Potholes: ಬಿಬಿಎಂಪಿಯ ಅವ್ಯವಸ್ಥೆ ಮತ್ತೊಮ್ಮೆ ಬೆಳಕಿಗೆ, ಯಲಹಂಕದಲ್ಲಿ ರಸ್ತೆಗುಂಡಿಗೆ ಮತ್ತೊಂದು ಬಲಿ

ಬೆಂಗಳೂರಿನ ರಸ್ತೆಗಳ ಸಮಪರ್ಕ ನಿರ್ವಹಣೆ ಇಲ್ಲದ ಕಾರಣ, ಅಪಘಾತಗಳು ಹೆಚ್ಚಾಗುತ್ತಿವೆ. ಬೆಂಗಳೂರಿನ ರಸ್ತೆಗುಂಡಿ ಮತ್ತೊಂದು ಬಲಿ ಪಡೆದಿದೆ. ಯಲಹಂಕದ ಅಟ್ಟೂರು ಬಡಾವಣೆಯಲ್ಲಿ ಶನಿವಾರ ರಾತ್ರಿ ನಡೆದ ಘಟನೆಯಲ್ಲಿ ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ.

Potholes: ಬಿಬಿಎಂಪಿಯ ಅವ್ಯವಸ್ಥೆ ಮತ್ತೊಮ್ಮೆ ಬೆಳಕಿಗೆ, ಯಲಹಂಕದಲ್ಲಿ ರಸ್ತೆಗುಂಡಿಗೆ ಮತ್ತೊಂದು ಬಲಿ
PotholeImage Credit source: Twitter: Representative Image
Follow us
TV9 Web
| Updated By: ನಯನಾ ರಾಜೀವ್

Updated on: Oct 30, 2022 | 10:27 AM

ಬೆಂಗಳೂರಿನ ರಸ್ತೆಗಳ ಸಮಪರ್ಕ ನಿರ್ವಹಣೆ ಇಲ್ಲದ ಕಾರಣ, ಅಪಘಾತಗಳು ಹೆಚ್ಚಾಗುತ್ತಿವೆ. ಬೆಂಗಳೂರಿನ ರಸ್ತೆಗುಂಡಿ ಮತ್ತೊಂದು ಬಲಿ ಪಡೆದಿದೆ. ಯಲಹಂಕದ ಅಟ್ಟೂರು ಬಡಾವಣೆಯಲ್ಲಿ ಶನಿವಾರ ರಾತ್ರಿ ನಡೆದ ಘಟನೆಯಲ್ಲಿ ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ.

ಗುಂಡಿ ತಪ್ಪಿಸಲು ಹೋಗಿ ಕಾರೊಂದು ಪಲ್ಟಿಯಾಗಿದ್ದು, ಆ ಸಂದರ್ಭದಲ್ಲಿ ಮುಂದೆ ಬರುತ್ತಿದ್ದ ಬೈಕ್ ಕಾರಿಗೆ ಡಿಕ್ಕಿ ಹೊಡೆದಿದೆ, ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವ ಯುವಕನಿಗೆ ಗಂಭೀರ ಗಾಯಗಳಾಗಿವೆ. ಯಲಹಂಕ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸಿಸಿಟಿವಿ ದೃಶ್ಯ ಟಿವಿ9ನಗೆ ಲಭ್ಯವಾಗಿದೆ. ಹೊಂಡಗಳಿರುವ ರಸ್ತೆಗಳಿಂದ ಪದೇ ಪದೇ ಅಪಘಾತವಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೀಪಾವಳಿ ಹಬ್ಬದ ಹಿನ್ನೆಲೆ ಸರಣಿ ರಜೆ ಹಾಗೂ ಮಳೆ ಕೊಂಚ ಬಿಡುವು ನೀಡಿತ್ತು. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗುಂಡಿ ಬಿದ್ದಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಬಿಬಿಎಂಪಿ ಚುರುಕುಗೊಳಿಸುವುದಾಗಿ ಹೇಳಿದೆ.

ನಗರದ ಎಂಟು ವಲಯಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ, ದುರಸ್ತಿ ಮಾಡುವ ಕಾರ್ಯ ಆರಂಭವಾಗಿದೆ. ಬಿನ್ನಿಮೀಲ್ಸ್, ವಿಲ್ಸನ್ ಗಾರ್ಡನ್, ಔಟರ್ ರಿಂಗ್ ರಸ್ತೆ ಸವೀರ್‍ಸ್ ರಸ್ತೆ, ದೊಡ್ಡಾನೆಕುಂದಿ, ಮಾರತ್‌ಹಳ್ಳಿ, ಇಬ್ಬಲೂರು, ಇಮ್ಮಡಿಹಳ್ಳಿ ರಸ್ತೆ, ಹಗದೂರು ರಸ್ತೆ, ವೈಟ್‌ಫೀಲ್ಡ್ ರಸ್ತೆ, ಸಿದ್ದಾಪುರ ನಲ್ಲೂರಹಳ್ಳಿ ರಸ್ತೆ, ಗುಂಜೂರು ರಸ್ತೆ, ಶಾಂತಿನಗರ, ಆರ್ ಟಿನಗರ ಸೇರಿದಂತೆ ಇತರೆ ಕಡೆಗಳಲ್ಲಿ ಕೆಲಸ ಶುರುವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು.

ಬೆಂಗಳೂರಲ್ಲಿ 20 ಸಾವಿರಕ್ಕೂ ಹೆಚ್ಚು ರಸ್ತೆ ಗುಂಡಿಗಳಿರುವುದು ಸಮೀಕ್ಷೆಯಿಂದ ತಿಳಿದು ಬಂದಿದೆ. ಮತ್ತೊಂದೆಡೆ, ಯಲಹಂಕದಲ್ಲಿ ಬಿಬಿಎಂಪಿ ತನ್ನ ಸ್ವಂತ ಡಾಂಬರು ಘಟಕವನ್ನು ಹೊಂದಿದೆ. ಇದಲ್ಲದೆ, ಯಲಹಂಕ, ದಕ್ಷಿಣ, ಪಶ್ಚಿಮ, ಪೂರ್ವ ವಲಯದಲ್ಲಿ ಖಾಸಗಿಯವರಿಂದ ತಲಾ ಒಂದು ಘಟಕವನ್ನು ಬಾಡಿಗೆ ಆಧಾರದಲ್ಲಿ ಪಡೆದುಕೊಳ್ಳಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು