AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಸ್ಥಾನ ಸಿಕ್ಕವರಿಗೂ, ಸಿಗದವರಿಗೂ ತಪ್ಪದ ಚಿಂತೆ: ‘ಕೈ’ ಪಾಳಯದಲ್ಲಿ ಮುಂದುವರಿದ ಅಂತೆಕಂತೆ

ಕರ್ನಾಟಕದಲ್ಲಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ರಚನೆಯಾದ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಖಾತೆ ಹಂಚಿಕೆ ಮತ್ತು ಎರಡನೇ ಹಂತದ ಸಂಪುಟ ವಿಸ್ತರಣೆಯ ಕುರಿತು ಭಾರಿ ಚರ್ಚೆ ಶುರುವಾಗಿವೆ. ತಮ್ಮದೇ ಆದ ಲೆಕ್ಕಾಚಾರಗಳಲ್ಲಿ ನಾಯಕರಿದ್ದು, ಹೈಕಮಾಂಡ್​​ ನಿರ್ಣಯ ಏನಾಗಲಿದೆ ಎಂಬುದೇ ಸದ್ಯ ಭಾರಿ ಕೂತೂಹಲ ಮೂಡಿಸಿದೆ.

ಸಚಿವ ಸ್ಥಾನ ಸಿಕ್ಕವರಿಗೂ, ಸಿಗದವರಿಗೂ ತಪ್ಪದ ಚಿಂತೆ: 'ಕೈ' ಪಾಳಯದಲ್ಲಿ ಮುಂದುವರಿದ ಅಂತೆಕಂತೆ
ಸಚಿವ ಸ್ಥಾನ ಸಿಕ್ಕವರಿಗೂ, ಸಿಗದವರಿಗೂ ತಪ್ಪದ ಚಿಂತೆImage Credit source: Tv9 Kannada
ಪ್ರಸನ್ನ ಹೆಗಡೆ
|

Updated on:Jun 04, 2026 | 12:57 PM

Share

ಬೆಂಗಳೂರು, ಜೂನ್​​ 04: ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ (DK Shivakumar)​​ ನೇತೃತ್ವದ ನೂತನ ಸರ್ಕಾರ ರಚನೆಯಾದ ಬೆನ್ನಲ್ಲೇ ಕಾಂಗ್ರೆಸ್​​ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಬಿರುಸು ಪಡೆದುಕೊಂಡಿವೆ. ಸಿಎಂ ಡಿಕೆಶಿ ಜೊತೆ ನಿನ್ನೆ (ಜೂನ್​ 03) ಡಿಸಿಎಂ ಆಗಿ ಡಾ.ಜಿ. ಪರಮೇಶ್ವರ್​​ ಮತ್ತು 12 ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದರು. ಮೊದಲ ಹಂತದಲ್ಲಿ ಕೆಲ ನಾಯಕರಷ್ಟೇ ಸಂಪುಟಕ್ಕೆ ಸೇರ್ಪಡೆಯಾಗಿದ್ದು, ಸಾಕಷ್ಟು ಚರ್ಚೆ ಬಳಿಕ ಈ ನಿರ್ಧಾರಕ್ಕೆ ಕಾಂಗ್ರೆಸ್​​ ಹೈಕಮಾಂಡ್​​ ಬಂದಿತ್ತು. ಹೀಗಾಗಿ ರಾಜ್ಯ ಕಾಂಗ್ರೆಸ್​​ ನಾಯಕರ ನಡುವೆಯೇ ಹತ್ತು ಹಲವು ಲೆಕ್ಕಾಚಾರಗಳು ಶುರುವಾಗಿವೆ.

ನೂತನ ಸಚಿವರಿಗೆ ಯಾವ ಖಾತೆ?

ಪ್ರಮಾಣವಚನ ಸ್ವೀಕರಿಸಿರುವ ನೂತನ ಸಚಿವರಿಗೆ ಇನ್ನೂ ಯಾವುದೇ ಖಾತೆ ಹಂಚಿಕೆ ಆಗಿಲ್ಲ. ಹೀಗಾಗಿ ಸಂಭವನೀಯ ಖಾತೆಗಳ ಬಗ್ಗೆಯೂ ಸಾಕಷ್ಟು ಚರ್ಚೆಗಳು ಶುರುವಾಗಿವೆ. ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರು ಸಚಿವ ಎಂ.ಬಿ.ಪಾಟೀಲ್, ಸಚಿವರಿಗೆ ಖಾತೆ ಹಂಚಿಕೆ ಮುಖ್ಯಮಂತ್ರಿಗಳ ಪರಮಾಧಿಕಾರ. ಹೈಕಮಾಂಡ್ ಹೇಳಿದ್ದನ್ನು ಸಂತೋಷದಿಂದ ಸ್ವೀಕಾರ ಮಾಡಿದ್ದೇವೆ ಎಂದಿದ್ದಾರೆ. ಯಾವುದೇ ಖಾತೆಯನ್ನು ಕೊಟ್ಟರೂ ನಾನು ನಿಭಾಯಿಸುತ್ತೇನೆ. ಖಾತೆ ಯಾವುದು ಅನ್ನೋದು ಮುಖ್ಯವಲ್ಲ, ಕೆಲಸ ಮುಖ್ಯ ಆಗುತ್ತೆ ಎಂದು ಮತ್ತೋರ್ವ ಸಚಿವ ಯು.ಟಿ. ಖಾದರ್​​ ತಿಳಿಸಿದ್ದಾರೆ.

ಇದನ್ನೂ ಓದಿ: ಕೆಪಿಸಿಸಿಗೆ ಹೊಸ ಅಧ್ಯಕ್ಷರ ನೇಮಕ; ಬಿಕೆ ಹರಿಪ್ರಾಸದ್​​​ ಒಂದೇ ದಿನ ಡಬಲ್ ಧಮಾಕ

ಎರಡನೇ ಪಟ್ಟಿಯ ಬಗ್ಗೆ ಹೆಚ್ಚಿದ ಚಿಂತೆ

ಇನ್ನು ಡಿಕೆಶಿ ಸಂಪುಟಲ್ಲಿ ಸಚಿವರಾಗಲಿರುವ ಶಾಸಕರ ಎರಡನೇ ಪಟ್ಟಿಯನ್ನು ಹೈಕಮಾಂಡ್​​ ರಿಲೀಸ್​​ ಮಾಡಬೇಕಿದ್ದು, ಅದರಲ್ಲಿ ಯಾರ್ಯಾರಿಗೆ ಸ್ಥಾನ ಸಿಗಲಿದೆ ಎಂಬುದೀಗ ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಸಂತೋಷ್​​ ಲಾಡ್​​ ಸೇರಿದಂತೆ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಕಾರ್ಯನಿರ್ವಹಿಸಿದ್ದ ಅನೇಕರು ಮತ್ತೆ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದರೆ, ಮೊದಲ ಬಾರಿ ಶಾಸಕರಾದವರು ಮತ್ತು ಹಿರಿಯ ನಾಯಕರಾಗಿಯೂ ಈವರೆಗೆ ಸಚಿವ ಸ್ಥಾನ ಸಿಗದವರು ಕೂಡ ರೇಸ್​​ನಲ್ಲಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂತೋಷ್​​ ಲಾಡ್​​, ಎರಡನೇ ಪಟ್ಟಿಯಲ್ಲಿ ತಮ್ಮ ಹೆಸರು ಇರಲಿದೆ ಎಂಬ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:17 pm, Thu, 4 June 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ