆ. ಹಿಜಾಬ್-ಕೇಸರಿ ಶಾಲು ವಿವಾದ ನಿರ್ವಹಿಸುವಲ್ಲಿ ರಾಜ್ಯ ಸರ್ಕಾರವು ಸಂಪೂರ್ಣ ವಿಫಲವಾಗಿದೆ. ಶಿಕ್ಷಣಕ್ಕೆ ಒತ್ತು ನೀಡಬೇಕಾದ್ದು ನಮ್ಮ ಕರ್ತವ್ಯ. ಶಿವಮೊಗ್ಗ ಕಾಲೇಜಿನಲ್ಲಿ ರಾಷ್ಟ್ರಧ್ವಜ ಇಳಿಸಿದ್ದು ದುರ್ದೈವ. ಇದರ ಬಗ್ಗೆ ಸರ್ಕಾರ ಉತ್ತರ ಕೊಡಬೇಕು ಎಂದು ಒತ್ತಾಯಿಸಿದರು.

ಈ ಪ್ರಕರಣದಿಂದಾಗಿ ದೇಶದಲ್ಲಿ ರಾಜ್ಯದ ಮರ್ಯಾದೆ ಹೋಗಿದೆ. ಯಾರೇ ಮಾಡಿದರೂ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಬೇಕು. ನ್ಯಾಯಾಲಯದಲ್ಲಿ ಈ ಬಗ್ಗೆ ವಾದ-ವಿವಾದಗಳು ನಡೆಯುತ್ತಿವೆ. ಯಾಕೆ ಈಗಲೇ ಇಂಥ ಘಟನೆಗಳು ಆಗಬೇಕಿತ್ತು ಎಂದು ಪ್ರಶ್ನಿಸಿದರು.

ಕ್ಲಾರ್​ನಲ್ಲಿ ಹಿಜಾಬ್ ಏಕೆ: ಸುರಯ್ಯ ಅಂಜುಮ್ ಪ್ರಶ್ನೆ

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಬಳಕೆಯ ಅಗತ್ಯವೇನಿದೆ ಎಂದು ಯುವ ಕಾಂಗ್ರೆಸ್ ನಾಯಕಿ ಸುರಯ್ಯಾ ಅಂಜುಮ್ ಪ್ರಶ್ನಿಸಿದರು. ಶಾಲೆ ಮತ್ತು ಕಾಲೇಜುಗಳ ಒಳಗೆ ಹಿಜಾಬ್ ಧರಿಸುವುದು ಬೇಡ ಎಂದು ಅವರು ಸಲಹೆ ಮಾಡಿದ್ದಾರೆ.

ರಾಜಕೀಯ ಪ್ರೇರಿತ ಪ್ರತಿಭಟನೆ: ಕಾನೂನು ಸಚಿವ ಮಾಧುಸ್ವಾಮಿ

ಕರ್ನಾಟಕದ ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ವಿವಾದದ ಕುರಿತು ದೆಹಲಿಯಲ್ಲಿ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಪಿಯು ಮಕ್ಕಳಲ್ಲಿ ಈ ಪ್ರಮಾಣದ ಬುದ್ಧಿಶಕ್ತಿ ಇರುವುದಿಲ್ಲ. ಇವರನ್ನು ಯಾರೋ ಎತ್ತಿಕಟ್ಟಿ, ಪ್ರತಿಭಟನೆ ಮಾಡಲು ಪ್ರೇರೇಪಿಸುತ್ತಿದ್ದಾರೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನಿಸುತ್ತೇವೆ. ಈ ಬೆಳವಣಿಗೆಯ ಹಿಂದೆ ಸಂಘ ಪರಿವಾರದ ಹಸ್ತಕ್ಷೇಪ ಇಲ್ಲ. ಡ್ರೆಸ್​ಕೋಡ್ ಬಗ್ಗೆ ಸಂಘ ಪರಿವಾರ ಏನೂ ಹೇಳಿಲ್ಲ ಎಂದು ಹೇಳಿದರು.

ನಿಯಮಗಳನ್ನು ರೂಪಿಸುವಾಗ ವಿರೋಧ ಮತ್ತು ಪ್ರತಿಭಟನೆಗಳು ಸಹಜ. ಸಮವಸ್ತ್ರದ ಜೊತೆಗೆ ಹಿಜಾಬ್ ಹಾಕುತ್ತೇವೆ ಎಂದು ಕೆಲವು ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ. ಈ ವಿವಾದವು ಇದೀಗ ಉದ್ಭವಿಸಲು ಶೇ 90ರಷ್ಟು ಕಾರಣ ಚುನಾವಣೆ ರಾಜಕಾರಣ. ಮಕ್ಕಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ಸರಿಯಲ್ಲ ಎಂದರು.

ಇದನ್ನೂ ಓದಿ: ಉಡುಪಿ ಕಾಲೇಜೊಂದರಲ್ಲಿ ಹಿಜಾಬ್ ತೊಟ್ಟ ವಿದ್ಯಾರ್ಥಿನಿಯರು ಮತ್ತು ಕೇಸರಿ ಪೇಟ ಧರಿಸಿದ ವಿದ್ಯಾರ್ಥಿಗಳಿಂದ ಅನಾವಶ್ಯಕ ಬಲ ಪ್ರದರ್ಶನ!

ಇದನ್ನೂ ಓದಿ: Karnataka Hijab Row: ಇತ್ಯರ್ಥವಾಗದ ವಿವಾದ; ಹಿಜಾಬ್ ವಿಚಾರಣೆ ಮುಂದೂಡಿದ ಹೈಕೋರ್ಟ್

Published On - 7:59 pm, Tue, 8 February 22

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ