Bangalore Power Cut: ಡಿ.16 ರಂದು ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ; ಎಲ್ಲೆಲ್ಲಿ? ಇಲ್ಲಿದೆ ವಿವರ

| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 15, 2023 | 8:33 PM

ಮಹಾನಗರ ಬೆಂಗಳೂರಿನ ಆಯ್ದ ಭಾಗಗಳಲ್ಲಿ ನಾಳೆ(ಡಿ.15) ವಿದ್ಯುತ್ ವ್ಯತ್ಯಯವಾಗಲಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM)ಯು, ಕೆ. ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾರ್ಯ ಕೈಗೊಂಡಿರುವ ಹಿನ್ನೆಲೆ ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ನಾಳೆ ಬೆಳಿಗ್ಗೆ 10:00 ಗಂಟೆಯಿಂದ ಸಾಯಂಕಾಲ 5:00 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ಅಡಚಣೆ ಆಗಲಿದೆ.

Bangalore Power Cut: ಡಿ.16 ರಂದು ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ; ಎಲ್ಲೆಲ್ಲಿ? ಇಲ್ಲಿದೆ ವಿವರ
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು, ಡಿ.15: ಮಹಾನಗರ ಬೆಂಗಳೂರಿನ ಆಯ್ದ ಭಾಗಗಳಲ್ಲಿ ನಾಳೆ(ಡಿ.15) ವಿದ್ಯುತ್ ವ್ಯತ್ಯಯವಾಗಲಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM)ಯು, ಕೆ. ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾರ್ಯ ಕೈಗೊಂಡಿರುವ ಹಿನ್ನೆಲೆ ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ನಾಳೆ ಬೆಳಿಗ್ಗೆ 10:00 ಗಂಟೆಯಿಂದ ಸಾಯಂಕಾಲ 5:00 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ಅಡಚಣೆ ಆಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ(ಬೆಸ್ಕಾಂ) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ ಎಂಬ ವಿವರ ಈ ಕೆಳಗಿನಂತಿದೆ.

ಎಲ್ಲೆಲ್ಲಿ ವಿದ್ಯುತ್​ ವ್ಯತ್ಯಯ?

ಬೆಂಗಳೂರು ನಗರದ ಮೈಸೂರು ಮುಖ್ಯರಸ್ತೆ, ಕೆಂಗೇರಿ, ಹರ್ಷ ಲೇಔಟ್, ಮೈಲಸಂದ್ರ, BDA ವೊಲ್ಗೆರೇಹಳ್ಳಿಯ ಎಲ್ಲಾ ಅಪಾರ್ಟ್ಮೆಂಟ್​ಗಳು, ಇಂದ್ರಪ್ರಸ್ಥ ಅಪಾರ್ಟ್ಮೆಂಟ್, R V ಇಂಜಿನಿಯರಿಂಗ್ ಕಾಲೇಜು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ:ಬೆಂಗಳೂರು: ವಿದ್ಯುತ್ ತಂತಿ ತಗುಲಿ ತಾಯಿ, ಮಗು ಸಾವು; ಸುಮೋಟೋ ಕೇಸ್ ದಾಖಲಿಸಿಕೊಂಡ ಲೋಕಾಯುಕ್ತ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ