Bengaluru Power Cut: ಬೆಂಗಳೂರಿಗರೇ ಗಮನಿಸಿ; ಇಂದು ನಿಮ್ಮ ಏರಿಯಾದಲ್ಲೂ ಪವರ್ ಕಟ್ ಇರಬಹುದು

BESCOM: ಜಯನಗರ, ಮಾರತ್​ಹಳ್ಳಿ, ಪೀಣ್ಯ, ಚಂದ್ರಾ ಲೇಔಟ್, ಬಸವೇಶ್ವರನಗರ, ಹಂಪಿ ನಗರ ಸೇರಿದಂತೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5ರವರೆಗೆ ಪವರ್ ಕಟ್ ಇರಲಿದೆ.

Bengaluru Power Cut: ಬೆಂಗಳೂರಿಗರೇ ಗಮನಿಸಿ; ಇಂದು ನಿಮ್ಮ ಏರಿಯಾದಲ್ಲೂ ಪವರ್ ಕಟ್ ಇರಬಹುದು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Feb 12, 2022 | 5:50 AM

Power Cut in Bangalore: ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಕೂಡ ಹಲವು ಏರಿಯಾಗಳಲ್ಲಿ ಕರೆಂಟ್ ಇರುವುದಿಲ್ಲ. ವೀಕೆಂಡ್ ಆದ್ದರಿಂದ ಮನೆಯಲ್ಲೇ ಇರುವ ಸಿಲಿಕಾನ್ ಸಿಟಿಯ ಮಂದಿ ಇಂದು ಬೆಳಗ್ಗೆಯಿಂದ ಸಂಜೆಯವರೆಗೆ ಪವರ್ ಕಟ್ ಸಮಸ್ಯೆಯನ್ನು ಅನುಭವಿಸಬೇಕಾಗುತ್ತದೆ. ನಿರ್ವಹಣಾ ಕಾರ್ಯದಿಂದಾಗಿ ಇಂದು (ಶನಿವಾರ) ಬೆಂಗಳೂರಿನ ಹಲವೆಡೆ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ. ಜಯನಗರ, ಮಾರತ್​ಹಳ್ಳಿ, ಪೀಣ್ಯ, ಚಂದ್ರಾ ಲೇಔಟ್, ಬಸವೇಶ್ವರನಗರ, ಹಂಪಿ ನಗರ ಸೇರಿದಂತೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5ರವರೆಗೆ ಪವರ್ ಕಟ್ (Power Cut) ಇರಲಿದೆ.

ಬೆಂಗಳೂರು ದಕ್ಷಿಣ ವಲಯದಲ್ಲಿ ಇಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಜಯನಗರ 4ನೇ ಬ್ಲಾಕ್, ಶಾಂತಿನಗರ, ವಿನಾಯಕ ನಗರ, ಕನಕ ಲೇಔಟ್, ಗೌಡನಪಾಳ್ಯ, ಕೋನೇನ ಅಗ್ರಹಾರ, ಮಾರತಹಳ್ಳಿ, ಸಂಜಯ ನಗರ, ಮಂಜುನಾಥ ನಗರ, ಪರಂಗಿಪಾಳ್ಯ, ಸರ್ಜಾಪುರ ರಸ್ತೆ, ಎಲೆಕ್ಟ್ರಾನಿಕ್ ಸಿಟಿ, ಕೋನಪ್ಪನ ಅಗ್ರಹಾರ, ದೊಡ್ಡತೋಗೂರು, ಬಸಾಪುರ ಮುಖ್ಯರಸ್ತೆ ಮತ್ತು ಜಿಎಸ್ ಪಾಳ್ಯದಲ್ಲಿ ಕರೆಂಟ್ ಇರುವುದಿಲ್ಲ.

ಬೆಂಗಳೂರು ಉತ್ತರ ವಲಯದಲ್ಲಿ ಹನುಮಾನ್‌ ಲೇಔಟ್‌, ಬಾಲಾಜಿ ಲೇಔಟ್‌, ಎಂಎಲ್‌ಎ ಲೇಔಟ್‌, ಆರ್‌ಟಿ ನಗರ ಮತ್ತು ಪೀಣ್ಯ ಗ್ರಾಮಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ. ಬೆಂಗಳೂರು ಪೂರ್ವ ವಲಯದಲ್ಲಿ ಸೇಂಟ್ ಜೋಸೆಫ್ ರಸ್ತೆ ಮತ್ತು ಮರ್ಫಿ ಟೌನ್‌ನಲ್ಲಿ ಇಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಪವರ್ ಕಟ್ ಇರಲಿದೆ.

ಬೆಂಗಳೂರಿನ ಪಶ್ಚಿಮ ವಲಯದಲ್ಲಿ ಹಂಪಿನಗರ, ಸುಬ್ಬಣ್ಣ ಗಾರ್ಡನ್, ಶಿವಾನಂದನಗರ, ಗಂಗೊಂಡನಹಳ್ಳಿ, ಚಂದ್ರಾಲೇಔಟ್, ಬಸವೇಶ್ವರ ನಗರದ ಕೆಲವು ಭಾಗಗಳು, ಮಂಜುನಾಥ್ ನಗರ, ಅಗ್ರಹಾರ ದಾಸರಹಳ್ಳಿ, ಕೆಬ್ಬೇಹಳ್ಳಿ, ಹೊಸಹಳ್ಳಿ ರಸ್ತೆ ಪ್ರದೇಶ ಮತ್ತು ಡಿ ಗ್ರೂಪ್ ಲೇಔಟ್ 1 ನೇ ಬ್ಲಾಕ್ ಮುಂತಾದ ಪ್ರದೇಶಗಳಲ್ಲಿ ಬೆಳಿಗ್ಗೆ 9ರಿಂದ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಇದನ್ನೂ ಓದಿ: Power Cut: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ, ಬಸವೇಶ್ವರ ನಗರ ಮುಂತಾದ ಏರಿಯಾಗಳಲ್ಲಿ ಇಂದು ಪವರ್ ಕಟ್

Power Cut: ಬೆಂಗಳೂರಿನ ಬನಶಂಕರಿ, ವೈಟ್​ಫೀಲ್ಡ್​, ಯಶವಂತಪುರ ಸೇರಿ ಹಲವೆಡೆ ಇಂದು ಕರೆಂಟ್ ಇರಲ್ಲ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?