Bangalore Electricity Cut: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ 3 ದಿನ ವಿದ್ಯುತ್ ವ್ಯತ್ಯಯ, ಇಲ್ಲಿದೆ ವಿವರ
ವಿದ್ಯುತ್ ಮಾರ್ಗಗಳ ನಿರ್ವಹಣೆ, ಹೊಸದಾಗಿ ಕೇಬಲ್ ಅಳವಡಿಕೆ ಸೇರಿದಂತೆ ಹಲವು ಕಾಮಗಾರಿಗಳನ್ನು ಬೆಸ್ಕಾಂ ಆರಂಭಲಿದ್ದು, ಇಂದು ಜೂನ್ 27 ರಿಂದ ಜೂನ್ 29ರವರಗೆ ನಗರದ ಹಲವು ಬಡಾವಣೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ
ಬೆಂಗಳೂರು: ವಿದ್ಯುತ್ ಮಾರ್ಗಗಳ ನಿರ್ವಹಣೆ, ಹೊಸದಾಗಿ ಕೇಬಲ್ ಅಳವಡಿಕೆ ಸೇರಿದಂತೆ ಹಲವು ಕಾಮಗಾರಿಗಳನ್ನು ಬೆಸ್ಕಾಂ (BESCOM) ಆರಂಭಲಿದ್ದು, ಇಂದು ಜೂನ್ 27 ರಿಂದ ಜೂನ್ 29ರವರಗೆ ನಗರದ ಹಲವು ಬಡಾವಣೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ (Power Supply Problem) ವ್ಯತ್ಯಯ ಆಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ತಿಳಿಸಿದೆ. (ಜೂನ್ 27) ಬೆಂಗಳೂರು ದಕ್ಷಿಣ ವಲಯದ ಪ್ರದೇಶಗಳು, ಕೋರಮಂಗಲದ 3, 4, 5 ಮತ್ತು 6 ಬ್ಲಾಕ್ಗಳು, ಸಕ್ರಾ ಆಸ್ಪತ್ರೆ, ಔಟರ್ ರಿಂಗ್ರೋಡ್ನ ಸಲಾರ್‌ಪುರಿಯಾ ಸತ್ವ ಬೆಳಿಗ್ಗೆ 11ರಿಂದ ಮಧ್ಯಾಹ್ನ 2 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
ಇದನ್ನು ಓದಿ: ಕಾಶಿಯಾತ್ರೆಗೆ ಹೋಗುವ ಭಕ್ತರಿಗೆ ಸಹಾಯಧನ ನೀಡಲು ಮುಂದಾದ ರಾಜ್ಯ ಸರ್ಕಾರ, ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿರಬೇಕು!
ಪೂರ್ವ ವಲಯದಲ್ಲಿ ಹಳೇ ಬೈಯಪ್ಪನಹಳ್ಳಿ, ಕುಕ್ಸನ್ ರಸ್ತೆ, ಡೇವಿಸ್ ರಸ್ತೆ, ರಿಚರ್ಡ್ಸ್ ಪಾರ್ಕ್ ರಸ್ತೆ, ಆಯಿಲ್ ಮಿಲ್ ರಸ್ತೆ, ಸದಾಶಿವ ದೇವಸ್ಥಾನ ರಸ್ತೆ, ಕಾಮನಹಳ್ಳಿ ಮುಖ್ಯರಸ್ತೆ, ಕೆಎಚ್ ಬಿ ಕಾಲೋನಿ, ಹಚಿನ್ಸ್ ರಸ್ತೆ, ವೀಲರ್ ರಸ್ತೆ, ಬಾಣಸವಾಡಿ ರೈಲು ನಿಲ್ದಾಣ ರಸ್ತೆ, ಲಿಂಗರಾಜಪುರ, ಐಟಿಸಿ ಮುಖ್ಯರಸ್ತೆ, ಜೀವನಹಳ್ಳಿ ಮತ್ತು ಬಾಣಸವಾಡಿ ಮುಖ್ಯರಸ್ತೆ ಹಾಗೂ ಸುತ್ತಮುತ್ತಲು ಬೆಳಿಗ್ಗೆ 11ರಿಂದ ಸಂಜೆ 5ರವರೆಗೆ ವ್ಯತ್ಯಯವಾಗಲಿದೆ. ಪಶ್ಚಿಮ ವಲಯದಲ್ಲಿ ಬಿಎಂಟಿಸಿ ಬಸ್ ಡಿಪೋ, ಶಂಕರಪ್ಪ ಎಸ್ಟೇಟ್ ಸೇರಿದಂತೆ ಉತ್ತರ ವಲಯದಲ್ಲಿ ಇಸ್ರೋ ಲೇಔಟ್ ಮತ್ತು ನ್ಯೂ ಬಿಇಎಲ್ ರಸ್ತೆಯಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಕಡಿತಗೊಳ್ಳಲಿದೆ.
ಇಂದು (ಜೂನ್ 28) ಬೆಂಗಳೂರು ಪೂರ್ವ ವಲಯದ ವ್ಯಾಪ್ತಿಯ ಪ್ರದೇಶಗಳಲ್ಲಿ ಎಚ್‌ಆರ್‌ಬಿಆರ್ ಲೇಔಟ್ನ 2 ಮತ್ತು 3 ನೇ ಬ್ಲಾಕ್, ಕಾಮನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಮತ್ತು ಬಾಣಸವಾಡಿ ಪ್ರದೇಶಗಳಲ್ಲಿ ಬೆಳಿಗ್ಗೆ 11ರಿಂದ ಸಂಜೆ 5ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನು ಓದಿ: ಮಹತ್ವದ ನಿರ್ಧಾರಗಳ ಬಗ್ಗೆ ಚರ್ಚಿಸಲು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಜೋಡಿಗೆ ಬುಲಾವ್ ನೀಡಿದ ಹೈಕಮಾಂಡ್
ನಾಳೆ (ಬುಧವಾರ, ಜೂನ್ 29) ನಗರದ ದಕ್ಷಿಣ ವಲಯದಲ್ಲಿ ಕೋರಮಂಗಲ 2 ಬ್ಲಾಕ್, ಮಡಿವಾಳ ಟೋಟಲ್ ಮಾಲ್, ದವನಂ ಜ್ಯುವೆಲರ್ಸ್ ಕಟ್ಟಡ, ಮಡಿವಾಳ ಸಂತೆ, ಸಿದ್ಧಾರ್ಥ ಕಾಲೋನಿ, ಕೋರಮಂಗಲ 5 ಬ್ಲಾಕ್, ಇಂಡಸ್ಟ್ರಿಯಲ್ ಲೇಔಟ್ನಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 2 ಗಂಟೆವರೆಗೆ ವ್ಯತ್ಯಯವಾಗಲಿದೆ. ಸಿಎಂಆರ್ ರಸ್ತೆ, ಎಚ್‌ಆರ್‌ಬಿಆರ್ ಲೇಔಟ್ 3 ಬ್ಲಾಕ್, ರಾಮಯ್ಯ ಲೇಔಟ್, ಕರವಳ್ಳಿ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಸೇರಿದಂತೆ ಪೂರ್ವ ವಲಯದ ಕೆಲವು ಪ್ರದೇಶಗಳಲ್ಲಿ ಬೆಳಗ್ಗೆ 11ರಿಂದ ಸಂಜೆ 5.30ರವರೆಗೆ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಹೇಳಿದೆ.