Power Cut: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ, ಬಸವೇಶ್ವರ ನಗರ ಮುಂತಾದ ಏರಿಯಾಗಳಲ್ಲಿ ಇಂದು ಪವರ್ ಕಟ್

Bengaluru Power Cut: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ, ಮಂಜುನಾಥನಗರ, ಸುಂಕದಕಟ್ಟೆ, ಬಸವೇಶ್ವರ ನಗರ, ವೀರಭದ್ರೇಶ್ವರ ನಗರ ಮುಂತಾದ ಏರಿಯಾಗಳಲ್ಲಿ ಇಂದು ಪವರ್ ಕಟ್ ಇರಲಿದೆ.

Power Cut: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ, ಬಸವೇಶ್ವರ ನಗರ ಮುಂತಾದ ಏರಿಯಾಗಳಲ್ಲಿ ಇಂದು ಪವರ್ ಕಟ್
ಪವರ್​ ಕಟ್​
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Feb 06, 2022 | 6:01 AM

ಬೆಂಗಳೂರು: ಬೆಂಗಳೂರಿನ ಹಲವು ಏರಿಯಾಗಳಲ್ಲಿ ಕಳೆದೊಂದು ವಾರದಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಬೆಂಗಳೂರಿನ ಹಲವು ಏರಿಯಾಗಳಲ್ಲಿ ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ ಇಂದು (ಫೆ. 6) ಕೂಡ ಪವರ್ ಕಟ್ ಇರಲಿದೆ. ಇನ್ನೆರಡು ದಿನ ಬೆಂಗಳೂರಿನಾದ್ಯಂತ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ತಿಳಿಸಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ, ಮಂಜುನಾಥನಗರ, ಸುಂಕದಕಟ್ಟೆ, ಬಸವೇಶ್ವರ ನಗರ, ವೀರಭದ್ರೇಶ್ವರ ನಗರ ಮುಂತಾದ ಏರಿಯಾಗಳಲ್ಲಿ ಇಂದು ಕರೆಂಟ್ (Power Cut) ಇರುವುದಿಲ್ಲ.

ಇಂದು ಬೆಂಗಳೂರಿನ ದಕ್ಷಿಣ ವಲಯದಲ್ಲಿ ಜೆಸಿ ಇಂಡಸ್ಟ್ರಿಯಲ್ ಲೇಔಟ್‌ನಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಎಲೆಕ್ಟ್ರಾನಿಕ್ ಸಿಟಿ, ಕೋನಪ್ಪನ ಅಗ್ರಹಾರ, ದೊಡ್ಡತೋಗೂರು ಬೆಳಗ್ಗೆ 10.30ರಿಂದ ಮಧ್ಯಾಹ್ನ 3.30ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಉತ್ತರ ವಲಯದ ಅಬ್ಬಿಗೆರೆಯಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 3.30ರವರೆಗೆ ವಿದ್ಯುತ್ ಪೂರೈಕೆ ಕಡಿತವಾಗಲಿದೆ.

ಬೆಂಗಳೂರಿನ ಪಶ್ಚಿಮ ವಲಯದಲ್ಲಿ ಇಂದು ಬೆಳಗ್ಗೆ 10ರಿಂದ ಸಂಜೆ 5.30ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸುಬ್ಬಣ್ಣ ಗಾರ್ಡನ್, ವಿಎಚ್‌ಬಿಸಿಎಸ್ ಲೇಔಟ್, ಕೆನರಾ ಬ್ಯಾಂಕ್ ಕಾಲೋನಿ, ಅನುಭವ ನಗರ, ಕಿರ್ಲೋಸ್ಕರ್ ಕಾಲೋನಿ 1 ನೇ ಹಂತ, ಹಾವನೂರು ವೃತ್ತ, ಮಂಜುನಾಥನಗರದ ಕೆಲವು ಭಾಗಗಳು, ಬಸವೇಶ್ವರ ನಗರದ ಕೆಲವು ಭಾಗಗಳು, ಶಾರದ ಕಾಲೋನಿ, ಮೀನಾಕ್ಷಿನಗರ, ಸುಂಕದಕಟ್ಟೆ, ರಾಜೀವ್ ನಗರ, ಬೈರವೇಶ್ವರ ನಗರ, ಟಿ.ಜಿ. ಪಾಳ್ಯ, ವಿಘ್ನೇಶ್ವರ ನಗರ ಮತ್ತು ವೀರಭದ್ರೇಶ್ವರ ನಗರದಲ್ಲಿ ಇಂದು ಕರೆಂಟ್ ಇರುವುದಿಲ್ಲ.

ಇದನ್ನೂ ಓದಿ: Power Cut: ಬೆಂಗಳೂರಿನ ಬನಶಂಕರಿ, ಸದಾಶಿವನಗರ ಸೇರಿ ಬಹುತೇಕ ಏರಿಯಾಗಳಲ್ಲಿ ಇಂದು ಪವರ್ ಕಟ್

Power Cut: ಬೆಂಗಳೂರಿನ ಹನುಮಂತನಗರ, ಬನಶಂಕರಿ, ಕೆಂಗೇರಿ ಹಲವೆಡೆ ಇಂದು ಪವರ್ ಕಟ್

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?