Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Power Cut: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದಿನಿಂದ ವಿದ್ಯುತ್ ವ್ಯತ್ಯಯ, ಇಲ್ಲಿದೆ ವಿವರ

Bengaluru Power Outage: ಇಂದಿನಿಂದ ಜೂನ್ 29ರವರೆಗೆ ನಗರದ ಹಲವು ಬಡಾವಣೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ​​ ವ್ಯತ್ಯಯವಾಗಲಿದೆ.

Bangalore Power Cut: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದಿನಿಂದ ವಿದ್ಯುತ್ ವ್ಯತ್ಯಯ, ಇಲ್ಲಿದೆ ವಿವರ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 27, 2022 | 7:12 AM

ಬೆಂಗಳೂರು: ವಿದ್ಯುತ್ ಮಾರ್ಗಗಳ ನಿರ್ವಹಣೆ, ಹೊಸದಾಗಿ ಕೇಬಲ್ ಅಳವಡಿಕೆ ಸೇರಿದಂತೆ ಹಲವು ಕಾಮಗಾರಿಗಳನ್ನು ಬೆಸ್ಕಾಂ (BESCOM) ಆರಂಭಲಿದ್ದು, ಇಂದಿನಿಂದ ಜೂನ್ 29ರವರೆಗೆ ನಗರದ ಹಲವು ಬಡಾವಣೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ​​ (Power Supply Problem) ವ್ಯತ್ಯಯ ಕಂಡುಬರಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ತಿಳಿಸಿದೆ. ಇಂದು (ಸೋಮವಾರ, ಜೂನ್ 27) ಬೆಂಗಳೂರು ದಕ್ಷಿಣ ವಲಯದ ಪ್ರದೇಶಗಳು, ಕೋರಮಂಗಲದ 3, 4, 5 ಮತ್ತು 6 ಬ್ಲಾಕ್​ಗಳು, ಸಕ್ರಾ ಆಸ್ಪತ್ರೆ, ಔಟರ್ ರಿಂಗ್​ರೋಡ್​ನ ಸಲಾರ್‌ಪುರಿಯಾ ಸತ್ವ ಬೆಳಿಗ್ಗೆ 11ರಿಂದ ಮಧ್ಯಾಹ್ನ 2 ಗಂಟೆವರೆಗೆ ವಿದ್ಯುತ್​​ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಪೂರ್ವ ವಲಯದಲ್ಲಿ ಹಳೇ ಬೈಯಪ್ಪನಹಳ್ಳಿ, ಕುಕ್ಸನ್ ರಸ್ತೆ, ಡೇವಿಸ್ ರಸ್ತೆ, ರಿಚರ್ಡ್ಸ್ ಪಾರ್ಕ್ ರಸ್ತೆ, ಆಯಿಲ್ ಮಿಲ್ ರಸ್ತೆ, ಸದಾಶಿವ ದೇವಸ್ಥಾನ ರಸ್ತೆ, ಕಾಮನಹಳ್ಳಿ ಮುಖ್ಯರಸ್ತೆ, ಕೆಎಚ್ ಬಿ ಕಾಲೋನಿ, ಹಚಿನ್ಸ್ ರಸ್ತೆ, ವೀಲರ್ ರಸ್ತೆ, ಬಾಣಸವಾಡಿ ರೈಲು ನಿಲ್ದಾಣ ರಸ್ತೆ, ಲಿಂಗರಾಜಪುರ, ಐಟಿಸಿ ಮುಖ್ಯರಸ್ತೆ, ಜೀವನಹಳ್ಳಿ ಮತ್ತು ಬಾಣಸವಾಡಿ ಮುಖ್ಯರಸ್ತೆ ಹಾಗೂ ಸುತ್ತಮುತ್ತಲು ಬೆಳಿಗ್ಗೆ 11ರಿಂದ ಸಂಜೆ 5ರವರೆಗೆ ವ್ಯತ್ಯಯವಾಗಲಿದೆ. ಪಶ್ಚಿಮ ವಲಯದಲ್ಲಿ ಬಿಎಂಟಿಸಿ ಬಸ್ ಡಿಪೋ, ಶಂಕರಪ್ಪ ಎಸ್ಟೇಟ್ ಸೇರಿದಂತೆ ಉತ್ತರ ವಲಯದಲ್ಲಿ ಇಸ್ರೋ ಲೇಔಟ್ ಮತ್ತು ನ್ಯೂ ಬಿಇಎಲ್ ರಸ್ತೆಯಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್​ ಕಡಿತಗೊಳ್ಳಲಿದೆ.

ನಾಳೆ (ಮಂಗಳವಾರ, ಜೂನ್ 28) ಬೆಂಗಳೂರು ಪೂರ್ವ ವಲಯದ ವ್ಯಾಪ್ತಿಯ ಪ್ರದೇಶಗಳಲ್ಲಿ ಎಚ್​ಆರ್​ಬಿಆರ್ ಲೇಔಟ್​ನ 2 ಮತ್ತು 3 ನೇ ಬ್ಲಾಕ್, ಕಾಮನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಮತ್ತು ಬಾಣಸವಾಡಿ ಪ್ರದೇಶಗಳಲ್ಲಿ ಬೆಳಿಗ್ಗೆ 11ರಿಂದ ಸಂಜೆ 5ರ ವರೆಗೆ ವಿದ್ಯುತ್​ ವ್ಯತ್ಯಯವಾಗಲಿದೆ.

ನಾಡಿದ್ದು (ಬುಧವಾರ, ಜೂನ್ 29) ನಗರದ ದಕ್ಷಿಣ ವಲಯದಲ್ಲಿ ಕೋರಮಂಗಲ 2 ಬ್ಲಾಕ್, ಮಡಿವಾಳ ಟೋಟಲ್ ಮಾಲ್, ದವನಂ ಜ್ಯುವೆಲರ್ಸ್ ಕಟ್ಟಡ, ಮಡಿವಾಳ ಸಂತೆ, ಸಿದ್ಧಾರ್ಥ ಕಾಲೋನಿ, ಕೋರಮಂಗಲ 5 ಬ್ಲಾಕ್, ಇಂಡಸ್ಟ್ರಿಯಲ್ ಲೇಔಟ್​​ನಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 2 ಗಂಟೆವರೆಗೆ ವ್ಯತ್ಯಯವಾಗಲಿದೆ. ಸಿಎಂಆರ್ ರಸ್ತೆ, ಎಚ್‌ಆರ್‌ಬಿಆರ್ ಲೇಔಟ್ 3 ಬ್ಲಾಕ್, ರಾಮಯ್ಯ ಲೇಔಟ್, ಕರವಳ್ಳಿ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಸೇರಿದಂತೆ ಪೂರ್ವ ವಲಯದ ಕೆಲವು ಪ್ರದೇಶಗಳಲ್ಲಿ ಬೆಳಗ್ಗೆ 11ರಿಂದ ಸಂಜೆ 5.30ರವರೆಗೆ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಹೇಳಿದೆ.

Published On - 7:12 am, Mon, 27 June 22

ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ
ಪಂದ್ಯವಾಡು ಫೈನ್ ಕಟ್ಟು: ಬ್ಯಾಕ್ ಟು ಬ್ಯಾಕ್ ದಂಡ ಕಟ್ಟಿದ ದಿಗ್ವೇಶ್ ರಾಠಿ
ಪಂದ್ಯವಾಡು ಫೈನ್ ಕಟ್ಟು: ಬ್ಯಾಕ್ ಟು ಬ್ಯಾಕ್ ದಂಡ ಕಟ್ಟಿದ ದಿಗ್ವೇಶ್ ರಾಠಿ