Power Cut In Bengaluru: ಬೆಂಗಳೂರಿನ ಹಲವೆಡೆ ಇಂದು ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ? ಇಲ್ಲಿದೆ ವಿವರ

| Updated By: ರಮೇಶ್ ಬಿ. ಜವಳಗೇರಾ

Updated on: Oct 13, 2023 | 9:59 AM

Power Cut In Bengaluru: ಕರ್ನಾಟಕದಲ್ಲಿ ವಿದ್ಯುತ್ ಅಭಾವ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಲೋಡ್​ ಶೆಡ್ಡಿಂಗ್ ಶುರುವಾಗಿದ್ದು, ರೈತರು ಕಂಗಾಲಾಗಿದ್ದಾರೆ. ಇತ್ತ ಬೆಂಗಳೂರಿಗರಿಗೂ ವಿದ್ಯುತ್​ ಸಮಸ್ಯೆ ಉಂಟಾಗುತ್ತಿದೆ. ಹೌದು ಬೆಸ್ಕಾಂ ವಿವಿಧ ನಿರ್ವಹಣಾ ಕಾರ್ಯ ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ಅ.12ರಿಂದ ಅ.15ರ ವರೆಗೆ ಸಿಲಿಕಾನ್ ಸಿಟಿಯ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಹಾಗಾದ್ರೆ, ಇಂದು (ಅಕ್ಟೋಬರ್ 13) ಯಾವೆಲ್ಲ ಪ್ರದೇಶಗಳಲ್ಲಿ ವಿದ್ಯುತ್​ ಸಮಸ್ಯೆಯಾಗಲಿದೆ ಎನ್ನುವ ಮಾಹಿತಿ ಇಲ್ಲಿದೆ.

Power Cut In Bengaluru: ಬೆಂಗಳೂರಿನ ಹಲವೆಡೆ ಇಂದು ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ? ಇಲ್ಲಿದೆ ವಿವರ
ಪ್ರಾತಿನಿಧಕ ಚಿತ್ರ
Follow us on

ಬೆಂಗಳೂರು, (ಅಕ್ಟೋಬರ್ 13): ಬೆಂಗಳೂರಿನ (Bengaluru) ಹಲವೆಡೆ ಅಕ್ಟೋಬರ್ 12ರಿಂದ ನಾಲ್ಕು ದಿನಗಳ ಕಾಲ ವಿದ್ಯುತ್ ವ್ಯತ್ಯಯವಾಗಲಿದೆ .ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ (BESCOM) ವೆಬ್‌ಸೈಟ್‌ಯಲ್ಲಿ ಮಾಹಿತಿ ಪ್ರಕಟವಾಗಿದೆ. ಬೆಸ್ಕಾಂ ಮತ್ತು ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (KPTCL) ಸೇರಿದಂತೆ ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ನಿರ್ವಹಣಾ ಯೋಜನೆಗಳನ್ನು ಕೈಗೆತ್ತಿಕೊಂಡಿವೆ. ಈ ಹಿನ್ನೆಲೆಯಲ್ಲಿ ಅ.12ರಿಂದ ಅ.15ರ ವರೆಗೆ ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದ್ರೆ, ಇಂದು(ಅಕ್ಟೋಬರ್ 13) ಯಾವೆಲ್ಲ ಏರಿಯಾಗಳಲ್ಲಿ ವಿದ್ಯುತ್ ಸಮಸ್ಯೆ (Power Cut) ಇರಲಿದೆ ಎನ್ನುವ ವಿವರ ಈ ಕೆಳಗಿನಂತಿದೆ ನೊಡಿ.

ಇಂದು ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?

ಸರಸ್ವತಿ ನಗರ, ವಿನಾಯಕ ಲೇಔಟ್, ಕನಕನಗರ, ಗಂಗಾಧರ ಲೇಔಟ್, ಸೆಂಟ್ರಲ್ ಎಕ್ಸೈಸ್ ಲೇಔಟ್, ಕೆಜಿಎಸ್ ಲೇಔಟ್, ಶೋಭಾ ಆಸ್ಪತ್ರೆ, ಹರಿರಾಮ್ ಅಲಿದಾಸ್ ಲೇಔಟ್, ಎಸ್‌ಎಸ್ ಹೈಟೆಕ್ ಆಸ್ಪತ್ರೆ, ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಕಾಟವೀರನಹಳ್ಳಿ, ನವಣೆಬೋರನಹಳ್ಳಿ, ಅಜ್ಜಯ್ಯನಪ್ಪನಹಳ್ಳಿ, ಅಜ್ಜಯ್ಯನಪಾಲ್ ಬ್ಯಾಡರಹಳ್ಳಿ, ದಾಸರಹಳ್ಳಿ, ವೆಂಕಟಾಪುರ, ಸಾಲುಪರಹಳ್ಳಿ, ಸೀಬಿ ಅಗ್ರಹಾರ, ದೊಡ್ಡಸೀಬಿ, ದುರ್ಗದಹಳ್ಳಿ, ತಿಪ್ಪನಹಳ್ಳಿ, ಬೋರಸಂದ್ರ, ಕಲ್ಲಶೆಟ್ಟಿಹಳ್ಳಿ, ಯತ್ತಪ್ಪನಹಟ್ಟಿ, ಕಲಜ್ಜಿರೊಪ್ಪ, ಸೀಬಯ್ಯನಪಾಳ್ಯ, ಬಸರಿಹಳ್ಳಿ, ಹುಂಜನಾಳ್ ಮತ್ತು ಬ್ಯಾಡರಹಳ್ಳಿ.

ಇದನ್ನೂ ಓದಿ: ಕರ್ನಾಟಕದಲ್ಲಿ ವಿದ್ಯುತ್ ಲೋಡ್​ ಶೆಡ್ಡಿಂಗ್: ಕೊನೆಗೂ ಸತ್ಯ ಒಪ್ಪಿಕೊಂಡ ಡಿಕೆ ಶಿವಕುಮಾರ್

ಅ.14ರಂದು ಯಾವೆಲ್ಲ ನಗರಗಳಲ್ಲಿ ವಿದ್ಯುತ್ ಸಮಸ್ಯೆ?

ಎಸ್‌ಜೆಎಂ ನಗರ, ಎಸ್‌ಎಂಕೆ ನಗರ, ಬಾಬು ಜಗಜೀವನ ನಗರ, ದೇವರಾಜ್‌ ಅರಸ್‌ ಬಡಾವಣೆ, ವಿಜಯನಗರ ಬಡಾವಣೆ, ರಾಜೀವ್‌ ಗಾಂಧಿ ಬಡಾವಣೆ, ಎಸ್‌ಪಿ ಕಚೇರಿ, ಆರ್‌ಟಿಒ ಕಚೇರಿ, ಜ್ಯೋತಿನಗರ, ಶಂಕರಾನಂದ ಬಡಾವಣೆ, ಸಚಿನ್‌ ಲೇಔಟ್‌, ಗಂಗಮ್ಮ ಲೇಔಟ್‌, ಕಲ್ಲುಕೋಟೆ, ಪದವಿ ಕಾಲೇಜು ಸುತ್ತಮುತ್ತ, ನಾಗಾಜಿ ಗುಡೆನ್ಸಿ, ಪ್ರೆಸಿಡೆನ್ಸಿ, ಡೈರಿ ಸರ್ಕಲ್, ಫುಡ್ ಗೋಡೌನ್, ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಕಾಟವೀರನಹಳ್ಳಿ, ನವನೆಬೋರನಹಳ್ಳಿ, ಅಜ್ಜಯ್ಯನಪಾಳ್ಯ, ಎಲ್.ಎಚ್.ಪಾಳ್ಯ, ಬೋರಸಂದ್ರ, ತಿಪ್ಪನಹಳ್ಳಿ, ಬ್ಯಾಡರಹಳ್ಳಿ, ದಾಸರಹಳ್ಳಿ, ವೆಂಕಟಾಪುರ, ಸಾಲುಪರಹಳ್ಳಿ, ದೊಡ್ಡರಸಹಳ್ಳಿ, ದೊಡರಸ ಅಗ್ರಹಾರ, ತಿ. ಲಶೆಟ್ಟಿಹಳ್ಳಿ, ಯತ್ತಪ್ಪನಹಟ್ಟಿ, ಕಾಳಜ್ಜಿರೊಪ್ಪ, ಸೀಬಯ್ಯನಪಾಳ್ಯ, ಬಸರಿಹಳ್ಳಿ, ಹುಂಜನಾಳ್ ಮತ್ತು ಬ್ಯಾಡರಹಳ್ಳಿ.

ಅ. 15ರಂದು ಯಾವೆಲ್ಲ ಪ್ರದೇಶಗಳಲ್ಲಿ ವಿದ್ಯುತ್ ಕಡಿತ?

ಪ್ರೇಮ್ ನಗರ, ಶಂಕರಪ್ಪ ಇಂಡಸ್ಟ್ರಿಯಲ್ ಎಸ್ಟೇಟ್, ಯುನಾನಿ ಆಸ್ಪತ್ರೆ, ನಿರೀಕ್ಷಿತ ಭವನ, ಪಿ & ಟಿ ಲೇಔಟ್, ಸುಬ್ರಹ್ಮಣ್ಯ ನಗರ, ಲೋಕಿಕೆರೆ ರಸ್ತೆ, ಕೈಗಾರಿಕಾ ಪ್ರದೇಶ, ಜ್ಯೋತಿನಗರ, ಶಂಕರಾನಂದ ಬಡವಾಣೆ, ಸಚಿನ್ ಲೇಔಟ್, ಗಂಗಮ್ಮ ಲೇಔಟ್, ಕಲ್ಲುಕೋಟೆ, ಪದವಿ ಕಾಲೇಜು ಸುತ್ತಮುತ್ತ, ನಾಗಾಜಿ ಗುಡೆನ್ಸಿ, ಪ್ರೆಸಿಡೆನ್ಸಿ ಕಾಲೇಜು , ಆಹಾರ ಗೋದಾಮು, ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಕಾಟವೀರನಹಳ್ಳಿ, ನವನೆಬೋರನಹಳ್ಳಿ, ಅಜ್ಜಯ್ಯನಪಾಳ್ಯ, ಎಲ್.ಎಚ್.ಪಾಳ್ಯ, ಬೋರಸಂದ್ರ, ತಿಪ್ಪನಹಳ್ಳಿ, ಬ್ಯಾಡರಹಳ್ಳಿ, ದಾಸರಹಳ್ಳಿ, ವೆಂಕಟಾಪುರ, ಸಾಲುಪರಹಳ್ಳಿ, ಸೀಬಿ ಅಗ್ರಹಾರ, ದೊಡ್ಡಸಿ ಅಗ್ರಹಾರ, ಡಿ ತಿಗದಹಳ್ಳಿ, ದೊಡ್ಡಸಿಯನಹಳ್ಳಿ, ದೊಡ್ಡಸಿ, ಯತ್ತಪ್ಪನಹಟ್ಟಿ, ಕಾಳಜ್ಜಿರೊಪ್ಪ, ಸೀಬಯ್ಯನಪಾಳ್ಯ, ಬಸರಿಹಳ್ಳಿ, ಹುಂಜನಾಳ್ ಮತ್ತು ಬ್ಯಾಡರಹಳ್ಳಿ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ