AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಪಿಎ ಆಡಳಿತದಲ್ಲಿ ಬಾಂಬ್ ಸ್ಫೋಟ, ಮೋದಿ ಯುಗದಲ್ಲಿ ಬುಲೆಟ್ ಟ್ರೈನ್ ಭಾಗ್ಯ ಎಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಬೆಂಗಳೂರಿನ SMVT ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಉದ್ಘಾಟನಾ ಸಮಾರಂಭದಲ್ಲಿ ಪ್ರಹ್ಲಾದ್ ಜೋಶಿ ಭಾಷಣ ಮಾಡಿದ್ದಾರೆ. ಇದೇ ವೇಳೆ ತುಮಕೂರು, ದಾವಣಗೆರೆ, ಬೆಳಗಾವಿಗೆ 3ನೇ ಹೈಸ್ಪೀಡ್ ರೈಲು ಘೋಷಣೆ ಮಾಡಿರುವ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಜತೆಗೆ 2008ರಲ್ಲಿ ಅಂದಿನ ಯುಪಿಎ ಸರ್ಕಾರ ರೈಲ್ವೇ ಅಭಿವೃದ್ಧಿಗೆ ಕೇವಲ 700 ಕೋಟಿ ರೂ. ಕೊಟ್ಟಿತ್ತು. ಆಗಿನ ಸಚಿವ ಮುನಿಯಪ್ಪನವರು 'ಮೊದಲ ಬಾರಿಗೆ ಇಷ್ಟು ದೊಡ್ಡ ಮೊತ್ತ ನೀಡಲಾಗಿದೆ' ಎಂದು ದೊಡ್ಡ ಭಾಷಣ ಮಾಡಿದ್ದರು. 2014-15ರಲ್ಲಿ ರೈಲ್ವೇ ಬಜೆಟ್ ಕೇವಲ ಸಾವಿರಗಟ್ಟಲೆ ಕೋಟಿಯಲ್ಲಿತ್ತು. ಆದರೆ ಇಂದು ಪ್ರಧಾನಿ ಮೋದಿ ಹಾಗೂ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರ ನೇತೃತ್ವದಲ್ಲಿ ಬಜೆಟ್ ಲಕ್ಷ ಕೋಟಿ ದಾಟಿದೆ ಎಂದು ಹೇಳಿದ್ದಾರೆ.

ಯುಪಿಎ ಆಡಳಿತದಲ್ಲಿ ಬಾಂಬ್ ಸ್ಫೋಟ, ಮೋದಿ ಯುಗದಲ್ಲಿ ಬುಲೆಟ್ ಟ್ರೈನ್ ಭಾಗ್ಯ ಎಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಸಾಂದರ್ಭಿಕ ಚಿತ್ರ
ಕಿರಣ್​ ಸೂರ್ಯ
| Edited By: |

Updated on: Nov 01, 2026 | 3:05 PM

Share

ಬೆಂಗಳೂರು, ನ.1: “ಕೇಂದ್ರದಲ್ಲಿ ನರೇಂದ್ರ ಮೋದಿ ಅವರ ಆಡಳಿತಕ್ಕೂ ಮುಂಚೆ ದೇಶದಲ್ಲಿ ಬಾಂಬ್ ಮತ್ತು ಬುಲೆಟ್‌ಗಳು ಸ್ಫೋಟಗೊಳ್ಳುತ್ತಿದ್ದವು. ಆದರೆ, ಈಗ ದೇಶದಲ್ಲಿ ಅಭಿವೃದ್ಧಿಯ ಹೆಸರಿನಲ್ಲಿ ‘ಬುಲೆಟ್ ಟ್ರೈನ್’ ಮತ್ತು ಹೈಸ್ಪೀಡ್ ‘ವಂದೇ ಭಾರತ್’ ರೈಲುಗಳು ಓಡಾಡುತ್ತಿವೆ,” ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬಣ್ಣಿಸಿದ್ದಾರೆ.ಬೆಂಗಳೂರಿನ ಬೈಯ್ಯಪ್ಪನಹಳ್ಳಿಯ ಎಸ್‌ಎಂವಿಟಿ (SMVT) ರೈಲ್ವೇ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ನೂತನ ವಂದೇ ಭಾರತ್ ರೈಲು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ತುಮಕೂರು, ದಾವಣಗೆರೆ, ಬೆಳಗಾವಿಗೆ 3ನೇ ಹೈಸ್ಪೀಡ್ ರೈಲು ಯೋಜನೆ:

ಕಾರ್ಯಕ್ರಮದಲ್ಲಿ ರೈಲ್ವೇ ಮೂಲಸೌಕರ್ಯ ವಿಸ್ತರಣೆ ಕುರಿತು ಮಾತನಾಡಿದ ಪ್ರಹ್ಲಾದ್ ಜೋಶಿ, ರಾಜ್ಯಕ್ಕೆ 3ನೇ ಹೈಸ್ಪೀಡ್ ರೈಲು ಯೋಜನೆಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಈ ರೈಲು ಸೇವೆ ತುಮಕೂರು, ದಾವಣಗೆರೆ, ಹಾವೇರಿ, ರಾಣೆಬೆನ್ನೂರು ಹಾಗೂ ಬೆಳಗಾವಿ ನಗರಗಳಿಗೆ ಸಂಪರ್ಕ ಕಲ್ಪಿಸಲಿದೆ. ರೈಲ್ವೇ ಸುರಕ್ಷತೆಯಲ್ಲಿ ಭಾರತೀಯ ರೈಲ್ವೇ ತಂದಿರುವ ‘ಕವಚ್’ ತಂತ್ರಜ್ಞಾನ ಬಂದ ಬಳಿಕ ದೇಶದಲ್ಲಿ ರೈಲು ಅಪಘಾತಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

2008ರ ಬಜೆಟ್‌ ಪ್ರಸ್ತಾಪಿಸಿ ಯುಪಿಎ ಸರ್ಕಾರಕ್ಕೆ ಕೌಂಟರ್:

“2008ರಲ್ಲಿ ಅಂದಿನ ಯುಪಿಎ ಸರ್ಕಾರ ರೈಲ್ವೇ ಅಭಿವೃದ್ಧಿಗೆ ಕೇವಲ 700 ಕೋಟಿ ರೂ. ಕೊಟ್ಟಿತ್ತು. ಆಗಿನ ಸಚಿವ ಮುನಿಯಪ್ಪನವರು ‘ಮೊದಲ ಬಾರಿಗೆ ಇಷ್ಟು ದೊಡ್ಡ ಮೊತ್ತ ನೀಡಲಾಗಿದೆ’ ಎಂದು ದೊಡ್ಡ ಭಾಷಣ ಮಾಡಿದ್ದರು. 2014-15ರಲ್ಲಿ ರೈಲ್ವೇ ಬಜೆಟ್ ಕೇವಲ ಸಾವಿರಗಟ್ಟಲೆ ಕೋಟಿಯಲ್ಲಿತ್ತು. ಆದರೆ ಇಂದು ಪ್ರಧಾನಿ ಮೋದಿ ಹಾಗೂ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರ ನೇತೃತ್ವದಲ್ಲಿ ಬಜೆಟ್ ಲಕ್ಷ ಕೋಟಿ ದಾಟಿದೆ,” ಎಂದು ಹೋಲಿಕೆ ಮಾಡಿದರು. 2014-26ರ ಅವಧಿಯಲ್ಲಿ 172 ಮೆಗಾವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದಿಸುವ ಚಿಂತನೆಯಿದ್ದು, ಆ ಸಂಪೂರ್ಣ ಸೌರ ವಿದ್ಯುತ್ ಅನ್ನು ರೈಲ್ವೇ ಇಲಾಖೆಯ ಕಾರ್ಯಾಚರಣೆಗೆ ಬಳಸಿಕೊಳ್ಳಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ಗ್ರೀನ್ ಸಿಗ್ನಲ್: ಇಲ್ಲಿದೆ ಟಿಕೆಟ್ ದರ, ವೇಳಾಪಟ್ಟಿ ಮಾಹಿತಿ

ಸಚಿವ ಅಶ್ವಿನಿ ವೈಷ್ಣವ್ ಹಾಡಿ ಹೊಗಳಿದ ಜೋಶಿ:

“ಅಶ್ವಿನಿ ವೈಷ್ಣವ್ ಅವರು ನನಗೆ ಹಳೆಯ ಸ್ನೇಹಿತರು. ಕಲ್ಲಿದ್ದಲು, ಗಣಿ, ಶಿಕ್ಷಣ ಹಾಗೂ ತಂತ್ರಜ್ಞಾನದ ಬದಲಾವಣೆಗಳಲ್ಲಿ ಅವರು ನನಗೆ ಪ್ರಮುಖ ಸಲಹೆಗಳನ್ನು ನೀಡುತ್ತಿದ್ದಾರೆ. ಜಗತ್ತಿಗೆ ಮೊಬೈಲ್ ಸಪ್ಲೈ ಮಾಡುವ ಹಂತಕ್ಕೆ ಭಾರತದ ಇನ್‌ಫ್ರಾಸ್ಟ್ರಕ್ಚರ್ ಬೆಳೆದಿದೆ,” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. “ಇತ್ತೀಚೆಗೆ ವಿಪಕ್ಷಗಳು ಮಾಕ್ ಸನ್ (Mock Son), ಮಾಕ್ ಪ್ರಧಾನಿ, ಮಾಕ್ ಸ್ಪೀಕರ್ ಮಾಡುತ್ತಿದ್ದಾರೆ,” ಎಂದು ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರ ನಡೆಯನ್ನು ಪ್ರಹ್ಲಾದ್ ಜೋಶಿ ಇದೇ ವೇಳೆ ತೀವ್ರವಾಗಿ ಅಣುಕಿಸಿದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಿರಣ್​ ಸೂರ್ಯ
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ: ರ‍್ಯಾಲಿಯಲ್ಲಿ ಘಟಾನುಘಟಿ ನಾಯಕರು ಭಾಗಿ
ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ: ರ‍್ಯಾಲಿಯಲ್ಲಿ ಘಟಾನುಘಟಿ ನಾಯಕರು ಭಾಗಿ
ಹಿರೇಮಗಳೂರು ಕೋದಂಡರಾಮ ದೇಗುಲ: ನಿತ್ಯವೂ ಕನ್ನಡದಲ್ಲೇ ಪೂಜೆ, ಮಂತ್ರಘೋಷ!
ಹಿರೇಮಗಳೂರು ಕೋದಂಡರಾಮ ದೇಗುಲ: ನಿತ್ಯವೂ ಕನ್ನಡದಲ್ಲೇ ಪೂಜೆ, ಮಂತ್ರಘೋಷ!
ದೆಹಲಿಯಲ್ಲಿ ಕನ್ನಡ ರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ
ದೆಹಲಿಯಲ್ಲಿ ಕನ್ನಡ ರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ
ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಹರಿದು ಬಂದ ಭಕ್ತರು
ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಹರಿದು ಬಂದ ಭಕ್ತರು
ಮೈಸೂರು:ಕನ್ನಡಾಂಬೆ ಭುವನೇಶ್ವರಿ ದೇಗುಲದ ಬಗ್ಗೆ ನಿಮಗೆಷ್ಟು ಗೊತ್ತು?
ಮೈಸೂರು:ಕನ್ನಡಾಂಬೆ ಭುವನೇಶ್ವರಿ ದೇಗುಲದ ಬಗ್ಗೆ ನಿಮಗೆಷ್ಟು ಗೊತ್ತು?
ಲವ್ ಮಾಡೋದು ಬಿಟ್ಟು ಆಟವಾಡು: ಸುದೀಪ್ ಎದುರಲ್ಲೇ ಸೌಂದರ್ಯಾಗೆ ಕಿರಣ್ ಟೀಕೆ
ಲವ್ ಮಾಡೋದು ಬಿಟ್ಟು ಆಟವಾಡು: ಸುದೀಪ್ ಎದುರಲ್ಲೇ ಸೌಂದರ್ಯಾಗೆ ಕಿರಣ್ ಟೀಕೆ
ಬೆಳಗಾವಿಯಲ್ಲಿ ಕಳೆಗಟ್ಟಿದ ಕನ್ನಡ ಹಬ್ಬ
ಬೆಳಗಾವಿಯಲ್ಲಿ ಕಳೆಗಟ್ಟಿದ ಕನ್ನಡ ಹಬ್ಬ
ಇಂದು ಈ ರಾಶಿಯವರಿಗೆ ಗಜಕೇಸರಿ ಯೋಗ!
ಇಂದು ಈ ರಾಶಿಯವರಿಗೆ ಗಜಕೇಸರಿ ಯೋಗ!
ಗಾಂಧಿ ಹತ್ಯೆಯ ನಾಟಕದ ವೇಳೆ ನಿರ್ದೇಶಕರಿಗೆ ಮಸಿ ಬಳಿದ ಕೈ ಕಾರ್ಯಕರ್ತರು
ಗಾಂಧಿ ಹತ್ಯೆಯ ನಾಟಕದ ವೇಳೆ ನಿರ್ದೇಶಕರಿಗೆ ಮಸಿ ಬಳಿದ ಕೈ ಕಾರ್ಯಕರ್ತರು
ಉತ್ತರ ಭಾರತದ ಮೊದಲ ಬುಲೆಟ್ ಟ್ರೈನ್ ಕಾರಿಡಾರ್‌ಗೆ ಪ್ರಧಾನಿ ಮೋದಿ ಒಪ್ಪಿಗೆ
ಉತ್ತರ ಭಾರತದ ಮೊದಲ ಬುಲೆಟ್ ಟ್ರೈನ್ ಕಾರಿಡಾರ್‌ಗೆ ಪ್ರಧಾನಿ ಮೋದಿ ಒಪ್ಪಿಗೆ