ಅಕ್ರಮ ವಿದ್ಯುತ್ ಪಡೆದ ಪ್ರಕರಣ; ಹೆಚ್ಡಿ ಕುಮಾರಸ್ವಾಮಿಗೆ ಬಿತ್ತು ದಂಡ, ಎಷ್ಟು ಗೊತ್ತಾ?
ದೀಪಾವಳಿ ದೀಪಾಲಂಕಾರಕ್ಕಾಗಿ ಅನಧಿಕೃತವಾಗಿ ಬೀದಿ ದೀಪದ ಕಂಬದಿಂದ ನೇರವಾಗಿ ವಿದ್ಯುತ್ ಪಡೆದಿರುವ ಆರೋಪವನ್ನು ಕಾಂಗ್ರೆಸ್ ಮಾಡಿತ್ತು. ಇದಾದ ಬಳಿಕ ಜಯನಗರದ ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರ ಮನೆಗೆ ತೆರಳಿ ಪರಿಶೀಲನೆ ಮಾಡಿ, ಇದೀಗ ದಂಡ ವಿಧಿಸಿದ್ದಾರೆ.
ಬೆಂಗಳೂರು, ನ.16: ಬೆಂಗಳೂರಿನ ಜೆಪಿ ನಗರ(JP Nagara)ದಲ್ಲಿರುವ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಅವರ ನಿವಾಸಕ್ಕೆ ದೀಪಾವಳಿ ದೀಪಾಲಂಕಾರಕ್ಕಾಗಿ ಅನಧಿಕೃತವಾಗಿ ಬೀದಿ ದೀಪದ ಕಂಬದಿಂದ ನೇರವಾಗಿ ವಿದ್ಯುತ್ ಪಡೆದಿರುವ ಆರೋಪವನ್ನು ಕಾಂಗ್ರೆಸ್ ಮಾಡಿತ್ತು. ಇದಾದ ಬಳಿಕ ಜಯನಗರದ ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರ ಮನೆಗೆ ತೆರಳಿ ಪರಿಶೀಲನೆ ಮಾಡಿ, ಬಳಿಕ ಅವರ ವಿರುದ್ಧ ಎಫ್ಐಆರ್ ಕೂಡ ದಾಖಲಿಸಿದ್ದರು. ಇದೀಗ ಅಕ್ರಮ ವಿದ್ಯುತ್ ಬಳೆಕೆಯ ದಂಡವನ್ನು ಬೆಸ್ಕಾಂ ಇಲಾಖೆ ವಿಧಿಸಿದೆ.
ಮಾಜಿ ಸಿಎಂ HD ಕುಮಾರಸ್ವಾಮಿ ಅವರಿಗೆ ಬಿತ್ತು ದಂಡ
ಇನ್ನು ಈ ಕುರಿತು ಬೆಸ್ಕಾಂ ಬೆಸ್ಕಾಂ ಜಾಗೃತಾ ದಳದ ಡಿವೈಎಸ್ ಪಿ ಅನುಷ ನೇತೃತ್ವದಲ್ಲಿ ವಿದ್ಯುತ್ ಬಳಕೆ ಕೌಂಟಿಂಗ್ ಮಾಡಿ, 10 ನಿಮಿಷಕ್ಕೆ ಎಷ್ಟು ವಿದ್ಯುತ್ ಬಳಕೆ ಆಗುತ್ತದೆ ಎನ್ನುವುದನ್ನು ಲೆಕ್ಕ ಮಾಡಿದ್ದರು. ಇದರಿಂದ ಎರಡು ದಿನ ಎಷ್ಟು ಬಳಕೆ ಆಗಿದೆ ಎಂಬುದರ ಲೆಕ್ಕ ತೆಗೆದು, ನ.14 ರಂದು ಅಧಿಕಾರಿಗಳು ರಿಪೋರ್ಟ್ ನೀಡಿದ್ದರು. ಇದೀಗ ಬೆಸ್ಕಾಂ ಇಲಾಖೆ ಬರೊಬ್ಬರಿ 68 ಸಾವಿರ ದಂಡವನ್ನು ವಿಧಿಸಿದ್ದು, ಅದನ್ನು ಏಳು ದಿನಗಳೊಳಗಾಗಿ ಕಟ್ಟುವಂತೆ ಸೂಚಿಸಿದೆ.
ಇದನ್ನೂ ಓದಿ:ಮನೆ ದೀಪಾಲಂಕಾರಕ್ಕೆ ಅಕ್ರಮ ವಿದ್ಯುತ್ ಸಂಪರ್ಕ: ಸತ್ಯ ಒಪ್ಪಿಕೊಂಡ ಕುಮಾರಸ್ವಾಮಿ ಹೇಳಿದ್ದಿಷ್ಟು!
ಕಾಂಗ್ರೆಸ್ ಟ್ವೀಟ್ ಮಾಡಿದ್ದ ಬೆನ್ನಲ್ಲೆ ಹೆಚ್ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿ ‘ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದರು. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನವೆಂಬರ್ 13 ರ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ ಎಂದು ಹೇಳಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:19 pm, Thu, 16 November 23