AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Power Cut: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ, ಮೈಕೋ ಲೇಔಟ್ ಸೇರಿ ಹಲವೆಡೆ ಇಂದು ಪವರ್ ಕಟ್

Bengaluru Power Cut: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ, ಚಂದ್ರಾ ಲೇಔಟ್, ಮೈಕೋ ಲೇಔಟ್ ಮುಂತಾದ ಏರಿಯಾಗಳಲ್ಲಿ ಇಂದು ಪವರ್ ಕಟ್ ಇರಲಿದೆ.

Power Cut: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ, ಮೈಕೋ ಲೇಔಟ್ ಸೇರಿ ಹಲವೆಡೆ ಇಂದು ಪವರ್ ಕಟ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Feb 20, 2022 | 5:47 AM

Share

ಬೆಂಗಳೂರು: ಬೆಂಗಳೂರಿನ (Bangalore) ಅನೇಕ ಏರಿಯಾಗಳಲ್ಲಿ ಇಂದು ವಿದ್ಯುತ್ ಪೂರೈಕೆಯಲ್ಲಿ (Electricity Supply) ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ನಿರ್ವಹಣೆ ಮತ್ತು ಮೇಲ್ದರ್ಜೆಗೇರಿಸುವ ಕಾಮಗಾರಿಯಿಂದ ಇಂದು ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ಪವರ್ ಕಟ್ (Power Cut) ಇರಲಿದೆ ಎಂದು ಬೆಸ್ಕಾಂ (BESCOM) ತಿಳಿಸಿದೆ. ಭಾನುವಾರವಾದ್ದರಿಂದ ಮನೆಯಲ್ಲಿ ಆರಾಮಾಗಿ ರಜೆ ದಿನ ಕಳೆಯಬಹುದು ಎಂದುಕೊಂಡಿದ್ದ ಬೆಂಗಳೂರಿಗರಿಗೆ ಇಂದು ಕೂಡ ಪವರ್ ಕಟ್ ಸಮಸ್ಯೆ ಎದುರಾಗಲಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ, ಚಂದ್ರಾ ಲೇಔಟ್, ಮೈಕೋ ಲೇಔಟ್ ಮುಂತಾದ ಏರಿಯಾಗಳಲ್ಲಿ ಇಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3ರವರೆಗೆ ಕರೆಂಟ್ ಇರುವುದಿಲ್ಲ. ಇನ್ನು ಕೆಲವೆಡೆ ಬೆಳಗ್ಗೆ 11ರಿಂದ ಮಧ್ಯಾಹ್ನ 3ರವರೆಗೆ ಮಾತ್ರ ಪವರ್ ಕಟ್ ಇರಲಿದೆ.

ಬೆಂಗಳೂರಿನ ದಕ್ಷಿಣ ವಲಯದಲ್ಲಿ ಇಂದು ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಜೆ.ಸಿ. ಇಂಡಸ್ಟ್ರಿಯಲ್ ಲೇಔಟ್, ಎಲೆಕ್ಟ್ರಾನಿಕ್ ಸಿಟಿ 1ನೇ ಹಂತ, ರಾಡಲ್ ರಸ್ತೆ ಮತ್ತು ಕೆಎಸ್​ಎಸ್​ಐಡಿಸಿ ಕಾಂಪ್ಲೆಕ್ಸ್, ನೀಲಾದ್ರಿ ರಸ್ತೆ, ದೊಡ್ಡತೋಗೂರು ಏರಿಯಾಗಳಲ್ಲಿ ಪವರ್ ಕಟ್ ಇರಲಿದೆ.

ಬೆಂಗಳೂರಿನ ಉತ್ತರ ವಲಯದಲ್ಲಿ ಬೆಳಗ್ಗೆ 10 ರಿಂದ ಸಂಜೆ 7 ಗಂಟೆಯವರೆಗೆ ಸಾಯಿ ಗಾರ್ಡನ್, ಬಸವಲಿಂಗಪ್ಪ ನಗರ, ಸಿಂಗಾಪುರ ಪ್ಯಾರಡೈಸ್ ಸ್ಲಂ ಬೋರ್ಡ್ ಏರಿಯಾಗಳಲ್ಲಿ ಕರೆಂಟ್ ಇರುವುದಿಲ್ಲ.

ಬೆಂಗಳೂರು ಪಶ್ಚಿಮ ವಲಯದಲ್ಲಿ ಬೆಳಗ್ಗೆ 10.30ರಿಂದ ಸಂಜೆ 7 ಗಂಟೆಯವರೆಗೆ ವಿಡಿಯಾ ಲೇಔಟ್, ಬಿಇಎಲ್​ ಅತಿಥಿ ಗೃಹ, ಬಸವೇಶ್ವರ ಲೇಔಟ್, ಜಿಕೆಡಬ್ಲ್ಯೂ ಲೇಔಟ್, ಪಿಎಫ್ ಲೇಔಟ್, ವಿನಾಯಕ ಲೇಔಟ್, ಬಸವೇಶ್ವರನಗರ 3ನೇ ಬ್ಲಾಕ್, ಮೈಕೋ ಲೇಔಟ್, ಚಂದ್ರಾ ಲೇಔಟ್, ವೀರಭದ್ರೇಶ್ವರ ನಗರದ ಸುತ್ತಮುತ್ತಲಿನ ಭಾಗಗಳಲ್ಲಿ ಪವರ್ ಕಟ್ ಇರಲಿದೆ.

ಇದನ್ನೂ ಓದಿ: Bengaluru Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದಿನಿಂದ ಶನಿವಾರದವರೆಗೆ ಪವರ್ ಕಟ್

Bengaluru Power Cut: ಬೆಂಗಳೂರಿಗರಿಗೆ ವರ್ಷಾಂತ್ಯಕ್ಕೆ ಪವರ್ ಕಟ್ ಶಾಕ್; ಕೆಂಗೇರಿ, ಮತ್ತಿಕೆರೆ ಸೇರಿ ಈ ಏರಿಯಾಗಳಲ್ಲಿ ಇಂದು ಕರೆಂಟ್ ಇರಲ್ಲ

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ