ಬಿಜೆಪಿ ನಾಯಕರ ಫೋಟೋ ಬಳಸಿ ಪೋಸ್ಟ್‌: ಕಾಂಗ್ರೆಸ್​, ಡಿಸಿಎಂ ಡಿಕೆ ಶಿವಕುಮಾರ್​ ವಿರುದ್ಧ ಬಿಜೆಪಿ ದೂರು

| Updated By: ಗಂಗಾಧರ​ ಬ. ಸಾಬೋಜಿ

Updated on: Jan 20, 2024 | 9:04 PM

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಬಿಜೆಪಿ ಹಿರಿಯ ನಾಯಕರ ಫೋಟೋ ಬಳಸಿ ಕರ್ನಾಟಕ ಕಾಂಗ್ರೆಸ್ ಫೇಸ್‌ಬುಕ್ ಪೇಜ್‌ನಲ್ಲಿ ಪೋಸ್ಟ್ ಮಾಡಿದ್ದ ಹಿನ್ನೆಲೆ ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಕೆಪಿಸಿಸಿ ಫೇಸ್‌ಬುಕ್ ಹ್ಯಾಂಡ್ಲರ್ ವಿರುದ್ಧ ಕೋರ್ಟ್‌ನಲ್ಲಿ ದೂರು ದಾಖಲು ಮಾಡಲಾಗಿದೆ.

ಬಿಜೆಪಿ ನಾಯಕರ ಫೋಟೋ ಬಳಸಿ ಪೋಸ್ಟ್‌: ಕಾಂಗ್ರೆಸ್​, ಡಿಸಿಎಂ ಡಿಕೆ ಶಿವಕುಮಾರ್​ ವಿರುದ್ಧ ಬಿಜೆಪಿ ದೂರು
ಕಾಂಗ್ರೆಸ್ ಬಿಡುಗಡೆ ಮಾಡಿದ್ದ ಪೋಸ್ಟ್‌
Follow us on

ಬೆಂಗಳೂರು, ಜನವರಿ 20: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಬಿಜೆಪಿ ಹಿರಿಯ ನಾಯಕರ ಫೋಟೋ ಬಳಸಿ ಕರ್ನಾಟಕ ಕಾಂಗ್ರೆಸ್ ಫೇಸ್‌ಬುಕ್ ಪೇಜ್‌ನಲ್ಲಿ ಪೋಸ್ಟ್ ಮಾಡಿದ್ದ ಹಿನ್ನೆಲೆ ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಹಾಗೂ ಕೆಪಿಸಿಸಿ ಫೇಸ್‌ಬುಕ್ ಹ್ಯಾಂಡ್ಲರ್ ವಿರುದ್ಧ ಕೋರ್ಟ್‌ನಲ್ಲಿ ದೂರು ದಾಖಲು ಮಾಡಲಾಗಿದೆ. ಬಿಜೆಪಿ ರಾಜ್ಯ ಕಾನೂನು ಪ್ರಕೋಷ್ಠದಿಂದ ಐಪಿಸಿ ಸೆಕ್ಷನ್ 153ಎ, 464, 504 ಮತ್ತು 505(ಬಿ)ರಡಿ ಬೆಂಗಳೂರಿನ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿದೆ.

ರಾಮ ಜನ್ಮಭೂಮಿ ವಿಚಾರವಾಗಿ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಆರೋಪಿ ಶ್ರೀಕಾಂತ್​ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದರು. ಇದು ಬಿಜೆಪಿ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಮಾಡಿತ್ತು. ಈ ವೇಳೆ ಬಿಜೆಪಿ ನಾಯಕರು ನಾನು ಕರಸೇವಕ ನನ್ನನ್ನೂ ಬಂಧಿಸಿ ಅಭಿಯಾನ ಮಾಡಿದ್ದರು. ಈ ಅಭಿಯಾನವನ್ನು ಕಾಂಗ್ರೆಸ್​ ಲೇವಡಿ ಮಾಡಿದ್ದಲ್ಲದೇ ಬಿಜೆಪಿ ನಾಯಕರ ಪೋಟೋಗಳನ್ನು ಬಳಸಿ ವ್ಯಂಗ್ಯವಾಡಿತ್ತು.

ಇದನ್ನೂ ಓದಿ: ಫೋಟೋ ದುರ್ಬಳಕೆ ಆರೋಪ: ಡಿಕೆ ಶಿವಕುಮಾರ್​, ಫೇಸ್​ಬುಕ್ ಹ್ಯಾಂಡ್ಲರ್ ವಿರುದ್ಧ ಬಿಜೆಪಿ ದೂರು

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ, ಸಂಸದ ಪ್ರತಾಪ್​ ಸಿಂಹ, ಮಾಜಿ ಸಚಿವ ಸಿಟಿ ರವಿ ಮತ್ತು ಶಾಸಕ ಸುನಿಲ್​ ಕುಮಾರ್​ ಅವರ ನಾಯಕರ ಫೋಟೋಗಳನ್ನು ತಿರುಚಿ ಸುಳ್ಳು ಮತ್ತು ಕಪೋಲಕಲ್ಪಿತ ಹೇಳಿಕೆಗಳನ್ನು ಕಾಂಗ್ರೆಸ್​ ತನ್ನ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿತ್ತು.

ಇದನ್ನೂ ಓದಿ:  ಜೆಡಿಎಸ್ ಪಕ್ಷದ ಚಿಹ್ನೆ, ಲೆಟರ್​ಹೆಡ್‌ ಬಳಸದಂತೆ ಸಿಎಂ ಇಬ್ರಾಹಿಂಗೆ ಕೋರ್ಟ್ ಆದೇಶ

ಬಿಜೆಪಿ ನಾಯಕರ ಫೋಟೋಗಳನ್ನು ಎಡಿಟ್​ ಮಾಡಿ ದುರ್ಬಳಕೆ ಮಾಡಲಾಗುತ್ತಿದೆ. ಆ ಮೂಲಕ ತಪ್ಪುದಾರಿಗೆಳೆಯುವ, ಫ್ಯಾಬ್ರಿಕೇಟೆಡ್ ಪೋಸ್ಟ್‌ಶೇವ್ ಪೋಸ್ಟ್ ಮಾಡಲಾಗುತ್ತಿದೆ. ಕರ್ನಾಟಕದ ವಿವಿಧ ವರ್ಗದ ನಾಗರಿಕರ ನಡುವೆ ದ್ವೇಷವನ್ನು ಉತ್ತೇಜಿಸುವ ಮತ್ತು ಮತ್ತಷ್ಟು ಕೆಡಿಸುವ ಉದ್ದೇಶದಿಂದ ಮಾಡಿದ, ಸುಳ್ಳು ಮತ್ತು ಕಪೋಲಕಲ್ಪಿತ ಹೇಳಿಕೆಯ ಫಲಕಗಳನ್ನು ಹಾಕಲಾಗುತ್ತಿದೆ. ಜೊತೆಗೆ ಬಿಜೆಪಿ ಹಿರಿಯ ನಾಯಕರ ಇಮೇಜ್ ಅನ್ನು ಹಾನಿ ಮಾಡಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.